ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿಯಾಗಿ ಸರಣಿ ಸಭೆಗಳನ್ನು ನಡೆಸಿದರು.
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಸಭೆಯನ್ನು ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಸಲ್ಮಾ ಫಾಹಿಮ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ವಿ ಪ್ರಸಾದ್, ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಸಾರಿಗೆ ಇಲಾಖೆಯ ಆಯುಕ್ತರಾದ ಶ್ರೀ ಯೋಗೇಶ್, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಸಾರಿಗೆ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ಸಭೆ
ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ಸಚಿವ ಸಂತೋಷ್ ಲಾಡ್ ನಡೆಸಿದರು.
ಇದನ್ನೂ ಓದಿ : ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್ ನ್ಯೂಸ್..!
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಸಲ್ಮಾ ಫಾಹಿಮ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಮಂಜುಳಾ, ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಆರ್ಥಿಕ ಇಲಾಖೆಯ ಅಧಿಕಾರಿಗಳು, ಗಿಗ್ ಕಾರ್ಮಿಕರ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
ಹೋಲ್‌ಸೇಲ್ ಕ್ಲಾತ್ ಮರ್ಚೆಂಟ್ಸ್ ಅಸೋಸಿಯೇಷನ್ ಸಭೆ..
ದಿ ಬೆಂಗಳೂರು ಹೋಲ್ ಸೇಲ್ ಕ್ಲಾತ್ ಮರ್ಚೆಂಟ್ಸ್ ಅಸೋಸಿಯೇಷನ್ ಸದಸ್ಯರೊಂದಿಗೆ ಸಮಸ್ಯೆಗಳನ್ನು ಬಗೆಹರಿಸಲು ಸಭೆಯನ್ನು ಸಚಿವ ಲಾಡ್ ಅವರು ನಡೆಸಿದರು.
ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ಸಲ್ಮಾ ಫಾಹಿಮ್, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್ ಮತ್ತು ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಉಪ ಕಾರ್ಮಿಕ ಆಯುಕ್ತರು ಹಾಗೂ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.






