• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
June 20, 2025
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ

ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ADVERTISEMENT

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಮೈಸೂರು ಹಾಗೂ ಧಾರವಾಡದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತೀಕರಿಸಿದ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ViralAudio: ಸಿದ್ದು ಸರ್ಕಾರ ಪತನಕ್ಕೆ ಜಮೀರೇ ಕಾರಣ ಆಗ್ತಾರಾ..? ವಸತಿ ಇಲಾಖೆಯಲ್ಲಿ ದೊಡ್ಡ ಭ್ರಷ್ಟಾಚಾರ..!

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉತ್ತಮ ಕೌಶಲ್ಯ ದೊರೆತರೆ ಅವರು, ತಮ್ಮ ಕೆಲಸಗಳನ್ನು ಸುಲಭವಾಗಿ ಮಾಡುವುದಲ್ಲದೆ ಗುಣಮಟ್ಟದಲ್ಲಿ ಮಾಡಬಲ್ಲರು. ಕೌಶಲಕ್ಕೆ ಇರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ಬೇರೆ ಬೇರೆ ಕೌಶಲಗಳ ಅಗತ್ಯ ಮತ್ತು ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಉನ್ನತೀಕರಿಸಿದ ಕೌಶಲ್ಯದ ಪ್ರಾಮುಖ್ಯತೆ ಮನಗಂಡು ಕೇಂದ್ರಗಳನ್ನು ಸ್ಥಾಪಿಸಲಿದೆ. ಈ ಪ್ರಯತ್ನಕ್ಕೆ ಉದ್ಯಮಿಗಳು, ಕೈಗಾರಿಕೆಗಳ ಮುಖ್ಯಸ್ಥರು ಆಸಕ್ತಿ ತೋರಿ ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಕಟ್ಟಡ ಕಾರ್ಮಿಕರಿಗೆ ತರಬೇತಿ ಪಡೆದ ಕೌಶಲ್ಯ ಇದ್ದರೆ ಅವರು ನಿರುದ್ಯೋಗಿಗಳಾಗುವ ಪ್ರಮೆಯವೇ ಬರುವುದಿಲ್ಲ. ಒಳ್ಳೆಯ ಪ್ರಮಾಣಪತ್ರ ಇದ್ದರೆ ವಿದೇಶಗಳಲ್ಲೂ ಉದ್ಯೋಗ ಪಡೆಯಬಹುದು. ಕಟ್ಟಡ ಕಾರ್ಮಿಕರ ಮಕ್ಕಳು ಕಟ್ಟಡ ಕಾರ್ಮಿಕರೇ ಆಗದೇ ಒಳ್ಳೆಯ ಕೌಶಲ ಪಡೆದು ವೃತ್ತಿ ಬದುಕಿನಲ್ಲಿ ಯಶಸ್ಸು ಸಾಧಿಸಬಹುದು ಎಂದರು.

ಯಾವುದೊ ಒಂದು ಪದವಿ ಪಡೆದಾಕ್ಷಣ ಕೆಲಸ ಸಿಗಲೇಬೇಕು ಎಂದೇನಿಲ್ಲ. ಕೆಲಸ ಸಿಗುವುದು ಅಷ್ಟು ಸುಲಭವೂ ಅಲ್ಲ. ಅವರ ಶಿಕ್ಷಣಕ್ಕೆ ಸರಿಯಾದ ಕೌಶಲ ಇದ್ದರೆ ಅವರಿಗೆ ಕೆಲಸ ಸಿಗುತ್ತದೆ. ಅಂಕಗಳ ಬಗ್ಗೆ ತಲೆಕೆಡಿಸಿಕೊಳ್ಳದೇ ಕೌಶಲ್ಯದ ಬಗ್ಗೆ ಯೋಚಿಸಿದರೆ ಅನುಕೂಲ. ಈ ಕೌಶಲ ನೀಡಲು ಸರ್ಕಾರ ಸದಾ ಬದ್ಧವಿದೆ ಎಂದು ವಿವರಿಸಿದರು.

ನಿರ್ಮಾಣದ ಕಾರ್ಯವ್ಯಾಪ್ತಿ ದೊಡ್ಡದಿದೆ. ಸಾಮಾನ್ಯ ಕಟ್ಟಡ ನಿರ್ಮಾಣದಿಂದ ಹಿಡಿದು ದೊಡ್ಡ ದೊಡ್ಡ ಅಣೆಕಟ್ಟುಗಳವರೆಗೆ ಸಾಕಷ್ಟು ಉದ್ಯೋಗಾವಕಾಶಗಳು ಸಿಗುತ್ತವೆ. ಆದರೆ ಕೌಶಲ ಹೊಂದಿದ್ದರೆ ಈ ಕೆಲಸಗಳ ಅವಕಾಶಗಳು ಇನ್ನಷ್ಟು ದೊರೆಯುತ್ತವೆ. ಕೌಶಲ ಕೇಂದ್ರಗಳನ್ನು ಎಲ್ಲರ ಸಲಹೆ, ಅಭಿಪ್ರಾಯ ಪಡೆದು ಆರಂಭಿಸಲಾಗುವುದು ಎಂದರು.

ಕಾರ್ಯಾಗಾರದಲ್ಲಿ ಹಾಜರಿದ್ದ ಹಲವರು ಕಾರ್ಮಿಕರ ಅನುಕೂಲಕ್ಕಾಗಿ ಏನೆಲ್ಲ ಸೌಲಭ್ಯಗಳನ್ನು ಒದಗಿಸಬಹುದು ಎಂಬ ಬಗ್ಗೆ ಸಲಹೆಗಳನ್ನು ನೀಡಿದರು.

ಈ ಕಾರ್ಯಾಗಾರದಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಡಿ ಭಾರತಿ, ಅಪರ ಕಾರ್ಮಿಕ ಆಯುಕ್ತರಾದ ಶ್ರೀ ರವಿ ಕುಮಾರ್, ಡಾ. ಮಂಜುನಾಥ್, ಜಂಟಿ ಕಾರ್ಯದರ್ಶಿಗಳಾದ ಸಂಗಪ್ಪ ಉಪಾಸೆ, ಉದ್ಯೋಗದಾತರ ಪ್ರತಿನಿಧಿಗಳು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

Tags: minister santosh ladsanthosh ladSantosh Ladsantosh lad ballarysantosh lad congresssantosh lad in suvarna newssantosh lad interviewsantosh lad interview in suvarna newssantosh lad latest newssantosh lad ministersantosh lad mlasantosh lad newssantosh lad on modisantosh lad on pm modisantosh lad slams modisantosh lad speechsantosh lad today newssantosh lad vs pm modisantosh lad with ajit
Previous Post

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

Next Post

ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ : ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ : ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada