• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸ್ವಿಸ್‌ ವ್ಯವಹಾರ ನಿಯೋಗದೊಂದಿಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
April 12, 2025
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು, ಏಪ್ರಿಲ್‌ 10: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಸ್ವಿಟ್ಜರ್ಲೆಂಡ್ ನ ವ್ಯವಹಾರ ನಿಯೋಗದ ಸದಸ್ಯರೊಂದಿಗೆ ಔತಣಕೂಟದೊಂದಿಗೆ ಸಭೆ ನಡೆಸಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ADVERTISEMENT

ಅಂತರರಾಷ್ಟ್ರೀಯ ಪಾಲುದಾರಿಕೆಯಲ್ಲಿ ಕರ್ನಾಟಕದ ಸಂಭಾವ್ಯ ಸಹಯೋಗ, ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದರು. ವಿಶೇಷವಾಗಿ ಮೂಲಸೌಕರ್ಯ ಮತ್ತು ಸುಸ್ಥಿರ ಸಾರಿಗೆ ಕ್ಷೇತ್ರಗಳಲ್ಲಿ ಕೈಗೊಳ್ಳಬಹುದಾದ ಸಹಯೋಗದ ಬಗ್ಗೆ ನಿಯೋಗದ ಸದಸ್ಯರು ಮಾತುಕತೆ ನಡೆಸಿದರು. ಕರ್ನಾಟಕವು ಜಾಗತಿಕ ಪಾಲುದಾರಿಕೆಯಲ್ಲಿ ಆಸಕ್ತಿ ಹೊಂದಿದ್ದು, ಈ ಸಂಬಂಧ ಸೃಷ್ಟಿಸಬಹುದಾದ ಅವಕಾಶಗಳ ಬಗ್ಗೆಯೂ ಚರ್ಚೆಯಾಯಿತು.

ಈ ಸಭೆಯಲ್ಲಿ ಸ್ವಿಟ್ಜರ್ಲೆಂಡ್ ನ ಹೆಸ್‌ (HESS) ಮೊಬಿಲಿಟಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಲೆಕ್ಸ್‌ ನಾಫ್‌, ಹೆಸ್‌ ಇಂಡಿಯಾದ ಸಿಇಒ ಕಿಶೋರ್‌ ಮತ್ತು ಎಸ್‌ಎಸ್‌ಬಿ ಇನ್ಫ್ರಾದ ನಿರ್ದೇಶಕ ಬುರಾಕ್‌ ಸೆನ್ಸರ್‌ ನಿಯೋಗದಲ್ಲಿದ್ದರು. ಸ್ವಾರ್ಟ್‌, ಸ್ವಚ್ಛ ಮತ್ತು ಮುಂದಿನ ಭವಿಷ್ಯಕ್ಕೆ ತಕ್ಕುದಾದ ಮೂಲಸೌಕರ್ಯವನ್ನು ಸೃಷ್ಟಿಸುವ ಬದ್ಧತೆಯ ಬಗ್ಗೆ ಮಾತುಕತೆ ನಡೆಸಿದರು.

ಸ್ವಿಟ್ಜರ್‌ಲ್ಯಾಂಡ್‌ನ ಎಸ್‌ಎಸ್‌ಬಿ ಇನ್ಫ್ರಾ , ಹೈ-ಸ್ಪೀಡ್ ರೈಲು, ಜಲಾಶಯಗಳು, ಪರ್ಯಾಯ ಇಂಧನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪ್ರಮುಖ ಕಂಪನಿಯಾಗಿದೆ.

1882 ರಲ್ಲಿ ಆರಂಭವಾದ ಹೆಸ್‌, ಟ್ರಾಲಿ ಬಸ್‌, ಎಲೆಕ್ಟ್ರಿಕ್ ಬಸ್‌ಗಳಲ್ಲಿ ಅನ್ವೇಷಣೆಗೆ ಹೆಸರುವಾಸಿಯಾಗಿದೆ. ಆಧುನಿಕ ದಿನಗಳಲ್ಲಿ ನಗರಗಳಲ್ಲಿನ ಸುಸ್ಥಿರ ಸಾರಿಗೆ ಸಮಸ್ಯೆಗಳಿಗೆ ಅತ್ಯಾಧುನಿಕ ಪರಿಹಾರವನ್ನು ಒದಗಿಸುವಲ್ಲಿ ಹೆಸರು ಪಡೆದಿದೆ.

ಹುಬ್ಬಳ್ಳಿ ಮತ್ತು ಧಾರವಾಡ ನಗರಗಳ ನಡುವೆ ಲೈಟ್‌ ಟ್ರಾಮ್‌ ಸಾರಿಗೆ ವ್ಯವಸ್ಥೆ ಆರಂಭಿಸುವ ನಿಟ್ಟಿನಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ಆಸಕ್ತಿ ಹೊಂದಿದ್ದು, ಸ್ವಿಟ್ಜರ್‌ ಲ್ಯಾಂಡ್‌ನಲ್ಲಿ ಲೈಟ್‌ ಟ್ರಾಮ್‌ನ ಸಂಚರಿಸಿ ಕಾರ್ಯ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಿದ್ದರು.

ಭವಿಷ್ಯದಲ್ಲಿ ಅವಳಿ ನಗರಗಳ ನಡುವೆ ಪ್ರಯಾಣಿಸುವ ಜನರನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರ ಅನುಕೂಲವನ್ನು ಗುರಿಯಾಗಿರಿಸಿಕೊಂಡು ಪ್ರಯಾಣಿಕ ಸ್ನೇಹಿ ಅತ್ಯಾಧುನಿಕ ಸಾರಿಗೆ ವ್ಯವಸ್ಥೆ ಅಳವಡಿಸುವುದು ಸಚಿವ ಲಾಡ್‌ ಅವರ ಚಿಂತನೆಯಾಗಿದೆ.

Tags: karnataka labour ministerLabour MInisterlabour minister santosh ladlabour minister santosh lad's fitness secretMinisterminister of labour departmentMinister Santhosh Ladminister santosh ladSantosh Ladsantosh lad in suvarna newssantosh lad interviewsantosh lad interview in suvarna newssantosh lad latest newssantosh lad newssantosh lad speechsantosh lad statussantosh lad videosantosh lad visit hospital
Previous Post

ಮೂರನೇ ವಾರಕ್ಕೆ ಕಾಲಿಟ್ಟ “BAD” ಚಿತ್ರ .

Next Post

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada