ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಿಸಿ ನಾಲ್ವರ ಹತ್ಯೆ ಮಾಡಿದ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಜಾನೀನನ್ನು ರದ್ದು ಕುರಿತ ಅರ್ಜಿ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಕಟಿಸಲಿದೆ.
ಮುಖ್ಯ ನ್ಯಾಯಮೂರ್ತಿ ಸಿಜೆ ರಮಣ ನೇತೃತ್ವದ ಪೀಠ, ಸೋಮವಾರ 10:30ಕ್ಕೆ ತೀರ್ಪನ್ನು ನೀಡಲಿದೆ. ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸುವಂತೆ ರೈತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಎಪ್ರಿಲ್ 4ರಂದು ಕಾಯ್ದಿರಿಸಿತ್ತು.
ಆಶಿಶ್ ಮಿಶ್ರಾಗೆ ಜಾನೀನು ಮಂಜೂರು ಮಾಡಿರುವ ಕುರಿತು ಅಲಹಾಬಾದ್ ಹೈಕೋರ್ಟ್ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹಲವು ಪ್ರಶ್ನೆಗಳನ್ನು ಎತ್ತಿತು.