ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ವರು ರೈತರ ಸಾವಿಗೆ ಕಾರಣರಾಗಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾನ ಪುತ್ರ ಆಶಿಶ್ ಮಿಶ್ರಾನಿಗೆ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದ್ದು ಅವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಪೊಲೀಸರು ಆಶಿಶ್ ನನ್ನು ಕಸ್ಟಡಿಗೆ ತೆಗೆದುಕೊಂಡಾಗ ಆರೋಪಿಯು ತೀವ್ರ ಜ್ವರದಿಂದ ಬಳಲುತ್ತಿದ್ದನ್ನು. ಆಶಿಶ್ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು.
ವರದಿಯಲ್ಲಿ ಆಶಿಶ್ಗೆ ಡೆಂಗ್ಯೂ ಸೋಂಕು ಇರುವುದು ದೃಡಪಟ್ಟಿದೆ. ಸುದ್ದಿಗಳ ಪ್ರಕಾರ ಆಶಿಶ್ ಮಿಶ್ರಾನನ್ನು ಹೆಚ್ಚನ ಚಿಕಿತ್ಸೆಗಾಗಿ ಜೈಲ್ಲಿನ ಆಸ್ಪತ್ರೆಯಲ್ಲೇ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ರೈತರ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ರೈತರು, ಸ್ಥಳೀಯ ಪತ್ರಕರ್ತ ಸೇರಿದಂತೆ ಒಟ್ಟು 8 ಜನರು ಹಿಂಸಾಚಾರದಲ್ಲಿ ಮೃತಪಟ್ಟಿದ್ದರು. ಘಟನೆ ನಡೆದ ಸಂದರ್ಭದಲ್ಲಿ ತೆಗೆದಿರುವ ವಿಡಿಯೋದಲ್ಲಿ ಆಶಿಶ್ ಮಿಶ್ರಾ ವಾಹನದಿಂದ ಇಳಿದು ಒಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದ್ದು ಮುಖ್ಯ ಆರೋಪಿಯನ್ನು ಬಂಧಿಸಿ ತನಿಖೆಯನ್ನು ನಡೆಸಲಾಗುತ್ತಿದೆ.
ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೆ ಮೂವರನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.