ಕಳೆದ ವರ್ಷ ಅಕ್ಟೋಬರ್ 3ರಂದು ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ಮೂವರು ರೈತರು ಹಾಗೂ ಓರ್ವ ಪತ್ರಕರ್ತನ ಸಾವಿಗೆ ಕಾರಣನಾಗಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಉತ್ತರಪ್ರದೇಶದಲ್ಲಿ ಚುನಾವಣೆ ದಿನಾಂಕ ಹತ್ತಿರವಾಗುತ್ತಿರುವ ಬೆನ್ನಲ್ಲೇ ಪ್ರಮುಖ ಆರೋಪಿಗೆ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿರುವುದು ಬಿಜೆಪಿಯ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನ ಕಾದು ನೋಡಬೇಕಿದೆ.