ಕೇಂದ್ರ ಸಚಿವ ಅಜಯ್ ಮಿಶ್ರಾ ಅವರು ಸ್ಥಳೀಯ ರೈತರಿಗೆ ಬೆದರಿಕೆ ಹಾಕದಿದ್ದರೆ ಲಖೀಂಪುರ ಖೇರಿ ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಅಭಿಪ್ರಾಯ ಪಟ್ಟಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ನೀಡಲು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಸೋಮವಾರ ನಿರಾಕರಿಸಿದೆ. ಮೇ 25 ರೊಳಗೆ ಅರ್ಜಿಯ ಬಗ್ಗೆ ತನ್ನ ಪರ ಹಾಜರುಪಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ಸೆಪ್ಟೆಂಬರ್ 25 ರಂದು, ಅಜಯ್ ಕುಮಾರ್ ಮಿಶ್ರಾ ಅವರು ರೈತರಿಗೆ, “ಶಿಸ್ತು” ಕುರಿತು ಮಾತನಾಡಿದ್ದಾರೆ. “ನಿಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಿ ಇಲ್ಲದಿದ್ದರೆ ನಾವು ಅವುಗಳನ್ನು ಸರಿಪಡಿಸುತ್ತೇವೆ” ಎಂದು ಹೇಳಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ವೀಡಿಯೋ ತುಣುಕಿನ ಒಂದು ಭಾಗವನ್ನು ಮಾತ್ರ ಮಾಧ್ಯಮಗಳು ಪ್ಲೇ ಮಾಡಿದ್ದರಿಂದ ತಮ್ಮನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ ಎಂದು ಮಿಶ್ರಾ ಹೇಳಿಕೊಂಡಿದ್ದರು ಎಂದು ದಿ ಸ್ಕ್ರಾಲ್ ವರದಿ ಮಾಡಿದೆ.
ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ. ಪ್ರತಿಭಟನೆಯ ವೇಳೆ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ವಾಹನವು ನಾಲ್ವರು ರೈತರು ಸೇರಿದಂತೆ ಎಂಟು ಜನರ ಮೇಲೆ ಹರಿದಿದೆ ಎಂದು ರೈತ ಸಂಘಟನೆಗಳು ಹೇಳಿವೆ.
ಏಪ್ರಿಲ್ 25 ರಂದು, ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಮಿಶ್ರಾ ಲಖಿಂಪುರ ಖೇರಿಯ ಸ್ಥಳೀಯ ನ್ಯಾಯಾಲಯದಲ್ಲಿ ಶರಣಾದರು. ಅವರ ಜಾಮೀನು ರದ್ದುಗೊಳಿಸುವಾಗ, ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ಪರಿಶೀಲಿಸುವಂತೆ ಹೈಕೋರ್ಟ್‌ಗೆ ಕೇಳಿತ್ತು. ಈ ಕುರಿತು ಚಿವಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಆಶಿಶ್ ಮಿಶ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.