ಬೆಂಗಳೂರು: ಏ.೧೪: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಲಕ್ಷ್ಮಣ್ ಸವದಿ, ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳು ಸ್ಪಷ್ಟವಾಗಿಕಂಡು ಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರನ್ನ ಬೆಂಗಳೂರಿನಲ್ಲಿ ಭೇಟಿ ಮಾಡಿದ ಲಕ್ಷ್ಮಣ ಸವದಿ, ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಆದರೆ ಅಧೀಕೃತವಾಗಿ ಯಾವಾಗ ಕಾಂಗ್ರೆಸ್ ಸೇರುತ್ತಾರೆ ಎಂದು ಇನ್ನು ಹೇಳಿಲ್ಲ. ಆದ್ರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುವುದ ಫಿಕ್ಸ್ ಆಗಿದೆ. ಇಂದು ಸವದಿ ಬೆಂಗಳೂರಿಗೆ ಬರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶೇಷ ವಿಮಾನವನ್ನು ಬುಕ್ ಮಾಡಿದ್ದು, ವಿಶೇಷ ವಿಮಾನದ ಟಿಕೆಟ್ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿದೆ ಎಂದು ಹೇಳಲಾಗುತ್ತಿದೆ.