• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮೀ ದುಡ್ಡಿನಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
August 25, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ದುಡ್ಡಿನಿಂದ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ಅಜ್ಜಿ ಅಕ್ಕಾತಾಯಿ ಲಂಗೋಟಿ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ್ದಾರೆ.

ADVERTISEMENT

ಸಚಿವೆ ನೀಡಿದ್ದ ರೇಷ್ಮೆ ಸೀರೆಯನ್ನು ಅಜ್ಜಿಗೆ ನೀಡಿ ಅಧಿಕಾರಿಗಳು ಸನ್ಮಾನಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವ ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿದ್ದರಾಮಯ್ಯನವರ ಶ್ರೇಯಸ್ಸಿಗಾಗಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿ, ಐದು ಜನ ಮುತ್ತೈದೆಯರಿಗೆ ಉಡಿ ತುಂಬಿರುವುದು ಗೃಹಲಕ್ಷ್ಮಿ ಯೋಜನೆಯ ಸಾರ್ಥಕ ಕ್ಷಣಕ್ಕೆ ಮತ್ತೊಂದು ಉದಾಹರಣೆ. ಇಂದು ಈ ತಾಯಿಯ ಜೊತೆ ಮಾತನಾಡಿ, ಅವರನ್ನು ಅಭಿನಂದಿಸಿ, ಗೌರವಿಸಿದ್ದೇನೆ ಎಂದು ತಿಳಿಸಿದ್ದಾರೆ.

ವೃದ್ಧೆಗೆ ಸಚಿವೆ ಹೆಬ್ಬಾಳ್ಕರ್ ಅಭಿನಂದನೆ.

ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ನೀಡುತ್ತಿರುವ ‘ಗೃಹಲಕ್ಷ್ಮೀ ಯೋಜನೆ ‘ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿರುವ ಅಜ್ಜಿಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ‘ಗೃಹಲಕ್ಷ್ಮೀ’ ಜಾರಿಗೆ ತಂದಿದ್ದು ಸಾರ್ಥಕವಾಗುತ್ತಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹಬ್ಬದ ಊಟ ಹಾಕಿಸಿದ್ದಾರೆ. ಅಜ್ಜಿಯ ಈ ನಡೆಗೆ ರಾಜ್ಯದೆಲ್ಲೆಡೆಯಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಅಜ್ಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಈಗ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದಿ, ನಿನ್ನ ಮಗಳಾದ ನನಗೆ ಯಾವಾಗ ಊಟ ಹಾಕಿಸುತ್ತೀ ಎನ್ನುವ ಸಚಿವರ ಪ್ರಶ್ನೆಗೆ, ಜರೂರೇ ಬಾ ನಿನಗೂ ಊಟ ಹಾಕಿಸ್ತೀನಿ, ನೀನೇ ನಮಗೆಲ್ಲ ಗೃಹಲಕ್ಷ್ಮೀ ಹಣ ಕೊಡುವ ಮನೆ ಮಗಳು.. ನಿನಗೆ ಇಲ್ಲ ಎನ್ನಲಾಗುವುದೇ ಎಂದು ಅಜ್ಜಿ ಹೇಳಿದ್ದಾರೆ. ಅಜ್ಜಿ ಮಾತುಗಳಿಂದ ಬಹಳ ಸಂತಸಗೊಂಡ ಸಚಿವರು, ನಿನಗೊಂದು ರೇಷ್ಮೆ ಸೀರೆ ಕಳುಹಿಸಿರುವುದಾಗಿ ತಿಳಿಸಿದರು.

ಊರಿಗೆಲ್ಲಾ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ಅವರು ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2000 ಹಣ ನೀಡ್ತಿದ್ದಾರೆ, ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟವನ್ನು ಅಜ್ಜಿ ಹಾಕಿಸಿದ್ದರು. ಅಲ್ಲದೇ ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಹರಸಿದ್ದರು. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದರು.

Tags: Congress PartyGruha Lakshmi Schemeಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Previous Post

ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಒಡ್ಡುತ್ತಿರುವ ಬಿಜೆಪಿ; ಆರೋಪ

Next Post

ಬೆಂಗಳೂರು | ಕಾರಿಗೆ ಬೈಕ್‌ ತಾಗಿಸಿ ಹಣ ಸುಲಿಗೆ: ಆರೋಪಿ ಬಂಧನ

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
Next Post

ಬೆಂಗಳೂರು | ಕಾರಿಗೆ ಬೈಕ್‌ ತಾಗಿಸಿ ಹಣ ಸುಲಿಗೆ: ಆರೋಪಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada