ಬೆಳಗಾವಿ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಕುರಿತಂತೆ ಕಳೆದ ಅನೇಕ ದಿನಗಳಿಂದ ಚರ್ಚೆ ಜೋರಾಗಿದೆ. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹಸುಗಳ ವಧೆ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರೋದು ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಸು ಮಾತ್ರವಲ್ಲಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸೋದಿಲ್ಲ. ಇದನ್ನು ನಾವು ಓರ್ವ ಮಹಿಳೆಯಾಗಿ ಹೇಳುತ್ತಿದ್ದೇನೆ, ಯಾವ ಪ್ರಾಣಿಯ ಹತ್ಯೆಯನ್ನೂ ನನ್ನಿಂದ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ವಿಚಾರವಾಗಿಯೂ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನೋಡೋದಾದ್ರೆ ಬೆಳಗಾವಿ ಜಿಲ್ಲೆಯ ವಿಭಜನೆ ಆಗಬೇಕು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಬೇಕು ಎಂದಿದ್ದಾರೆ.