• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in ಕರ್ನಾಟಕ
0
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ
Share on WhatsAppShare on FacebookShare on Telegram

ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿರುವ ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪದ ಭೂ ವಿವಾದ ತೀವ್ರಗೊಂಡಿದ್ದು, ಸರ್ವೆ ವೇಳೆ ಗಲಾಟೆ ನಡೆದ ಘಟನೆ ನಡೆದಿದೆ.ಸರ್ಕಾರದ ಆದೇಶದನ್ವಯ ಇಂದು ಅಧಿಕಾರಿಗಳು ಭೂ ಸರ್ವೆ ಕಾರ್ಯಕ್ಕೆ ಮುಂದಾದಾಗ, ಸ್ಥಳೀಯರು ಮತ್ತು ಸಾಗುವಳಿದಾರರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ತಳ್ಳಾಟ-ನೂಕಾಟ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಸರ್ವೆ ಕಾರ್ಯ ಮುಂದುವರಿಸಲಾಯಿತು.

ADVERTISEMENT
Siddaramaiah: ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಮಾಡಿದೆ #pratidhvani #siddaramaiah #kjgeorge #namaz

ಬಿಚ್ಚಾಲಿ ಗ್ರಾಮದಲ್ಲಿ ಮಂತ್ರಾಲಯ ರಾಯರು ತಪಸ್ಸು ಮಾಡಿದ ಜಪದ ಕಟ್ಟೆ ಇದ್ದು, ಈ ಸ್ಥಳಕ್ಕೆ ಭಕ್ತರು ನಿತ್ಯ ಆಗಮಿಸುತ್ತಾರೆ. ಈ ಜಪದ ಕಟ್ಟೆಗೆ ಹೊಂದಿಕೊಂಡಿರುವ 2.33 ಎಕರೆ ಜಮೀನನ್ನು ರಾಜ್ಯ ಸರ್ಕಾರ ರಾಘವೇಂದ್ರ ಮಠ ನಂಜನಗೂಡು ಹಾಗೂ ಮಂತ್ರಾಲಯ ಕ್ಯಾಂಪ್ ಮಠಕ್ಕೆ ಮಂಜೂರು ಮಾಡಿತ್ತು. ಆದರೆ ಈ ಜಮೀನಿನ ಕೆಲವು ಭಾಗವನ್ನು ಸ್ಥಳೀಯರು ಸಾಗುವಳಿ ಮಾಡುತ್ತಿರುವ ಹಿನ್ನೆಲೆ ವಿವಾದ ಉಂಟಾಗಿದೆ.ಈ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ, ಸರ್ಕಾರದ ಆದೇಶದಂತೆ ಭೂ ಗಡಿ ಗುರುತಿಸಿ ಹಸ್ತಾಂತರ ಪ್ರಕ್ರಿಯೆ ಆರಂಭಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಸರ್ಕಾರದ ಮಂಜೂರಾತಿ ಪ್ರಕಾರ ಸರ್ವೆ ನಡೆಯುತ್ತಿದ್ದು, ಅತಿಕ್ರಮಣ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 2022ರಲ್ಲಿ ಕರ್ನಾಟಕ ಸರ್ಕಾರ ರಾಘವೇಂದ್ರ ಸ್ವಾಮಿ ಮಠ ನಂಜನಗೂಡು ಹಾಗೂ ಮಂತ್ರಾಲಯ ಕ್ಯಾಂಪ್‌ ಆಫೀಸ್​ಗೆ ಭೂ ಮಂಜೂರು ಮಾಡಿದೆ. ಸರ್ಕಾರದ ಮಂಜೂರಾತಿ ಆದೇಶದನ್ವಯ ಗಡಿ ಗುರುತಿಸಿ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆದಿದೆ. ಈ ಸರ್ವೆ ಜಪದ ಕಟ್ಟೆಗೆಬರಲ್ಲ ಎಂದಿದ್ದಾರೆ.ಸದ್ಯ ಸರ್ವೆ ಕಾರ್ಯ ಮುಂದುವರಿದಿದ್ದು, ಭೂ ವಿವಾದದ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿಯೇ ಉಳಿದಿದೆ.

Tags: Bichchali Villagegovernment landHigh Court orderkarnataka newsLand DisputeLocal Protestmantralaya rayarupolice actionpratidavaniProperty DisputeRaghavendra Swamy MuttRaichur NewsReligious PlaceSurvey Clash
Previous Post

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

Next Post

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

Related Posts

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!
ಕರ್ನಾಟಕ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

by ಪ್ರತಿಧ್ವನಿ
April 14, 2026
0

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ...

Read moreDetails
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
Next Post
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!