• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
November 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ADVERTISEMENT

100 ಕನ್ನಡ ಸಾಧಕರಿಗೆ ಪ್ರಶಸ್ತಿ:

1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.. ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು. ಕನ್ನಡ ನಾಡಿನ ಏಕೀಕರಣಕ್ಕೆ, ಏಳಿಗೆಗೆ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ :ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತನವಿರಬೇಕೇ ಹೊರತು ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು.

ಬೇರೆ ಭಾಷೆ ಕಲಿತರೂ, ಕನ್ನಡ ತಾಯಿಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸಧ್ಯದಲ್ಲಿಯೇ ಸ್ಥಾಪಿಸಲಾಗುವುದು ಎಂದರು.

ವಾಟಾಳ್ ನಾಗರಾಜ್ ರವರು ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ:

ಪ್ರತಿ ವರ್ಷದ ನವೆಂಬರ್ 1 ಕನ್ನಡ ಹಬ್ಬದ ದಿನ. ಶ್ರೀ ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ ಎಂದು ಶುಭ ಕೋರಿದರು.ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ,ಜಲಗಳ ಸಂರಕ್ಷಣೆಗೆ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ.ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ , ವೀರೇಂದ್ರ ಪಾಟೀಲ್, ದೇವರಾಜ ಅರಸು , ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ. ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷೆಯನ್ನು ಕೇಳುತ್ತಾ ಬಂದಿದ್ದೇನೆ ಎಂದು ಸ್ಮರಿಸಿದರು. ವಾಟಾಳ್ ನಾಗರಾಜ್ ಅವರನ್ನು ‘ನಾಯಕರು’ ಎಂದು ತಾನು ಸಂಭೋದಿಸುತ್ತಿದ್ದು, ಜನ ಅವರನ್ನು ನಾಯಕರಾಗಿ ಕಂಡಿದ್ದಾರೆ ಎಂದರು.

Tags: bengaluruChief Minister Siddaramaiahenvironment for learning KannadaI will not allow Kannada to be debased.language can growVatal Nagaraj was never a power grabber
Previous Post

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ನೆರವು ನಿರಾಕರಣೆ: ಕೇಂದ್ರ ಸರ್ಕಾರದ ವಿರುದ್ಧ ಪಿಣರಾಯಿ ವಾಗ್ದಾಳಿ

Next Post

ಕಾರ್ಮಿಕರೊಂದಿಗೆ ಬಂಗಲೆಗೆ ಬಣ್ಣ ಬಳಿದು, ಮಡಿಕೆ ತಯಾರಿಸಿದ ರಾಹುಲ್‌ ಗಾಂಧಿ;

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post

ಕಾರ್ಮಿಕರೊಂದಿಗೆ ಬಂಗಲೆಗೆ ಬಣ್ಣ ಬಳಿದು, ಮಡಿಕೆ ತಯಾರಿಸಿದ ರಾಹುಲ್‌ ಗಾಂಧಿ;

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada