ಸ್ಯಾಂಡಲ್‌ವುಡ್‌ನ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ʻಲಂಕಾಸುರʼ ಸಿನಿಮಾದ ವಿಶೇಷ ಟೀಸರ್ ನಾಳೆ ಬಿಡುಗಡೆಯಾಗ್ತಿದೆ. ಮಾರ್ಚ್ 30 ಅಂದರೆ ನಾಳೆ ಕನ್ನಡ ಚಿತ್ರರಂಗದ ಹಿರಿಯ ನಟ ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ʻಲಂಕಾಸುರʼ ಟೀಸರ್‌ಅನ್ನ ಲಾಂಚ್ ಮಾಡಲಾಗ್ತಿದೆ.
ಮಾರ್ಚ್ 30 ರಂದು ನಮ್ಮ ತಂದೆ ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ನಮ್ಮ ನಿರ್ಮಾಣ ಸಂಸ್ಥೆ ಟೈಗರ್ ಟಾಕೀಸ್ ಲಾಂಛನದಿಂದ ನಿರ್ಮಾಣವಾಗಿರುವ ಮೊದಲ ಚಿತ್ರ “ಲಂಕಾಸುರ”ದ ವಿಶೇಷ ಟೀಸರ್ ಬಿಡುಗಡೆಯಾಗಲಿದೆ.
ಈ ಸಿನಿಮಾವನ್ನ ಪ್ರಾರಂಭಿಸಿದ ದಿನದಿಂದಲೂ ನಮಗೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಚಿರ ಖುಣಿ. ನಮಗೆ ನಿಮ್ಮ ಬೆಂಬಲ ಸದಾ ಹೀಗೆ ಇರಲಿ ಎನ್ನುತ್ತಾರೆ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್.
ಈಗಾಗಲೇ ” ಲಂಕಾಸುರ ” ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಕನ್ನಡ ಸಿನಿರಸಿಕರ ಮನ ಗೆದ್ದಿದೆ. ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರ ಅಭಿಮಾನಿಗಳಿಗಿದೆ. ಅನುಭವಿ ಕಲಾವಿದರ ಅಭಿನಯ ಹಾಗೂ ಉತ್ತಮ ತಂತ್ರಜ್ಞರ ಕಾರ್ಯವೈಖರಿಯಲ್ಲಿ “ಲಂಕಾಸುರ” ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ.