• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 16, 2025
in Top Story, ಕರ್ನಾಟಕ, ರಾಜಕೀಯ
0
ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆ
Share on WhatsAppShare on FacebookShare on Telegram

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು
• ಕಳೆದ ವರ್ಷಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಎಸ್‌ಸಿಎಸ್ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.

D. K. Shivakumar : ಸದನದಲ್ಲಿ  ಕೈ ಮುಗಿದು ಕ್ಷಮೆ ಕೇಳಿದ್ರಾ ಡಿಕೆಶಿ ?#pratidhvani

• ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.
• ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

• ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
• ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದರು.

• ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
• ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

  • ದೇವದಾಸಿಯರೂ ಸೇರಿದಂತೆ,
    ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು
  • ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ
  • ಕರ್ನಾಟಕ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ
  • ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು

• ಕಳೆದ ಸಾಲಿನಲ್ಲಿ ಎಸ್‌ಸಿಸಿಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು.

• ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

DK Shivakumar: ಅಪ್ಪ ಅವರು ಜನಸೇವೆ ಮಾಡಿದ ಧೀಮಂತ ಶರಣರು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post
ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!