• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Priyank Kharge: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಐತಿಹಾಸಿಕ ನಡೆ, ರಾಜ್ಯದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ: ಪ್ರಿಯಾಂಕ್‌ ಖರ್ಗೆ

ADVERTISEMENT

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ಮಹತ್ತರ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ʼಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದುʼ ಎಂದು ಘೋಷಿಸಲಾಗಿತ್ತು.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199(ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ. ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮ ಪಂಚಾಯಿತಿಯ ಎಲ್ಲಾ ಆಸ್ತಿಗಳ ಕರಡು ಪ್ರತಿಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕ ಒದಗಿಸಿ ತಮ್ಮ ಆಸ್ತಿಗಳ ಮಾಹಿತಿಯನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ, ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಗ್ರಾಮ ಪಂಚಾಯಿತಿಗೆ ಪಾವತಿಸುವ ಮೂಲಕ ದಾಖಲೆ ಪಡೆಯಲು ಹಾಗೂ ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ದಿಗೊಳಿಸುವುದರ ಮೂಲಕ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳಲು ಸಹಕಾರಿಯಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧರಣೆ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ(ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ಗ್ರಾಮೀಣ ಅಭಿವೃದ್ಧಿ ಸಚಿವರು ಹೇಳಿದ್ದಾರೆ.

ಮಹತ್ತರ ಹಾಗೂ ಐತಿಹಾಸಿಕ ನಡೆ
ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ತೆರಿಗೆ, ದರ ಹಾಗು ಶುಲ್ಕಗಳನ್ನು ನಿಗದಿ ಮಾಡುವುದರಿಂದ ಮತ್ತು ಪರವಾನಗಿ, ನಿರಾಕ್ಷೇಪಣ ಪತ್ರಗಳನ್ನು ಕ್ರಮಬದ್ಧವಾಗಿ ಮತ್ತು ಕಾಲಮಿತಿಯೊಳಗೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ನೀಡುವುದರಿಂದ ಗ್ರಾಮ ಪಂಚಾಯಿತಿಗಳ ಸ್ವಂತ ಸಂಪನ್ಮೂಲದ ಹೆಚ್ಚಳಕ್ಕೆ ಕಾರಣವಾಗುವದಲ್ಲದೆ ಸ್ವಯಂ ಸರ್ಕಾರಗಳಾಗಿ ಗ್ರಾಮ ಪಂಚಾಯತಿಗಳು ತಮ್ಮ ಅಭಿವೃದ್ಧಿಯನ್ನು ತಾವೇ ನಿರ್ಧರಿಸುವ ದಿಸೆಯಲ್ಲಿ ಇದೊಂದು ಮಹತ್ತರ ಹಾಗೂ ಐತಿಹಾಸಿಕ ನಡೆಯಾಗಿದೆ.

Tags: bjp vs priyank khargePriyank Khargepriyank kharge |priyank kharge criticismpriyank kharge latest newspriyank kharge letterpriyank kharge letter to cmpriyank kharge letter to cm.priyank kharge newspriyank kharge on bjppriyank kharge on protestspriyank kharge on rsspriyank kharge press meetpriyank kharge puc failpriyank kharge remarkspriyank kharge rsspriyank kharge rss letterpriyank kharge speechpriyank kharge statementpriyank kharge statementsrss ban priyank kharge
Previous Post

Dr. Sharana Prakash Patil: ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ..!!

Next Post

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ..!!

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
Next Post

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ..!!

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada