• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅದ್ದೂರಿಯಾಗಿ ನಡೆದ “ಗೇಮ್ ಚೇಂಜರ್” ಪ್ರೀ-ರಿಲೀಸ್ ಈವೆಂಟ್…ಅಮೆರಿಕಾದ ನೆಲದಲ್ಲಿ ರಾಮ್ ಚರಣ್ ಚಿತ್ರದ ಅಪರೂಪದ ಸಾಧನೆ.

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’ ಪ್ರೀ-ರಿಲೀಸ್ ಈವೆಂಟ್ ಅಮೆರಿಕಾದ ಡಲ್ಲಾಸ್ ನಲ್ಲಿ ಅದ್ಧೂರಿಯಾಗಿ ನಡೆದಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದುವರೆಗೆ ಯುಎಸ್‌ನಲ್ಲಿ ತೆಲುಗು ಚಿತ್ರವೊಂದರ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿರಲಿಲ್ಲ. ಆದರೆ ಈ ಸಿನಿಮಾ ಆ ದಾಖಲೆ ಮಾಡಿದೆ. ಡಿಸೆಂಬರ್ 21ರಂದು ಅಮೆರಿಕದಲ್ಲಿ ‘ಗೇಮ್ ಚೇಂಜರ್’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿದೆ. ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ADVERTISEMENT

ರಾಮ್ ಚರಣ್, ನಿರ್ದೇಶಕ ಶಂಕರ್, ನಿರ್ಮಾಪಕರಾದ ದಿಲ್ ರಾಜು ಮತ್ತು ಸಿರೀಶ್, ಸಂಗೀತ ನಿರ್ದೇಶಕ ಥಮನ್ ಮತ್ತು ನಟಿ ಅಂಜಲಿ ಸೇರಿದಂತೆ ಚಿತ್ರದ ಇಡೀ ಚಿತ್ರತಂಡ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾಮ್ ಚರಣ್ ಅವರೊಂದಿಗೆ ಮುಂದಿನ ಚಿತ್ರಗಳನ್ನು ನಿರ್ದೇಶಿಸಲಿರುವ ಸುಕುಮಾರ್ ಮತ್ತು ಬುಚ್ಚಿ ಬಾಬು ಸನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಮಾತನಾಡಿದ ಗ್ಲೋಬಲ್ ಸ್ಟಾರ್ ರಾಮ್ ಚರಣ್, ನಾನು ಶಂಕರ್ ಸರ್ ಸಿನಿಮಾದಲ್ಲಿ ನಟಿಸಿದ್ದೇನೆ ಎಂದು ನಂಬಲು ಆಗುತ್ತಿಲ್ಲ. ನಾನು ಅವರಿಗೆ ತೆಲುಗು ಚಿತ್ರ ನಿರ್ದೇಶಿಸಲು ಕೇಳುತ್ತಿದ್ದೆ. ಆದರೀಗ ಅವರ ಜೊತೆಯಲ್ಲಿಯೇ ಕೆಲಸ ಮಾಡಿದ್ದೇನೆ. 3 ವರ್ಷದ ಈ ಸುಂದರ ಪಯಣದಲ್ಲಿ ಅವರೊಂದಿಗೆ ಸಾಕಷ್ಟು ಕಲಿತ್ತಿದ್ದೇನೆ. ಕ್ರಿಕೆಟ್ ರಂಗಕ್ಕೆ ಸಚಿನ್ ಅವರು ಹೇಗೋ, ಅದೇ ರೀತಿ ಭಾರತೀಯ ಚಿತ್ರರಂಗಕ್ಕೆ ಶಂಕರ್. ಅವರು ನಂಬರ್ 1 ಕಮರ್ಷಿಯಲ್ ಸಿನಿಮಾ ಮೇಕರ್. ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.

ನಿರ್ದೇಶಕ ಸುಕುಮಾರ್ ಮಾತನಾಡಿ, ‘ಹೊಸ ನಿರ್ದೇಶಕರಿಗೆ ಅವಕಾಶ ನೀಡಲು ನಿರ್ಮಾಪಕರು ಹಿಂದೇಟು ಹಾಕುತ್ತಿದ್ದ ಕಾಲದಲ್ಲಿ ದಿಲ್ ರಾಜು ಅವರು ನನಗೆ ಆರ್ಯ ಚಿತ್ರ ನಿರ್ದೇಶಿಸಲು ಅವಕಾಶ ಕೊಟ್ಟಿದ್ದರು. ನಾನು ನನ್ನ ಮೊದಲ ಫಿಲಂಫೇರ್ ಪ್ರಶಸ್ತಿಯನ್ನು ಶಂಕರ್ ಸರ್ ಅವರಿಂದ ಸ್ವೀಕರಿಸಿದ್ದೇನೆ. ನಾನು ಚಿರಂಜೀವಿ ಅಭಿಮಾನಿ. ಹೀಗಾಗಿ ಶಂಕರ್ ಸರ್ ಚಿರು ಸರ್ ಜೊತೆ ಏಕೆ ಕೆಲಸ ಮಾಡಿಲ್ಲ ಎಂದು ಯಾವಾಗಲೂ ಆಶ್ಚರ್ಯಪಡುತಿದ್ದೆ.

ಆದರೆ ಅವರು ಚರಣ್ ಜೊತೆ ಕೈ ಜೋಡಿಸಿದಾಗ ನನಗೆ ಅಪಾರ ಸಂತೋಷವಾಯಿತು. ಚರಣ್ ನನ್ನ ಸಹೋದರನಂತೆ, ಮತ್ತು ಅವರೊಂದಿಗೆ ಕೆಲಸ ಮಾಡುವುದು ಯಾವಾಗಲೂ ಸಂತೋಷವಾಗುತ್ತದೆ ಎಂದರು.’ಆರ್‌ಆರ್‌ಆರ್’ ಬಳಿಕ ರಾಮ್‌ಚರಣ್ ನಟಿಸಿದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ ಮೆಗಾ ಫ್ಯಾನ್ಸ್ ‘ಗೇಮ್‌ ಚೇಂಜರ್’ ದರ್ಶನಕ್ಕೆ ಕಾಯುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಗೇಮ್ ಚೇಂಜರ್ ಗೆ ಆಕ್ಷನ್ ಕಟ್ ಹೇಳಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಮತ್ತು ಜೀ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ದಿಲ್ ರಾಜು ಮತ್ತು ಸಿರಿಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ನಲ್ಲಿ ರಾಮ್ ಚರಣ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಕಿಯಾರಾ ಅಡ್ವಾಣಿ, ಅಂಜಲಿ, ಎಸ್ ಜೆ ಸೂರ್ಯ, ಶ್ರೀಕಾಂತ್, ಸುನಿಲ್, ಸಮುದ್ರಕನಿ ಮತ್ತು ಜಯರಾಮ್ ಮತ್ತಿತರರು ತಾರಾಬಳಗದಲ್ಲಿದ್ದಾರೆ.

ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ. ಎಸ್.ಯು.ವೆಂಕಟೇಶನ್ ಮತ್ತು ವಿವೇಕ್ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಹರ್ಷಿತ್ ಚಿತ್ರದ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸಾಯಿ ಮಾಧವ್ ಬುರ್ರಾ ಸಂಭಾಷಣೆ ಬರೆದಿದ್ದಾರೆ. ಎಸ್ ಥಮನ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಎಸ್ ತಿರುನಾವುಕ್ಕರಸು ಛಾಯಾಗ್ರಹಣವನ್ನು ನಿಭಾಯಿಸಿದ್ದಾರೆ. ಅವಿನಾಶ್ ಕೊಲ್ಲಾ ಆಕ್ಷನ್ ಕೊರಿಯೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದು, ಅನ್ಬೀರವ್ ಆಕ್ಷನ್ ದೃಶ್ಯಗಳನ್ನು ಸಂಯೋಜಿಸಿದ್ದು, ಪ್ರಭುದೇವ, ಗಣೇಶ್ ಆಚಾರ್ಯ, ಪ್ರೇಮ್ ರಕ್ಷಿತ್, ಬಾಸ್ಕೊ ಮಾರ್ಟಿನ್, ಜಾನಿ ಮತ್ತು ಸ್ಯಾಂಡಿ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರವು ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಜನವರಿ 10, 2025 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

Tags: 'Dil Raju."Game ChangerAmericaAnjaliDecember 21Director Sukumar saidGlobal star Ram CharanRam Charan film on American soil.SJ SuryaSrikanthsunil
Previous Post

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ರೈತ ನಿಯೋಗ ಮುಖ್ಯಮಂತ್ರಿ ಭೇಟಿ, ಭೂ ಸ್ವಾಧೀನ ಕೈಬಿಡುವಂತೆ ಮನವಿ

Next Post

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
Top Story

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!