ಭಾರತ ವನಿತೆಯರ ತಂಡ ಲಾನ್ ಬೌಲ್ಸ್ ವಿಭಾಗದಲ್ಲಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ಧಾರೆ.
ಬರ್ಮಿಂಗ್ ಹ್ಯಾಂನಲ್ಲಿ ಮಂಗಳವಾರ ನಡೆದ ಲಾನ್ ಬೌಲ್ಸ್ ವಿಭಾಗದ ಫೈನಲ್ ನಲ್ಲಿ ಭಾರತ ತಂಡ 17-0ಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಅಧಿಕಾರಯುತ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದುಕೊಂಡಿತು.

ರೂಪಾ ರಾಣಿ, ಪಿಂಕಿ, ನಯಮೊನಿ ಸೈಕಿಯಾ ಮತ್ತು ಲವ್ಲಿ ಚೌಬೆ ಅವರನ್ನೊಳಗೊಂಡ ಭಾರತ ತಂಡ ಚಿನ್ನದ ಪದಕ ಗೆದ್ದ ಸಾಧನೆ ಮಾಡಿತು. ಭಾರತ ಈ ಮೂಲಕ ಕಾಮನ್ ವೆಲ್ತ್ ನಲ್ಲಿ 4 ಚಿನ್ನದ ಪದಕ ಗೆದ್ದ ಸಾಧನೆ ಮಾಡಿತು.