ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಟೋಯಿ (Gangster Lawrence bishnoi) ಸದ್ಯ ಗುರಜಾತ್ (Gujarat)ನ ಜೈಲಿನಲ್ಲಿ ಬಂಧಿಯಾಗಿದ್ದಾನೆ. ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ ನವರೇ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು (NCP leader) ಗುಂಡಿಕ್ಕಿ ಕೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನು ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ (Salman khan) ಢವ ಢವ ಶುರುವಾಗಿದೆ ಎನ್ನಲಾಗ್ತಿದೆ.

ಈ ಹಿಂದೆ ಕೃಷ್ಣಮೃಗ ಬೇಟೆಯಾಗಿದ್ದ ನಟ ಸಲ್ಮಾನ್ ಖಾನ್ ಹತ್ಯೆಯೇ ತನ್ನ ಮುಖ್ಯ ಗುರಿ ಅಂತ ಲಾರೆನ್ಸ್ ಘಂಟಾಘೋಷವಾಗಿ ಹೇಳಿಕೊಂಡಿದ್ದಾನೆ. ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ (Social media) ವ್ಯಾಪಕವಾಗಿ ಸದ್ದು ಮಾಡ್ತಿದೆ. ಹಲವಾರು ನೆಟ್ಟಿಗರು ಗ್ಯಾಂಗ್ಸ್ಟರ್ ಬಿಷ್ಣೋಯಿಗೆ ಅಭಿಮಾನಿಗಳ ರೀತಿ ಕಾಮೆಂಟ್ ಮಾಡುತ್ತಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ Y+ ಭದ್ರತೆಯನ್ನು ಒದಗಿಸಲಾಗಿದೆ. ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಗಾರಿಕೆಯನ್ನು ಒಪ್ಪಿಕೊಂಡ ನಂತರ ಸಲ್ಮಾನ್ ಖಾನ್ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ಸಾಕಷ್ಟು ವರ್ಷಗಳಿಂದ ಸಲ್ಮಾನ್ ಖಾನ್ ಲಾರೆನ್ಸ್ ಬಿಟ್ಟೋಯ್ ಗ್ಯಾಂಗ್‌ನಿಂದ ನಿರಂತರ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.