• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮುಷ್ಕರ ನಿರತ ನೌಕರರಿಗೆ ಸಾರಿಗೆ ಇಲಾಖೆ ಸಚಿವ ಸವದಿಯಿಂದ ಎಚ್ಚರಿಕೆ ರವಾನೆ! ಇಲ್ಲಿದೆ ಸಂಪೂರ್ಣ ಸುದ್ದಿ

Any Mind by Any Mind
April 21, 2021
in Uncategorized
0
ಮುಷ್ಕರ ನಿರತ ನೌಕರರಿಗೆ ಸಾರಿಗೆ ಇಲಾಖೆ ಸಚಿವ ಸವದಿಯಿಂದ ಎಚ್ಚರಿಕೆ ರವಾನೆ! ಇಲ್ಲಿದೆ ಸಂಪೂರ್ಣ ಸುದ್ದಿ
Share on WhatsAppShare on FacebookShare on Telegram

ಆರನೇ ವೇತನ ಆಯೋಗದ (6th Pay Commission) ಶಿಫಾರಸ್ಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು 10 ದಿನಗಳಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕಳೆದ ಹತ್ತು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಸಾರಿಗೆ ನೌಕರರ ವಿವಿಧ ರೀತಿ ಪ್ರತಿಭಟಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿತ್ತು. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಸೇರಿದಂತೆ ನಾಲ್ಕು ವಲಯಗಳ ಸಾರಿಗೆ ನೌಕರರ ಮುಷ್ಕರವನ್ನು ಬೆಂಬಲಿಸಿದ್ದರು. ಮುಷ್ಕರ ನಡೆಯುವ ಸಮಯದಲ್ಲಿ ಒಂದು ಅಹಿತಕರ ಘಟನೆ ನಡೆದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಾರಿಗೆ ಇಲಾಖೆ ಸರಣಿ ಟ್ವೀಟ್ ಮಾಡಿ ಮುಷ್ಕರ ನಿರತ ನೌಕರರ ವಿರುದ್ಧ ಕಿಡಿಕಾರಿದ್ದಾರೆ. ಸಂಬಳ ಹೆಚ್ಚುವಂತ ಒಂದಷ್ಟು ಟ್ವೀಟ್ಗಳನ್ನು ಸಹ ಮಾಡಿದೆ.

ADVERTISEMENT

ಸಾರಿಗೆ ಇಲಾಖೆ ನೌಕರರ ಮುಷ್ಕರದ ಮುನ್ನೋಟ

ಈ ಹಿಂದೆ ಡಿಸೆಂಬರ್ 2020ರಲ್ಲಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು 9 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಅದರಲ್ಲಿ ಎಂಟು ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ಸರ್ಕಾರ ತಿಳಿಸಿದ್ದತು ಅವುಗಳಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಹಿಂದೇಟು ಹಾಕಿದ್ದರು. ಇನ್ನೂ ಕೆಲವು ಬೇಡಿಕೆಗೆ ಕಾಲಾವಕಾಶ ಕೇಳಿತ್ತು. ಏಪ್ರಿಲ್ ಮೊದಲನೇ ವಾರಕ್ಕೆ ಕಾಲಾವಕಾಶ ಮುಕ್ತಾಯವಾಗಿದ್ದ ಹಿನ್ನೆಲೆ ಈಗ ಪ್ರಮುಖ ಬೇಡಿಕೆಯಾದ ಆರನೇ ವೇತನ ಆಯೋಗವನ್ನು ಜಾರಿಗೆ ತರಲು ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದೇವೆ ಎಂದು ನೌಕರರು ತಿಳಿಸಿದ್ದರು.

ಕೋವಿಡ್-19 ರ ಪರಿಣಾಮ ಹಣಕಾಸಿನ ಮುಗ್ಗಟ್ಟಿನ ಹೊರತಾಗಿಯೂ ನೌಕರರ ಹೆಚ್ಚಿನ ಬೇಡಿಕೆಗಳನ್ನು ಪರಿಹರಿಸಲಾಗಿದೆ. ಸಾರಿಗೆ ನೌಕರರಗೆ ಆರನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಅವರ ಬೇಡಿಕೆಯನ್ನು ಈಡೇರಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೌದು, ಕರೊನ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೌಕರರು ಆರನೇ ವೇತನಕ್ಕೆ ಆಗ್ರಹಿಸಿ ಮುಷ್ಕರ ಮಾಡುತ್ತಿರೊದು ತಪ್ಪು. ಆದರೆ, ಕರೊನದಂತಹ ಕೆಟ್ಟ ಪರಿಸ್ಥಿತಿ ಮಠ ಮಂದಿರಗಳಿಗೆ ನೂರಾರು ಕೋಟಿ ಹಣವನ್ನು ಅನುದಾನವಾಗಿ ಕೊಡೊದು ಸರಿಯೇ ಎಂಬ ಪ್ರಶ್ನೆಯನ್ನು ಜನಸಾಮಾನ್ಯರು ಬಜೆಟ್ ಹಿಂದೆ ಮುಂದೆಯಿಂದಲೂ ಕೇಳಿಕೊಂಡು ಬರ್ತಿದಾರೆ. ಹೌದು ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಮಠ ಮಂದಿರಗಳಿಗೆ, ಸಾಮಾಜಿಕವಾಗಿ ಅಭಿವೃದ್ಧಿ ಆಗಿರುವ ಕಮ್ಯೂನಿಟಿ ನಿಗಮಗಳಿಗೆ ನೂರಾರು ಕೋಟಿ ಹಣವನ್ನು ಸುರಿದದ್ದು ಎಷ್ಟು ಸರಿ ಎನ್ನುವುದು ದೊಡ್ಡ ಪ್ರಶ್ನೆ. ಈ ಎಲ್ಲಾ ಹಣ ಕ್ರೂಢಿಕರಿಸಿ ಜೊತೆಗೆ ನಮಗೆ ಕೇಂದ್ರದಿಂದ ಬರಬೇಕಾದ ತೆರಿಗೆ ಪಾಲು ಸರಿಯಾಗಿ ಬಂದಿದ್ದರೆ ಈ ಎಲ್ಲಾ ಸಮಸ್ಯೆಗಳಿಗೆ ಒಂದು ಪರಿಹಾರವಂತು ನಿಗುತ್ತಿತ್ತು. ಆದರೆ ಚುನಾವಣೆ ಮುಂಚೆ ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಒಂದೇ ಸರ್ಕಾರ ಇದ್ದರೆ ಸ್ವರ್ಗವೇ ನಿರ್ಮಾಣ ಆಗುತ್ತೆ ಅಂದ ನಾಯಕರ್ಯಾರು ಇವತ್ತು ಬಾಯಿ ತೆಗೆದು ಮಾತಾಡದೆ ಇರುವುದು ನಿಜಕ್ಕೂ ವಿಪರ್ಯಾಸ.

ಸಾರಿಗೆ ನೌಕರರ ಕುರಿತು ಬಿಜೆಪಿ ಸಂಸದರ ಪ್ರತಿಕ್ರಿಯೆಗಳು?

ಸರ್ಕಾರ ಮುಷ್ಕರನಿರತರನ್ನು ನಡೆಸಿಕೊಳ್ಳುತ್ತಿರುವ ರೀತಿ ಹಾಗೂ ಬಿಎಂಟಿಸಿಯನ್ನು ಖಾಸಗೀಕರಣಗೊಳಿಸಬೇಕೆಂಬ ಸಂಸದ ತೇಜಸ್ವಿ ಸೂರ್ಯ ಅವರ ಇತ್ತೀಚಿನ ಹೇಳಿಕೆ

ಸಾರಿಗೆ ನೌಕರರು ಎಷ್ಟು ದಿನ ಮುಷ್ಕರ ಮಾಡುತ್ತಾರೋ ನೋಡೋಣ. ನಾವೇನು ತಾಕತ್ತು ಇಲ್ಲದವರೆಂದು ತಿಳಿದುಕೊಂಡಿದ್ದಾರಾ ಎಂದು ಸಾರಿಗೆ ನೌಕರರ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಈ ನಡೆ ಮತ್ತು ನಾಯಕರ ಈತರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಜನರು ಸಾಮಾನ್ಯವಾಗಿ ಖಾಸಗೀಕರಣ ಕುರಿತು ಪ್ರಶ್ನೆಗಳನ್ನು ಕೇಳುತ್ತಾರೆ. ಯಾಕೆಂದರೆ ಈಗಾಗಲೇ ವಿಮಾನ ನಿಲ್ದಾಣ, ರೈಲುಗಳು ಖಾಸಗೀಕರಣ ಆಗಿರುವುದನ್ನು ಜನಸಾಮಾನ್ಯರ ನೋಡಿದ್ದಾರೆ.

ಮುಷ್ಕರ ಹತ್ತಿಕ್ಕಲು ಹೆಣೆದ ತಂತ್ರ ಒಂದೆ ಎರಡೆ?

ಕರ್ತವ್ಯಕ್ಕೆ ಹಾಜರಾಗಿ, ಇಲ್ಲ ಕ್ವಾಟ್ರಸ್ ಖಾಲಿ ಮಾಡಿ’ ಎಂದು ಅಧಿಕಾರಿಗಳು ಸಾರಿಗೆ ನೌಕರರಿಗೆ ನೊಟೀಸ್ ನೀಡುವ ತಂತ್ರ.

ಮನವೊಲಿಕೆ ಇಲ್ಲವೇ ವಜಾ, ಅಮಾನತು, ವರ್ಗಾವಣೆಯಂತಹ ಕ್ರಮಗಳನ್ನೂ ರಾಜ್ಯ ಸರ್ಕಾರ ಮುಂದುವರಿಸಿದೆ. ಎಸ್ಮಾ ನಿಯಮಗಳ ಅಡಿಯಲ್ಲಿಯೂ ಕ್ರಮ ಕೈಗೊಳ್ಳುತ್ತಿದೆ ಎಂಬ ತಂತ್ರ.

ಮುಷ್ಕರ ಪ್ರಾರಂಭವಾದಾಗಿನಿಂದ ಈವರೆಗೆ ಕೆಎಸ್‌ಆರ್‌ಟಿಸಿಯು 15 ನೌಕರರನ್ನು ಅಮಾನತುಗೊಳಿಸಿದ್ದರೆ, 85 ನೌಕರರು ವಜಾಗೊಂಡಿದ್ದಾರೆ. ಆಯಾ ನಿಗಮಗಳಲ್ಲಿಯೂ ಕಡ್ಡಾಯ ನಿವೃತ್ತಿ ನೀಡುವ, ನೋಟಿಸ್‌ ಕೊಡುವ ಕಾರ್ಯ ನಡೆಯುತ್ತಿದೆ. ಈ ಎಲ್ಲಾ ಕುತಂತ್ರವನ್ನು ಮೆಟ್ಟಿನಿಂದ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ನಿಲ್ಲಿಸಿ ರಾಜಿ ಮಾಡಿಕೊಳ್ಳದೆ ಆರೆನೇ ವೇತನಕ್ಕಾಗಿ ಆಗ್ರಹಿಸುತ್ತಲೇ ಬಂದಿದ್ದಾರೆ.

ಇಷ್ಟೆಲ್ಲಾ ಮಾಡಿ ಈಗ ಸಾರಿಗೆ ಇಲಾಖೆ ಮತ್ತು ಸಚಿವರಾದ ಲಕ್ಷ್ಮಣ್ ಸವದಿಯವರು ಸಾರಿಗೆ ನೌಕರರಿಗೆ ಶುಕ್ರವಾರ ಟ್ವೀಟರ್ ಮೂಲಕ ಒಂದು ಹೆಚ್ಚರಿಕೆ ಮತ್ತು ಮನವಿಯನ್ನು ಮಾಡಿಕೊಂಡಿದ್ದಾರೆ. ಆ ಕುರಿತು ಕಂಪ್ಲೀಟ್ ಮಾಯಿತಿ ಇಲ್ಲಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಇಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಷ್ಠಾವಂತ ಚಾಲಕರಾದ ಶ್ರೀ ಅವಟಿ ಎಂಬವರು ಜಮಖಂಡಿಯ ಸಮೀಪದಲ್ಲಿ ಕರ್ತವ್ಯಕ್ಕೆ ಹಾಜರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ ತೀವ್ರ ಹಿಂಸಾಕೃತ್ಯ ಎಸಗಿದ ಪರಿಣಾಮವಾಗಿ ಅವರು ಮೃತಪಟ್ಟಿರುವುದು ತೀವ್ರ ದು:ಖದಾಯಕ ಸಂಗತಿಯಾಗಿದೆ. ಮೃತರ ಆತ್ಮಕ್ಕೆ ನಾನು ಶಾಂತಿ ಕೋರುತ್ತೇನೆ ಮತ್ತು ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳನ್ನು ತಿಳಿಸಬಯಸುತ್ತೇನೆ ಎಂದು ತಿಳಿಸಿ ಮುಂದುವರೆದು.

ಈ ದುರ್ಘಟನೆಯ ವರದಿ ಬಂದ ತಕ್ಷಣವೇ ಮೃತರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಮೊತ್ತದ ಪರಿಹಾರ ನೀಡಲು ಹಾಗೂ ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈಗೆ ಮುಂದುವರೆದು, ಶಾಂತಿಯುತವಾಗಿ ಮುಷ್ಕರ ನಡೆಸುತ್ತೇವೆ ಎಂದು ಮುಷ್ಕರ ನಿರತರು ಹೇಳುತ್ತಲೇ ತಮ್ಮ ಸಹೋದ್ಯೋಗಿಯ ಜೀವವನ್ನೇ ಬಲಿ ತೆಗೆದುಕೊಂಡಿರುವುದು ತೀವ್ರ ಖಂಡನೀಯವಾಗಿದೆ. ತಾವೂ ಕೆಲಸ ಮಾಡುವುದಿಲ್ಲ, ಇತರ ನಿಷ್ಠಾವಂತರಿಗೂ ಕೆಲಸ ಮಾಡಲು ಬಿಡುವುದಿಲ್ಲ ಎಂಬ ಪ್ರತಿಭಟನಾಕಾರರ ಧೋರಣೆ ಎಷ್ಟರ ಮಟ್ಟಿಗೆ ಸರಿ?

ಈ ರೀತಿ ಹಿಂಸಾಕೃತ್ಯ ನಡೆಸುವವರನ್ನು ಸರ್ಕಾರವು ಎಂದಿಗೂ ಕ್ಷಮಿಸುವುದಿಲ್ಲ. ಈ ರೀತಿಯ ದುಷ್ಕೃತ್ಯ ನಡೆಸಿದರೆ ಕರ್ತವ್ಯಕ್ಕೆ ಹಾಜರಾಗುವ ನೌಕರರನ್ನು ವಿಚಲಿತಗೊಳಿಸಬಹುದು ಎಂದು ಕೆಲವರು ಹವಣಿಸಿದ್ದರೆ ಅದು ಯಶಸ್ವಿಯಾಗುವುದಿಲ್ಲ. ಏಕೆಂದರೆ ಈಗಾಗಲೇ ಮುಷ್ಕರ ನಿರತರ ಹಠಮಾರಿ ಧೋರಣೆ ಅನೇಕರಿಗೆ ಅರ್ಥವಾಗಿದೆ. ಎನ್ನುವ ಮೂಲಕ ಹೆಚ್ಚರಿಕೆಯನ್ನು ಹಿಂಬದಿಯಿಂದ ರವಾನಿಸಿದ್ದಾರೆ.

ಇಂದು 5300ಕ್ಕೂ ಹೆಚ್ಚು ಬಸ್ಸುಗಳ ಸಂಚಾರ

ಸಾರಿಗೆ ನೌಕರರ ಮುಷ್ಕರದಿಂದಾಗಿ ಕಳೆದ 10 ದಿನಗಳಲ್ಲಿ ಸಾರ್ವಜನಿಕರು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಬಸ್ಸುಗಳ ಸೇವೆ ಸಿಗದೆ ಪರಿತಪಿಸುವಂತಾಗಿರುವುದು ದುರ್ದೈವದ ಸಂಗತಿಯಾಗಿದೆ. ಆದರೆ ನಮ್ಮ ಕರೆಗೆ ಓಗುಟ್ಟು ಅನೇಕ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿರುವುದರಿಂದ ಇಂದು 5300ಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುವಂತಾಗಿರುವುದಕ್ಕೆ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ನನ್ನ ಹಾರ್ದಿಕ ಅಭಿನಂದನೆಗಳು.

ನಾನು ಈಗಾಗಲೇ ತಿಳಿಸಿದಂತೆ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದ ನಂತರ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಆದರೂ ಸಾರಿಗೆ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸುವಂಥ ವಿಪರ್ಯಾಸದ ಕ್ರಮಕ್ಕೆ ಕೆಲವರು ಪ್ರಚೋದನೆ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಎದುರಾಗಿದೆ ಎಂದು ತಿಳಿಸಿದ್ದಾರೆ. (ಇಲ್ಲಿ ಸಾರಿಗೆ ನೌಕರರ ಸಂಬಳ ಹೆಚ್ಚಳದ ಬಗ್ಗೆ ಮಾತಾಡಿದ್ದಾರೆಯೇ ಹೊರತು ಆರನೇ ವೇತನದ ಬಗ್ಗೆ ಪ್ರಸ್ತಾಪ ಆಗದಿರುವುದನ್ನು ನಾವು ನೋಡಬಹುದು.)

ಅಷ್ಟೇಅಲ್ಲ ಸಾರಿಗೆ ನಿಗಮಗಳಿಗೆ ಬರಬೇಕಾಗಿದ್ದ ಆದಾಯ ಸ್ಥಗಿತಗೊಂಡು ಈವರೆಗೆ ಸುಮಾರು 187 ಕೋಟಿ ರೂ. ಗಿಂತಲೂ ಹೆಚ್ಚು ಮೊತ್ತದ ಹಾನಿಯಾಗಿದೆ. ಈ ರೀತಿಯ ಬೆಳವಣಿಗೆಗಳಿಂದ ಸಾರಿಗೆ ನಿಗಮಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ತಿಳಿಸಿದ್ದಾರೆ. (ಹತ್ತು ದಿನದ ಮುಷ್ಕರದಿಂದ 150+ ಕೋಟಿ ಲಾಸ್ ಮತ್ತು ಹಾನಿ ಅಂದರೆ, ತಿಂಗಳ ಆದಾಯ ಎಷ್ಟು ಎಂಬುದನ್ನು ನಾವು ನೋಡಬಹುದು.)

ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಾರ್ವಜನಿಕ ಸೇವೆಗೆ ಮುಂದಾಗಿದ್ದ ಬಸ್ಸುಗಳ ಪೈಕಿ ಕೆಲವು ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟ ಮತ್ತು ಹಿಂಸಾಚಾರಗಳಿಂದಾಗಿ ಈವರೆಗೆ ಒಟ್ಟು 80 ಬಸ್ಸುಗಳು ಜಖಂಗೊಂಡಿದ್ದು, ಸಾರಿಗೆ ನಿಗಮಗಳಿಗೆ ಮತ್ತಷ್ಟು ಆರ್ಥಿಕ ಹಾನಿ ಹೆಚ್ಚುವಂತಾಗಿದೆ. (ಸಾರಿಗೆ ನೌಕರರು ಮುಷ್ಕರ ಮಾಡುತ್ತೇವೆ ಎಂದು ತಿಳಿದಿದ್ದರು ಮಾಡಿಕೊಳ್ಳು ಎಂದು ಬಿಟ್ಟು ಅವರ ಆಕ್ರೋಶಕ್ಕೆ ತುತ್ತಾದ ದಾಖಲೆಗಳನ್ನು ಮುಂದಿಡುತ್ತಿದೆ ಸರ್ಕಾರ. ಇರಲಿ ಆದರು ಸಾರಿಗೆ ನೌಕರರು ಈ ಕೃತ್ಯ ಮಾಡಿದ್ದರೆ ಅದು ತಪ್ಪು)

ಶಾಂತಿ ಮತ್ತು ಸಹನೆಯ ಧೋರಣೆಯನ್ನು ನಮ್ಮ ಸರ್ಕಾರ ತಳೆದಿದ್ದು, ಇದನ್ನು ಯಾರೂ ದುರುಪಯೋಗಪಡಿಸಿಕೊಳ್ಳಲು ಮುಂದಾಗಬಾರದು. ಒಂದು ವೇಳೆ ಅಹಿತಕರ ಘಟನೆಯಂಥ ಕೃತ್ಯಗಳಿಗೆ ಮುಂದಾದರೆ ಅವರು ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂಬ ಹೆಚ್ಚರಿಕೆಯನ್ನು ಸಚಿವರು ರವಾನಿಸಿದ್ದಾರೆ.

ನಮ್ಮ ನೌಕರ ಬಾಂಧವರು ಸ್ವಯಂಪ್ರೇರಿತರಾಗಿ ಕೆಲಸಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ತಡೆಯುವ, ಬೆದರಿಸುವ ಮತ್ತು ಅವರ ಮೇಲೆ ಹಲ್ಲೆ ನಡೆಸುವ ಪ್ರಯತ್ನಗಳು ಹಲವು ಕಡೆ ನಡೆದಿವೆ. ಈ ರೀತಿಯ ದುಂಡಾವರ್ತನೆ ನಡೆಸುವವರು ಯಾರೇ ಆಗಿರಲಿ ಅಂಥವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ಟ್ವೀಟ್ ಮಾಡಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಬಗ್ಗೆ ಪ್ರಸಿದ್ಧ ಸಿನಿಮಾ ನಟರಾದ ಶ್ರೀ ಯಶ್ ಅವರೂ ಸೇರಿದಂತೆ ಕೆಲವರು ನನ್ನೊಂದಿಗೆ ಚರ್ಚಿಸಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ನನಗೂ ಸಹಾನುಭೂತಿಯಿದೆ. ಆದರೆ ಒಂದೇ ಕೈಯಿಂದ ಚಪ್ಪಾಳೆ ಸಾಧ್ಯವಿಲ್ಲ. ( ನಟ ಯಶ್ ಸಾರಿಗೆ ನೌಕರರ ಕುರುತು ಮಾತಾಡಬಹುದು ಆದರೆ ಕೋಡಿಯಳ್ಳಿ ಚಂದ್ರಶೇಖರ್ ಮಾತಾಡಿದರೆ ಅವರು ಯಾರು ನೌಕರರ ಪರ ಮಾತಾಡೊಕೆ ಎಂಬ ಪ್ರಶ್ನೆಗಳು ಸರ್ಕಾರದಿಂದಲೇ ಬರುತ್ತವೇ. ಯಶ್ ಮತ್ತಿತರರ ಮೇಲಿರುವ ಸಹಾನುಭೂತಿ ತಮ್ಮ ನೌಕರರ ಮೇಲಿಲ್ಲ ಏಕೆ ಅನ್ನುವುದು ಜನಸಾಮಾನ್ಯರ ಪ್ರಶ್ನೆ‌

ನಮ್ಮ ನೌಕರ ಬಂಧುಗಳು ಕರ್ತವ್ಯಕ್ಕೆ ಹಾಜರಾಗಿ ಮುಷ್ಕರ ಸ್ಥಗಿತಗೊಳಿಸಿದರೆ ಮತ್ತೆ ಮಾತುಕತೆ ಪ್ರಕ್ರಿಯೆ ಮುಂದುವರೆದು ನೌಕರರಿಗೇ ಹೆಚ್ಚಿನ ಅನುಕೂಲವಾಗುತ್ತದೆ. ಆದರೆ ಕೆಲವು ಪಟ್ಟಭದ್ರರ ಚಿತಾವಣೆಯಿಂದ ಇದು ಕೈಗೂಡುತ್ತಿಲ್ಲ ಎಂದು ಇನ್ ಡೈರೆಕ್ಟ್ ಆಗಿ ಕೋಡಿಹಳ್ಳಿ ವಿರುದ್ಧ ಕಿಡಿಕಾರಿರುವ ರೀತಿ ಕಾಣಿಸುತ್ತಿದೆ.

ಇನ್ನಾದರೂ ಸರ್ಕಾರದ ಸಕಾರಾತ್ಮಕ ಮನಸ್ಸನ್ನು ಅರ್ಥಮಾಡಿಕೊಂಡು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮತ್ತೊಮ್ಮೆ ನಮ್ಮ ನೌಕರ ವರ್ಗದವರಲ್ಲಿ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ.

ಲಕ್ಷ್ಮಣ ಸವದಿ

(ಉಪ ಮುಖ್ಯಮಂತ್ರಿಗಳು, ಸಾರಿಗೆ ಇಲಾಖೆ, ಕರ್ನಾಟಕ ಸರ್ಕಾರ)

-From Office of the Deputy Chief Minister, Transport Department

ಇಷ್ಟೆಲ್ಲ ಇವತ್ತು ಮಾತಾಡುವ ಮೊದಲು ಇಂತಹ ಪರಿಸ್ಥಿತಿಯನ್ನು ಮನವರಿಕೆ ಮಾಡಿ, ಕರೊನ ಪರಿಸ್ಥಿತಿ ಮತ್ತು ಆರ್ಥಿಕ ಪರಿಸ್ಥಿತಿ ಸರಿದೂಗುತ್ತಿದಂತೆ ನಿಮ್ಮ ಸಂಬಳ ಬೇಡಿಕೆಯನ್ನು ಪೂರೈಸುತ್ತೇವೆ ಎಂಬ ಮಾನವೀಯ ಆರೋಗ್ಯಕರ ಮಾತುಕತೆ ಆಡುವ ಬದಲು ನೀನಾ ನಾನು ಅನ್ನೋ ಜಿದ್ದಾ ಜಿದ್ದಿಗೆ ಬೀಳಬಾರದು.

Previous Post

ಉಪ ಚುನಾವಣೆ ಪ್ರಚಾರ ಅಂತ್ಯದ ಬಳಿಕ ನೆನಪಾಯಿತೆ ಕರೋನಾ ಅಲೆ?

Next Post

Covid ಹೆಸರಲ್ಲಿ ಶುರುವಾಯ್ತಾ ಲೂಟಿ ದಂಧೆ.! ಹೆಚ್‌ಡಿಕೆ ಗೆ ಬೆಡ್‌ ಇಲ್ಲ ಅಂದ್ರೆ ಜನಸಾಮಾನ್ಯರ ಗತಿಯೇನು.!

Related Posts

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ
Uncategorized

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

by ಪ್ರತಿಧ್ವನಿ
October 15, 2025
0

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್...

Read moreDetails

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
Next Post
Covid ಹೆಸರಲ್ಲಿ ಶುರುವಾಯ್ತಾ ಲೂಟಿ ದಂಧೆ.! ಹೆಚ್‌ಡಿಕೆ ಗೆ ಬೆಡ್‌ ಇಲ್ಲ ಅಂದ್ರೆ ಜನಸಾಮಾನ್ಯರ ಗತಿಯೇನು.!

Covid ಹೆಸರಲ್ಲಿ ಶುರುವಾಯ್ತಾ ಲೂಟಿ ದಂಧೆ.! ಹೆಚ್‌ಡಿಕೆ ಗೆ ಬೆಡ್‌ ಇಲ್ಲ ಅಂದ್ರೆ ಜನಸಾಮಾನ್ಯರ ಗತಿಯೇನು.!

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada