ಬೆಂಗಳೂರು (Bengaluru): ಲೋಕಾಯುಕ್ತ (Lokayukta) ಪೊಲೀಸರು ಎಫ್ಐಆರ್ (FIR) ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರೆಸುವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivakumar)
ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ಯಡಿಯೂರಪ್ಪ (yediyurappa) ನೇತೃತ್ವದ ಬಿಜೆಪಿ ಸರ್ಕಾರ ಸಿಬಿಐ(CBI) ತನಿಖೆಗೆ ನೀಡಿದ್ದೆ ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ವಾಪಸ್ ಪಡೆದು ಲೋಕಾಯುಕ್ತಕ್ಕೆ ವಹಿಸಿದೆ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೋಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ ಎಂದರು.
ಸರ್ಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡುವವರಿಗೆ ನೂರಾರು ನೋಟಿಸ್ ನೀಡುತ್ತಿದ್ದಾರೆ. ಯಾಕೆ ನೋಟಿಸ್ ನೀಡುತ್ತಿದ್ದಾರೆಂದು ಗೊತ್ತಿಲ್ಲ ಎಂದು ಹೇಳಿದರು.
ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ರಿಟ್ ಅರ್ಜಿ ಹೈಕೋರ್ಟ್ (Highcourt) ನಲ್ಲಿದೆ.
#dkshivakumar #bengaluru #lokayukta