ಬೆಂಗಳೂರು : ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು ನಾಲ್ಕು ಕ್ಷೇತ್ರಗಳಿಗೆ ಆ.23ರಂದು ನಡೆದಿದ್ದ ಚುನಾವಣೆಯ (Election) ಮತ ಎಣಿಕೆ (Vote Counting) ಪ್ರಕ್ರಿಯೆ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.
ಕಣದಲ್ಲಿರುವ ಒಟ್ಟು 43 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಹೊರಬೀಳಲಿದ್ದು, ತೀವ್ರ ಕುತೂಹಲ ಕೆರಳಿಸಿದೆ. ನಾಲ್ಕೂ ಕ್ಷೇತ್ರಗಳ ಮತಪೆಟ್ಟಿಗೆಗಳನ್ನು ಆಯಾ ನಿಗದಿತ ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಪಶ್ಚಿಮ ಪದವೀಧರರ ಕ್ಷೇತ್ರದ ಮತಪೆಟ್ಟಿಗೆಗಳನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸ್ಟ್ರಾಂಗ್ ರೂಮ್‌ನಲ್ಲಿ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತಪೆಟ್ಟಿಗೆಗಳನ್ನು ಕಲಬುರಗಿ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸ್ಟ್ರಾಂಗ್ ರೂಮ್‌ನಲ್ಲಿ ಸಂರಕ್ಷಿಸಲಾಗಿದೆ. ಇದರೊಂದಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತಪೆಟ್ಟಿಗೆಗಳನ್ನು ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನ ಸ್ಟ್ರಾಂಗ್ ರೂಮ್‌ನಲ್ಲಿ ಭದ್ರವಾಗಿ ಇಡಲಾಗಿದೆ.
ಮತ ಎಣಿಕೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಸ್ಟ್ರಾಂಗ್ ರೂಮ್‌ಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
2026ನೇ ಸಾಲಿನ ಪ್ರತಿಷ್ಠಿತ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟ: 10 ಸಾಧಕರಿಗೆ ಗೌರವ






