ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ನಾಗಮಂಗಲದ ರಾಮಚಂದ್ರ ಅಗ್ರಹಾರದಲ್ಲಿ ಕರುವೊಂದನ್ನ ಎಳೆದೊಯ್ದಿದೆ.
ರಾಮಚಂದ್ರ ಅಗ್ರಹಾರದ ನಿವಾಸಿ ನಂಜಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ ಚಿರತೆ ಕರುವನ್ನ ಎಳೆದೊಯ್ದಿದೆ. ಚಿರತೆ ಕರುವನ್ನು ಎಳೆದೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಗ್ರಾಮದಲ್ಲಿ ಚಿರತೆಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಚಿರತೆ ಸೆರೆಹಿಡಿಯಲು ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.