ರಾಷ್ಟ್ರೀಯ ಹೆದ್ದಾರಿ (National highway) ದಾಟುತ್ತಿದ್ದ ಚಿರತೆಗೆ (Leopard) ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಚಿತ್ರದುರ್ಗದಲ್ಲಿ (Chitrdurga) ನಡೆದಿದೆ. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕಣಕುಪ್ಪೆ ಗೇಟ್ ಬಳಿ ಈ ಘಟನೆ ಸಂಭವಿಸಿದ್ದು ಸುಮಾರು ಎರಡು ವರ್ಷ ಪ್ರಾಯದ ಚಿರತೆ ಸಾವನ್ನಪಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಸಮೀಪ ತಡರಾತ್ರಿ ಈ ಮಾರ್ಗದಲ್ಲಿ ಚಿರತೆ ಮತ್ತು ಕರಡಿಯ ಓಡಾಟ ಹೆಚ್ಚಾಗಿದೆ. ಹೀಗಾಗಿ ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದಿದೆ.
ಈ ಘಟನೆಯ ಮಾಹಿತಿ ತಿಳಿದು ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದಾಗಿ ಹೃವೆನಲ್ಲಿ ಸಂಚರಿಸುವ ಬೈಕ್ ಸವಾರರಲ್ಲಿ ಆತಂಕ ಹೆಚ್ಚಾಗಿದೆ.