ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಚಿರತೆ ಮರಿ ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಇಲ್ಲಿನ ಅಲಿಪುರ್ ಪ್ರದೇಶದ ಖತುಶ್ಯಾಮ್ ದೇವಸ್ಥಾನದ ಬಳಿ ಇಂದು ಬೆಳಗ್ಗೆ ಚಿರತೆ ಮರಿಯೊಂದು ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಚಿರತೆ ಮರಿಯ ಶವವನ್ನು ಪರಿಶೀಲನೆ ನಡೆಸಿ. ಘಟನಾ ಸ್ಥಳದಿಂದ ಮೃತ ಚಿರತೆ ಮರಿಯನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇನ್ನು ಘಟನೆ ಕುರಿತಾಗಿ ಪೊಲೀಸರು ಹಿಟ್ ಅಂಡ್ ರನ್ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.