• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾರ್ಪೊರೇಟ್‌ ಸಂಸ್ಥೆಗಳು ಐಟಿಐಗಳನ್ನು ದತ್ತು ತೆಗೆದುಕೊಳ್ಳಲಿ: ಶರಣ್ ಪ್ರಕಾಶ್ ಪಾಟೀಲ್ ಸಲಹೆ

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಹಲವು ಸಂಸ್ಥೆಗಳ ಜೊತೆ ಒಪ್ಪಂದಕ್ಕೆ ಸಚಿವರ ಸಮ್ಮುಖದಲ್ಲಿ ಸಹಿ | ಐಟಿಐಗಳ ಉನ್ನತೀಕರಣಕ್ಕೆ ಕ್ರಮ

ADVERTISEMENT

ಬೆಂಗಳೂರು, ಡಿಸೆಂಬರ್, 4: ಯುವ ಸಮೂಹಕ್ಕೆ ಕೌಶಲ್ಯದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆ ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು ಮತ್ತು ಉದ್ಯೋಗಾಧರಿತ ಕೌಶಲ್ಯ ತರಬೇತಿ ಕೊಡಿಸಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದರು.

ಬೆಂಗಳೂರಿ ಐಎಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಸಚಿವರ ಸಮ್ಮುಖದಲ್ಲಿ ತರಬೇತಿ ಹಾಗೂ ಉದ್ಯೋಗಾವಕಾಶಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

Rahul gandhi ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಪೊಲೀಸರು ಅದನ್ನ ಇಲ್ಲಿ ಹೇಳ್ಬೇಡಿ ಎಂದ ಸ್ಪೀಕರ್‌..! #modi

ನಂತರ ಮಾತನಾಡಿದ ಸಚಿವರು, ರಾಜ್ಯದ ಹತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಆಧುನೀಕರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಐಟಿಐ ಸಂಸ್ಥೆಗಳ ಉನ್ನತೀಕರಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಐಟಿಐಗಳಲ್ಲಿರುವ ಹಳೆಯ ಉಪಕರಣಗಳನ್ನು ಬದಲಾವಣೆ ಮಾಡಿ ಹೊಸ ಉಪಕರಣಗಳನ್ನು ಅಳವಡಿಸಲು ನಾವು ಮುಂದಾಗಿದ್ದೇವೆ. ಇದರಿಂದ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಬೆಂಗಳೂರು, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಂದು ಶರಣ್ ಪ್ರಕಾಶ್ ಪಾಟೀಲ್ ವಿವರಿಸಿದರು.

ಪ್ರಧಾನಮಂತ್ರಿ ಸೂರ್ಯ ಘರ್-ಮುಫ್ತ್ ಬಿಜ್ಲಿ ಯೋಜನೆಯಡಿಯಲ್ಲಿ ರಾಜ್ಯದ 252 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಐದು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸೌರ ಚಾವಣಿ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಒಂದು ವಾರದ ಅಲ್ಪಾವಧಿ ತರಬೇತಿಯನ್ನು ಪಡೆದಿದ್ದಾರೆ. ಇವರಿಗೆ ಈಗ ಹೆಚ್ಚಿನ ಉದ್ಯೋಗ ಅವಕಾಶ ದೊರೆಯಲಿದೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ 10 ತರಬೇತಿದಾರರಿಗೆ ಪ್ರಮಾಣ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ಐಟಿಐಗಳ ಪ್ರಾಂಶುಪಾಲರಿಗೆ ವಿಶೇಷ ಕಾರ್ಯಾಗಾರವನ್ನೂ ಏರ್ಪಡಿಸಲಾಗಿತ್ತು. ಐಟಿಐಗಳಲ್ಲಿನ ಕುಂದುಕೊರತೆಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡು, ಅವುಗಳನ್ನು ಕೂಡಲೇ ನಿವಾರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾದ ಆರ್. ರಾಗಪ್ರಿಯ, ವಾಧ್ವಾನಿ ಫೌಂಡೇಶನ್ನಿನ ಸುನಿಲ್ ದಹಿಯಾ, ಬಾಷ್ ಸಂಸ್ಥೆ ಸಕೀನಾ ಬಕರ್ ಮತ್ತು ಬಿ ಜಗದೀಶ್, ಶ್ನೈಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ನಿನ ಅಭಿಮನ್ಯು ಸಾಹು, ಕ್ವೆಸ್ಟ್ ಅಲಯನ್ಸ್ ಸಂಸ್ಥೆಯ ಶ್ರೇಯಾ, ಸೇರಿದಂತೆ ಗಣ್ಯರು, ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ನಾಲ್ಕು ಐಟಿಐ ಸಂಸ್ಥೆಗಳಿಗೆ ಪ್ರಶಂಸಾ ಪತ್ರ

ಇದೇ ಸಂದರ್ಭದಲ್ಲಿ ನವದೆಹಲಿಯಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಟ್ರೈನಿಂಗ್ (DGT) ಪ್ರಕಾರ ಅತ್ಯುತ್ತಮ ಶ್ರೇಣಿ ಪಡೆದ ತುಮಕೂರು, ಮುಳಬಾಗಲು, ಮಾಲೂರು, ಪಾವಗಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.

ಇಂದು ಜಾರಿಗೆ ಬಂದ ಒಪ್ಪಂದ

  • ರಾಜ್ಯದ 10 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ BRIDGE ಕಾರ್ಯಕ್ರಮ ಅನುಷ್ಠಾನಕ್ಕೆ ಬಾಷ್ ಲಿಮಿಟೆಡ್ ಮತ್ತು ಫಂಕ್ಷನಲ್ ವೊಕೇಷನಲ್ ಟ್ರೇನಿಂಗ್ ರಿಸರ್ಚ್ ಸೊಸೈಟಿ (FVTRS) ಜೊತೆ ಒಪ್ಪಂದ.
  • ಬೆಂಗಳೂರು ಮತ್ತು ಕಲಬುರಗಿ ವಿಭಾಗಗಳಲ್ಲಿರುವ 126 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತುದಾರರು/ಕಿರಿಯ ತರಬೇತಿ ಅಧಿಕಾರಿಗಳಿಗೆ ಉದ್ಯೋಗಾರ್ಹತಾ ಕೌಶಲ್ಯಗಳ ತರಬೇತಿಗೆ ವಾಧ್ವಾನಿ ಫೌಂಡೇಶನ್ ಜೊತೆ ಒಪ್ಪಂದ.
  • ಮೈಸೂರು, ಬೆಳಗಾವಿ ವಿಭಾಗಗಳ 144 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತುದಾರರು/ಕಿರಿಯ ತರಬೇತಿ ಅಧಿಕಾರಿಗಳಿಗೆ ಉದ್ಯೋಗಾರ್ಹತಾ ಕೌಶಲ್ಯಗಳ ತರಬೇತಿ ನೀಡಲು ಕ್ವೆಸ್ಟ್ ಅಲಯನ್ಸ್ ಜೊತೆ ಒಪ್ಪಂದ.
  • 20 ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸೌರ, ವಿದ್ಯುತ್ ಮತ್ತು ಕೈಗಾರಿಕಾ ಸ್ವಯಂಚಾಲನ ವ್ಯಾಪಾರಗಳಿಗೆ ಪ್ರಯೋಗಾಲಯಗಳನ್ನು ಸ್ಥಾಪಿಸಲು ಶ್ನೈಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಜೊತೆ ಒಪ್ಪಂದ.
Tags: dr sharan prakash patildr sharan prakash patil wifeex minister sharan prakash patilminister sharan prakash patilsharan prakash patilsharan prakash patil against bjpsharan prakash patil agesharan prakash patil latest newssharan prakash patil newssharan prakash patil on rsssharan prakash patil pasharan prakash patil sedamsharan prakash patil slams bjpsharan prakash patil today newssharan prakash patil udagi
Previous Post

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು:ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು

Next Post

ಡಿಕೆಶಿಯ ಅಧಿಕಾರ ಹಂಚಿಕೆ ಒಪ್ಪಂದ:ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲವೆಂದ ಸಿಎಂ ಸಿದ್ದರಾಮಯ್ಯ

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post

ಡಿಕೆಶಿಯ ಅಧಿಕಾರ ಹಂಚಿಕೆ ಒಪ್ಪಂದ:ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲವೆಂದ ಸಿಎಂ ಸಿದ್ದರಾಮಯ್ಯ

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!