ಕರೋನಾ ತುರ್ತು ಪರಿಸ್ಥಿತಿ ಘೋಷಿಸಿ, ಆರು ತಿಂಗಳು ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ಪಡೆಯಲಿ – ಕುರಬೂರು ಶಾಂತಕುಮಾರ್

[Sassy_Social_Share]

ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಪಟ್ಟಭದ್ರರ ಹಿಡಿತದಲ್ಲಿರುವ ಕಾರಣ ಸರ್ಕಾರದ ಆದೇಶಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಬಡವರಿಗೆ ಹಳ್ಳಿಗಾಡಿನ ಜನರಿಗೆ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಹಾಸಿಗೆ ಆಮ್ಲಜನಕ ವೆಂಟಿಲೇಟರ್ ಇಲ್ಲಾ ಎನ್ನುತ್ತಾರೆ. ಕಷ್ಟಪಟ್ಟು ಆಸ್ಪತ್ರೆಗೆ ದಾಖಲಾದ ರೋಗಿಗಳಿಗೂ ಚಿಕಿತ್ಸೆ ಫಲಕಾರಿಯಾಗದೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಸೇವಾ ಮನೋಭಾವನೆ ಕಡಿಮೆಯಾಗಿ ಹಣ  ದೋಚುವ ದಂಧೆ ಹೆಚ್ಚುತ್ತಿದೆ. ಇದನ್ನು ಗಮನಿಸಿ ರಾಜ್ಯ ಸರ್ಕಾರ ಕರೋನಾ ತುರ್ತುಪರಿಸ್ಥಿತಿ ಜಾರಿ ಮಾಡಿ, ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಕನಿಷ್ಠ 6 ತಿಂಗಳಕಾಲ ಸರ್ಕಾರದ ನಿಯಂತ್ರಣಕ್ಕೆ ಪಡೆದುಕೊಳ್ಳಬೇಕು. ಇದರಿಂದ  ಕರೋನಾ ಸೋಂಕಿತ ಬಡವರಿಗೆ ಸುಲಭವಾಗಿ ಚಿಕಿತ್ಸೆ ಕೊಡಿಸಲು ರೋಗಿಗಳಿಂದ ನಿರ್ದಿಷ್ಟ ಪಡಿಸಿದ ಹಣ ಪಡೆದುಕೊಳ್ಳುವುದು ಸಾಧ್ಯವಾಗುತ್ತದೆ  ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಅಭಿಪ್ರಾಯಿಸಿದ್ದಾರೆ.

ಯಾವುದೇ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಫಲಕಾರಿಯಾಗದೆ  ಮರಣ ಹೊಂದಿದ  ರೋಗಿಯ ಹಣ ಪಾವತಿ  ಮನ್ನಾ ಮಾಡಲು ಸರ್ಕಾರ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿರುವ ಅವರು, ಗ್ರಾಮೀಣ ಭಾಗದಲ್ಲಿ ಕರೋನಾ  ಶಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ತಾಲೂಕು ಮಟ್ಟದಲ್ಲಿರುವ ಕೋವಿಡ್ ಕೇಂದ್ರಗಳು ಸಾಕಾಗುತ್ತಿಲ್ಲ. ಆದ್ದರಿಂದ ಹಳ್ಳಿಗಾಡಿನ ಜನ  ನಗರ ಪ್ರದೇಶಗಳಿಗೆ ಬಂದು ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗಾಗಿ ಹುಡುಕಾಡುತ್ತಿದ್ದಾರೆ. ಆಸ್ಪತ್ರೆ ಸಿಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ ಕಾರಣ ತಾಲೂಕು ಮಟ್ಟದಲ್ಲಿ ಹೆಚ್ಚುವರಿಯಾಗಿ ಕೋವಿಡ್  ಕೇಂದ್ರಗಳನ್ನು ಹಾಗೂ ತಾಲೂಕು ಮಟ್ಟದ ವಾರ್ ರೂಮ್ ತುರ್ತಾಗಿ ತೆರೆಯಬೇಕು. ಈ ಕೇಂದ್ರಗಳಿಗೆ ನಿವೃತ್ತ ವೈದ್ಯರ ಸೇವೆಯನ್ನ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಹಳ್ಳಿಗಳಲ್ಲಿ ಕರೋನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಹಳ್ಳಿ ಜನರು ಕರೋನ ಬಗ್ಗೆ ಭಯ ಪಡುತ್ತಿರುವ ಕಾರಣ  ಸಮರೋಪಾದಿಯಲ್ಲಿ ಕರೋನಾ ಪರೀಕ್ಷೆಗಳನ್ನು ನಡೆಸುವಂತಾಗಬೇಕು. ಕೋವಿಡ್ ಕೇಂದ್ರಗಳನ್ನು ತೆರೆಯಲು ಸಮುದಾಯ ಭವನಗಳನ್ನು ಬಳಸಿಕೊಳ್ಳಬೇಕು. ರಾಜ್ಯಾದ್ಯಂತ ಜನಪ್ರತಿನಿಧಿಗಳು ಇಂತಹ ಸಂಕಷ್ಟದ ಸಮಯದಲ್ಲಿ ಟೀಕೆ-ಟಿಪ್ಪಣಿಗಳನ್ನು ಬಿಟ್ಟು ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಿ ಮಾದರಿಯಾಗಿ  ಕಾರ್ಯನಿರ್ವಹಿಸುತ್ತಿರುವ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜನಪ್ರತಿನಿಧಿ ಶಾಸಕರು ಗೋಪಾಲಯ್ಯನವರ  ಸೇವಾಕಾರ್ಯವನ್ನು ಮಾದರಿಯಾಗಿ ಬಳಸಿಕೊಂಡು ರಾಜ್ಯಾದ್ಯಂತ ಆಯಾ ಕ್ಷೇತ್ರದ ಶಾಸಕರು ಸ್ವಯಂ ಪ್ರೇರಿತವಾಗಿ ಇದೇ ಕಾರ್ಯ ನಡೆಸುವ ಮೂಲಕ ಅವರ ಕ್ಷೇತ್ರದ ಮತದಾರರ ರಕ್ಷಣೆಗೆ ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರೈತರ ಕೃಷಿ ಉತ್ಪನ್ನಗಳಿಗೆ ಖರೀದಿದಾರರು ಇಲ್ಲದೆ ಬೆಲೆ ಕುಸಿತ ವಾಗುತ್ತಿರುವ ಕಾರಣ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸುವಂಥ ಆಗಬೇಕು ಈ ಮೂಲಕ ರೈತರ ರಕ್ಷಣೆ ಮಾಡಬೇಕು. ಸರ್ಕಾರಕ್ಕೆ ಇದು ಸಾಧ್ಯವಾಗದಿದ್ದರೆ  ಕೃಷಿಕ್ಷೇತ್ರವನ್ನು ಲಾಕ್ಡೌನ್ ವ್ಯಾಪ್ತಿಗೆ ಸೇರಿಸಿ ಕೃಷಿ ಚಟುವಟಿಕೆ  ನಿಲ್ಲಿಸಿ ರೈತರು ಮತ್ತಷ್ಟು ಅಪಾಯಕ್ಕೆ ಸಿಲುಕುವುದನ್ನು ತಪ್ಪಿಸಿ. ಕರೋನಾ ರೋಗಿಗಳಿಗೆ ನೀಡುವ ಚಿಕಿತ್ಸೆಯಲ್ಲಿ ಹೆಚ್ಚಿನ ಶ್ರಮ ವಹಿಸುತ್ತಿರುವ ಸೇವಾ ಸಿಬ್ಬಂದಿ ಶುಶ್ರಕಿಯರು. ಆಯಾಗಳು. ಸ್ವಚ್ಛತಾ ಕರ್ಮಿಗಳ ಸಂಬಳವನ್ನು ಹೆಚ್ಚುವರಿಯಾಗಿ ಬೋನಸ್ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ರಾಜ್ಯ ಸರ್ಕಾರವನ್ನು  ಅವರು ಒತ್ತಾಯಿಸಿದ್ದಾರೆ.

Related posts

Latest posts

ನೆಹರೂ-ಗಾಂಧಿ ಕುಟುಂಬದಿಂದಲೇ ಭಾರತ ಇಂದು ಉಳಿದುಕೊಂಡಿದೆ: ಕೇಂದ್ರಕ್ಕೆ ಚಾಟಿಯೇಟು ನೀಡಿದ ಶಿವಸೇನೆ

COVID-19 ಅನ್ನು ನಿಭಾಯಿಸಲು ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದ್ದರೆ, ದೆಹಲಿಯಲ್ಲಿ ಬಹುಕೋಟಿ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸುವ ಕನಿಷ್ಟ ಸೌಜನ್ಯವನ್ನೂ ಮೋದಿ ಸರ್ಕಾರ ತೋರುತ್ತಿಲ್ಲ ಎಂದು ಕೇಂದ್ರ ಸರ್ಕಾರವನ್ನು...

ರಾಜ್ಯಗಳಿಗೆ ಆಕ್ಸಿಜನ್ ವಿತರಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ಸ್ಥಾಪಿಸಿದ ಸುಪ್ರೀಂ ಕೋರ್ಟ್.!

ದೇಶಾದ್ಯಂತ ಕರೋನ ಎರಡನೇ ಅಲೆ ವ್ಯಾಪಕವಾಗಿ ಹರಡಿರುವ ಮಧ್ಯೆ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಅದನ್ನು ಸಮರ್ಪಕವಾಗಿ ಎದುರಿಸಲು ಮತ್ತು ವೈಜ್ಞಾನಿಕವಾಗಿ ಮೆಡಿಕಲ್ ಆಕ್ಸಿಜನ್ಗಳನ್ನು ಹಂಚುವ ವಿಧಾನವನ್ನು ರೂಪಿಸಲು...

ಲಾಕ್ ಡೌನ್ ಘೋಷಿಸಿ ಬಡವರ್ಗದವರಿಗೆ ಯಾವುದೇ ಯೋಜನೆ ಘೋಷಿಸದ ರಾಜ್ಯ ಸರ್ಕಾರ

ಕೊರೋನ ಸಾಂಕ್ರಮಿಕವು ದಿನೇ ದಿನೇ ಉಲ್ಪಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳು ಲಾಕ್ ಡೌನ್ ಘೋಷಿಸಿವೆ. ಇದು ಅನಿವಾರ್ಯ ಕ್ರಮವೂ ಕೂಡ ಆಗಿದೆ. ಆದರೆ ಈ ಲಾಕ್ ಡೌನ್ ಘೋಷಣೆಯಿಂದ...