DK Suresh ಅವರು ಸಂಸದರಾಗಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (Vijayendra Yediyurappa) ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರವು ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯವಾದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಡಿ.ಕೆ.ಸುರೇಶ್ ಅವರ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಅವರು, ಸರಕಾರವು ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಣೆ ಮಾಡುತ್ತಿದೆ. ಇಂಥ ಸಂದರ್ಭದಲ್ಲಿ ಸಂಸದರು ಈ ರೀತಿ ಹೇಳಿಕೆ ಕೊಟ್ಟಿರುವುದು ಖಂಡನೀಯ ಎಂದು ಕಿಡಿಕಾರಿದರು.

ಯಾವುದೇ ಒಬ್ಬ ಜನಪ್ರತಿನಿಧಿಯು ತಮ್ಮ ಸ್ಥಾನವನ್ನು ಅಲಂಕರಿಸಿದ ಸಂದರ್ಭದಲ್ಲಿ ಸಂವಿಧಾನವನ್ನು ಮುಂದಿಟ್ಟುಕೊಂಡು ಪ್ರತಿಜ್ಞೆ ಮಾಡುತ್ತಾರೆ. ಭಾರತದ ಅಖಂಡತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡುವುದಾಗಿ ಪ್ರತಿಜ್ಞೆಯನ್ನೂ ಅವರು ಮಾಡಿದ್ದಾರೆ. ಎಲ್ಲೋ ಒಂದು ಕಡೆ ಡಿ.ಕೆ.ಸುರೇಶ್ ಅವರು ಇದನ್ನು ಮರೆತಿರುವಂತಿದೆ ಎಂದು ಮಾತಿನಲ್ಲೇ ತಿವಿದರು.
ಇವರು ಯಾವ ಅಭಿವೃದ್ಧಿ, ಯಾವ ಅನುದಾನದ ಮಾತನಾಡುತ್ತಿದ್ದಾರೆ? ಹಿಂದೆ ಯುಪಿಎ (UPA) ಸರಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಕರ್ನಾಟಕ ರಾಜ್ಯಕ್ಕೆ ಕೇಂದ್ರದಿಂದ 2004 -14 ರವರೆಗೆ 60 ಸಾವಿರ ಕೋಟಿ ರೂ. ಕೊಟ್ಟಿದ್ದರು. 2014 ರಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ 2,36,000 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯಕ್ಕೆ ಕೊಟ್ಟಿದ್ದಾರೆ. ಸುರೇಶ್ ಅವರು ಇದನ್ನು ಗಮನದಲ್ಲಿಟ್ಟುಕೊಂಡು ಮಾತನಾಡಬೇಕು ಎಂದರು
#Vijayendra #Dksuresh #congress #bjp #politics #karnataka #modi #Bharatha











