ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.