• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ:ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಮನಗರ (ಚನ್ನಪಟ್ಟಣ)”ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಮಾಡಲಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.ಚನ್ನಪಟ್ಟಣದ ತಿಟ್ಟಮಾರನಹಳ್ಳಿಯಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ADVERTISEMENT

ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಜನರನ್ನು ಕರೆತಂದ ಬಸ್ ಗಳನ್ನು ಸೀಜ್ ಮಾಡಿ ಎನ್ ಸಿಆರ್ ಹಾಕಿಸಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಅನೇಕ ಚುನಾವಣೆಗಳನ್ನು ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಬಗ್ಗೆ ಅವರಿಗೂ ಜ್ಞಾನವಿದೆ. ನೀತಿ ಸಂಹಿತೆ ಸಮಯದಲ್ಲಿ ಯಾರು ಯಾವ ಪಾತ್ರ ವಹಿಸುತ್ತಾರೆ, ಪ್ರಕ್ರಿಯೆ ಹೇಗಿರುತ್ತದೆ ಎಂದು ಎಲ್ಲರಿಗೂ ಗೊತ್ತಿದೆ. ನೀತಿ ಸಂಹಿತೆ ಉಲ್ಲಂಘನೆ ಆಗಿದ್ದರೆ ಅದು ಚುನಾವಣಾ ಅಧಿಕಾರಿಗಳಿಗೆ ಸಂಬಂಧಪಟ್ಟ ವಿಚಾರ. ಅದು ನಮಗೆ ಸಂಬಂಧಿಸುವುದಿಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಆರೋಪ ಮಾಡುವುದನ್ನೇ ಅಭ್ಯಾಸ ಮಾಡಿಕೊಂಡು, ದಿನ ನಿತ್ಯ ಕಾಂಗ್ರೆಸ್ ವಿರುದ್ಧ ದೂಷಣೆ ಮಾಡುತ್ತಿದ್ದಾರೆ. ಅವರು ಬಸ್ ಗಳಲ್ಲಿ ಜನರನ್ನು ಕರೆ ತಂದಿದ್ದರೆ, ಅದಕ್ಕೆ ಲೆಕ್ಕ ಕೊಡಬೇಕು. ಅದಕ್ಕಾಗಿ ಅನುಮತಿ ಪಡೆಯಬೇಕು ಎಂಬ ಸಾಮಾನ್ಯ ಜ್ಞಾನ ಇಲ್ಲವಾದರೆ, ಅವರು ಹೇಗೆ ಕೇಂದ್ರ ಸಚಿವರಾಗಿದ್ದಾರೆ. ಸಂವಿಧಾನದ ಬಗ್ಗೆ ಮೊದಲು ತಿಳಿದುಕೊಳ್ಳಲಿ. ಬಸ್ ಗಳಿಗೂ ನಮಗೂ ಏನು ಸಂಬಂಧ?” ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯಿಲ್ಲ ಹೀಗಾಗಿ ಯೋಗೇಶ್ವರ್ ಅವರನ್ನು ಹೈಜಾಕ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಯೋಗೇಶ್ವರ್ 9 ಬಾರಿ ಚುನಾವಣೆ ಎದುರಿಸಿ ಐದು ಬಾರಿ ಶಾಸಕರಾಗಿದ್ದಾರೆ. ನಿಮ್ಮ ಮಗನನ್ನು ಚುನಾವಣೆಯಲ್ಲಿ ನಿಲ್ಲಿಸಲು ತಂತ್ರಗಾರಿಕೆ ಮಾಡಿ ಯೋಗೇಶ್ವರ್ ಅವರನ್ನು ಆಚೆ ಕಳಿಸಿದ್ದೀರಿ. ನೀವೇ ಆಚೆ ಹಾಕಿ ಈಗ ಕಾಂಗ್ರೆಸ್ ಮೇಲೆ ದೂಷಣೆ ಮಾಡಬೇಡಿ” ಎಂದರು.

ಷಡ್ಯಂತ್ರ ಮಾಡಿ ಒಟ್ಟಾಗಿ ಸೋಲಿಸುತ್ತಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಯಡಿಯೂರಪ್ಪ ಅವರ ಮನೆಯಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಹೇಳಲೇ? ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿದ್ದು ಏಕೆ? ಷಡ್ಯಂತ್ರ ಮಾಡಲು ಅಲ್ಲವೇ? ಇದೆಲ್ಲವೂ ರಾಜಕಾರಣದ ಪ್ರಕ್ರಿಯೆ. ಅವರ ಕೆಲಸ ಅವರು ಮಾಡುತ್ತಾರೆ, ನಮ್ಮ ಕೆಲಸ ನಾವು ಮಾಡುತ್ತೇವೆ. ರಾಜಕಾರಣದಲ್ಲಿ ಮಗನ ಪ್ರವೇಶಕ್ಕಾಗಿ ಪ್ರವಾಸ ಮಾಡಿಸಿ ಈಗ ಚುನಾವಣೆಗೆ ನಿಲ್ಲಿಸಿದ್ದಾರೆ. ನಾವು ನಮ್ಮ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಅಸಮಾಧಾನ ಇದೆಯೇ ಎಂದು ಕೇಳಿದಾಗ, “ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ.ಪಕ್ಷದಿಂದ ಯಾರೇ ಅಭ್ಯರ್ಥಿ ಮಾಡಿದರೂ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ. ಈಗಲೂ ನಾವು ಅದನ್ನೇ ಹೇಳುತ್ತಿದ್ದೇವೆ. ಇಲ್ಲಿ ಯೋಗೇಶ್ವರ್ ಅಭ್ಯರ್ಥಿಯಲ್ಲ ಡಿ.ಕೆ. ಶಿವಕುಮಾರ್ ಅಭ್ಯರ್ಥಿ. ಹೀಗಾಗಿ ಕಾಂಗ್ರೆಸ್ ಗೆ ಮತ ನೀಡಿ” ಎಂದು ಮನವಿ ಮಾಡಿದರು.

ನೀವೇ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದೀರಾ ಎಂದು ಕೇಳಿದಾಗ, “ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ನಾವು ಎಲ್ಲರೂ ಚುನಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

Tags: BJPchannapatna by electionCongress PartyD.K.SureshLet Kumarswamy stop making accusations and face elections:Nikhil KumaraswamyUnion minister HD Kumaraswamyಜೆಡಿಎಸ್
Previous Post

ರಾಮನಗರದಿಂದ ಜನ ಕುಮಾರಸ್ವಾಮಿಯನ್ನ ಓಡಿಸ್ತಿದ್ದಾರೆ. ಎಲ್ ಆರ್ ಶಿವರಾಮೇಗೌಡ.

Next Post

ಹೋಗಿದ್ದು Dating ಆಗಿದ್ದು Cheating..!!

Related Posts

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ(Winter Session 2025) ಇಂದು ಮಹತ್ವದ ವಿಧೇಯಕವೊಂದನ್ನು ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸರ್ಕಾರ ಮಹತ್ವ...

Read moreDetails
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
Next Post

ಹೋಗಿದ್ದು Dating ಆಗಿದ್ದು Cheating..!!

Recent News

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!