• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರತಿಯೊಬ್ಬರಲ್ಲಿ ದೇಶಪ್ರೇಮ ಜಾಗೃತಗೊಳ್ಳಲಿ: ಪ್ರಭು ಚವ್ಹಾಣ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, Uncategorized, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ :ಪರಕೀಯರ ಆಳ್ವಿಕೆಯಿಂದ ಮುಕ್ತಿಗೊಳಿಸಿ ದೇಶವನ್ನು ಸ್ವಾತಂತ್ರ್ಯಗೊಳಿಸಲು ಅಸಂಖ್ಯಾತ ಹೋರಾಟಗಾರರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಅವರ ಹೋರಾಟವನ್ನು ಸ್ಮರಿಸಬೇಕು. ದೇಶದ ಪ್ರತಿಯೊಬ್ಬರಲ್ಲಿಯೂ ದೇಶಪ್ರೇಮ ಜಾಗೃತಗೊಳ್ಳಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ADVERTISEMENT

ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಹಾತ್ಮಗಾಂಧಿ, ಸುಭಾಷಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ವೀರ ಸಾವರ್ಕರ್, ಬಾಲ ಗಂಗಾಧರ ತಿಲಕ್, ಭಗತಸಿಂಗ್, ಚಂದ್ರಶೇಖರ್ ಆಜಾದ್, ರಾಜಗುರು, ಸುಖದೇವರಂತಹ ಅನೇಕ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದರು. ಅಂತಹ ದೇಶದಲ್ಲಿ ಹುಟ್ಟಿದಕ್ಕೆ ಗರ್ವಪಡಬೇಕು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶದಲ್ಲಿ ಉತ್ತಮ ಕೆಲಸಗಳಾಗುತ್ತಿದೆ. ವಿಕಸಿತ ಬಾರತದ ಕನಸು ನನಸಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸುತ್ತಿದೆ. ಬಜೆಟ್‌ನಲ್ಲಿ ರೈತರಿಗಾಗಿ ವಿಶೇಷ ಆದ್ಯತೆ, ದೇಶದ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಸ್ವಾತಂತ್ರö್ಯ ದಿನಾಚರಣೆಯನ್ನು ವಿಶೇಷವಾಗಿಸಲು ಮತ್ತು ಜನರಲ್ಲಿ ದೇಶಭಕ್ತಿ ಮೂಡಿಸಲು ಆರಂಭಿಸಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಸರ್ವಾಂಗೀಣ ಅಭಿವೃದ್ಧಿಪಡಿಸುವುದು ನನ್ನ ಆದ್ಯತೆಯಾಗಿದ್ದು, ಅದರಂತೆ ಕೆಲಸ ಮಾಡುತ್ತಿದ್ದೇನೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಡಲಾಗಿದೆ. ತರಗತಿ ಕೋಣೆಗಳ ನಿರ್ಮಾಣ, ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಸಲಾಗುತ್ತಿದೆ. ವಸತಿ ಶಾಲೆಗಳು, ಆಸ್ಪತ್ರೆ, ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ.

ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಪ್ರಯತ್ನಸುತ್ತಿದ್ದೇನೆ. ಸಿಪೆಟ್ ಕೇಂದ್ರಕ್ಕೆ ಮುಖ್ಯಮಂತ್ರಿಯವರಿAದ ಭೂಮಿ ಪೂಜೆ ನೆರವೇರಿಸಲಾಗಿದೆ. ಹೆಡಗಾಪೂರನಲ್ಲಿ ಗೋಶಾಲೆ ನಿರ್ಮಾಣಗೊಂಡಿದೆ. ಜಾನುವಾರು ತಳಿ ಸಂವರ್ಧನ ಕೇಂದ್ರಕ್ಕೆ ಪೂಜೆ ನೆರವೇರಿಸಲಾಗಿದೆ. ಚಿಂತಾಕಿ, ಹೊರಂಡಿ, ಬಲ್ಲೂರ(ಜೆ)ನಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ನಾಗೂರ್‌ನಲ್ಲಿ 220 ಕೆ.ವಿ ವಿದ್ಯುತ್ ಉಪ ಕೇಂದ್ರ ಹೀಗೆ ಹತ್ತು ಹಲವು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.

ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ ಅವರು ಧ್ವಜಾರೋಹಣ ನೆರವೇರಿಸಿದರು.ಶಿಕ್ಷಕ ಸಂಜೀವಕುಮಾರ ಬಿರಾದಾರ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರ ಸಿಂಗ್ ಠಾಕೂರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರಘುವೀರಸಿಂಗ್ ಠಾಕೂರ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸ್ವಾಮಿದಾಸ, ಅಧಿಕಾರಿಗಳಾದ ಶಿವಕುಮಾರ ಘಾಟೆ, ವೆಂಕಟೇಶ ಶಿಂಧೆ, ಡಾ.ಗಾಯತ್ರಿ, ರವೀಂದ್ರ, ಧೂಳಪ್ಪ ಸೇರಿದಂತೆ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಾಸಕರು ಸನ್ಮಾನಿಸಿದರು. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಸಕರು ಬಹುಮಾನ ನೀಡಿ ಪ್ರೋತ್ಸಾಹಿಸಿದರು.

ಬಿಜೆಪಿ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಔರಾದ(ಬಿ) ಬಿಜೆಪಿ ಮಂಡಲ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ, ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಸಚಿನ ರಾಠೋಡ್, ಬಸವರಾಜ ಹಳ್ಳೆ, ರಮೇಶ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Tags: 78 Independence DayBJPGovernment of KarnatakaMLA Prabhu Chavan
Previous Post

ಬೀದರ್ ನಗರದ ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಭಾಗಿ

Next Post

ಬಾಂಗ್ಲಾ ಬೆಳವಣಿಗೆ ಸ್ವಾತಂತ್ರ್ಯದ ಮೌಲ್ಯ ನೆನಪಿಸುತ್ತಿದೆ: ಡಿ.ವೈ. ಚಂದ್ರಚೂಡ್‌

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಬಾಂಗ್ಲಾ ಬೆಳವಣಿಗೆ ಸ್ವಾತಂತ್ರ್ಯದ ಮೌಲ್ಯ ನೆನಪಿಸುತ್ತಿದೆ: ಡಿ.ವೈ. ಚಂದ್ರಚೂಡ್‌

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!