• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮನರೇಗಾ ಬಗ್ಗೆ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲ್..!

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮನರೇಗಾ ಬಗ್ಗೆ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲ್..!
Share on WhatsAppShare on FacebookShare on Telegram

ಬೆಂಗಳೂರು : ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ.

ADVERTISEMENT

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,  ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ ಎಂದು ಆಗ್ರಹಿಸಿದ್ದಾರೆ.

DK Shivakumar ; ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ

ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ ಮಾಡಲು ಸಾಧ್ಯವಿಲ್ಲ, ಅವರು ನಿಜವಾಗಿಯೂ ಈ ರೀತಿ ಹೇಳಿದ್ದಾರಾ?” ಎಂದು ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ಮಾಧ್ಯಮಗಳಿಗೆ ಡಿಕೆಶಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಮನರೇಗಾ ಉಳಿಸಲು 2 ದಿನಗಳ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಕೇಳಿದಾಗ, “2 ದಿನ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್ಣ ಚರ್ಚೆ ಮಾಡಲಾಗುವುದು. ಬಿಜೆಪಿಯವರು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಅವರು ಸಮರ್ಥನೆ ಮಾಡಿಕೊಳ್ಳಲಿ, ಈ ಕಾರ್ಯಕ್ರಮದಿಂದ ಏನೆಲ್ಲಾ ಕೆಟ್ಟ ಪರಿಣಾಮ ಬೀರಲಿದೆ ಎಂದು ನಾವು ಹೇಳುತ್ತೇವೆ” ಎಂದು ತಿಳಿಸಿದ್ದಾರೆ.

ಕೇರಳದ ಮಲೆಯಾಳಂ ಭಾಷೆ ಬಿಲ್ ವಿಚಾರವಾಗಿ ಕೇಳಿದಾಗ, “ಈ ವಿಚಾರವಾಗಿ ನನಗೆ ಇನ್ನು ಸಂಪೂರ್ಣ ಮಾಹಿತಿ ಇಲ್ಲ” ಎಂದು ತಿಳಿಸಿದರು. ನಿಮಗೆ ಸಿಕ್ಕಿರುವ ಅಧಿಕಾರ ನಮಗೆ ಸಿಕ್ಕಿಲ್ಲ ಎಂಬ ಕುಮಾರಸ್ವಾಮಿ ಅವರ ಟ್ವೀಟ್ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಅವರು ಖುಷಿಯಾಗಿ ಸಂತೋಷವಾಗಿರಲಿ” ಎಂದರು.

G Parameshwara : CLP ಸಭೆಯಲ್ಲಿ 5 ವರ್ಷ CM Siddaramaiah CM ಅಂತ ತೀರ್ಮಾನವಾಗಿದೆ #pratidhvani

ಡಿಸಿಎಂ ಆದ ತಕ್ಷಣ ವಿಶೇಷ ಕೊಂಬು ಇರುವುದಿಲ್ಲ ಎಂಬ ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿ, “ಅವರ ಶಾಸಕರುಗಳು ಇದ್ದಾರಲ್ಲಾ ಅವರ ಮೂಲಕ ಈ ವಿಚಾರವನ್ನು ಚರ್ಚೆ ಮಾಡಲು ಹೇಳಲಿ” ಎಂದು ಟಾಂಗ್‌ ನೀಡಿದ್ದಾರೆ.

Tags: by vijayaendracentral minister pralhad joshiCM SiddaramaiahDCM vs HD KumaraswamyDK ShivakumarHD KumaraswamyJDS KarnatakaKerala CMmalayalam languageMNREGAPinarayi VijayanR Ashokvb-g ram g vs mnrega
Previous Post

ಒಂದರ ಮೇಲೆ ಇನ್ನೊಂದು ಭಾಷೆ ಹೇರುವ ಪ್ರಯತ್ನ ಸಲ್ಲದು : ಮಲಯಾಳಿ ಪಿಣರಾಯಿ ವಿಜಯನ್‌ ವಿರುದ್ದ ಸಿದ್ದರಾಮಯ್ಯ ಕಿಡಿ

Next Post

ಮೋದಿ, ರಾಹುಲ್‌ ಆಸ್ತಿ ಎಷ್ಟಿದೆ..? ಮೂರು ವರ್ಷದಲ್ಲಿ ಸಂಸದರ ಸಂಪತ್ತು ಏರಿದ್ದೆಷ್ಟು..?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಮೋದಿ, ರಾಹುಲ್‌ ಆಸ್ತಿ ಎಷ್ಟಿದೆ..? ಮೂರು ವರ್ಷದಲ್ಲಿ ಸಂಸದರ ಸಂಪತ್ತು ಏರಿದ್ದೆಷ್ಟು..?

ಮೋದಿ, ರಾಹುಲ್‌ ಆಸ್ತಿ ಎಷ್ಟಿದೆ..? ಮೂರು ವರ್ಷದಲ್ಲಿ ಸಂಸದರ ಸಂಪತ್ತು ಏರಿದ್ದೆಷ್ಟು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada