ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರ ಸುಪ್ರೀಂಕೋರ್ಟ್‌ನಲ್ಲಿದ್ದು, ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತೆ.
ಮೈಸೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ಅನಾವರಣಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಶ್ರಿರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಸಿದ್ದರಾಮಯ್ಯ ಒಂದೇ ಒಂದು ದಿನ ಅಂಡಮಾನ್ ಜೈಲಿನಲ್ಲಿ ಇದ್ದು ಬರಲಿ ಆಗ ಸಾವರ್ಕರ್ ಅನುಭವಿಸಿದ ಕಷ್ಟ ಏನೂ ಎಂಬುದು ಅರ್ಥ ಆಗುತ್ತದೆ. ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟಗಾರ. ಪಾಕಿಸ್ತಾನದ ಅಧ್ಯಕ್ಷ ಬರುತ್ತಾನೆಂದು ಅವರನ್ನು ಬೆಳಗಾವಿಯ ಇಂಡಲಗ ಜೈಲಿನಲ್ಲಿ ಇಡಲಾಗಿತ್ತು. ಸಾವರ್ಕರ್ ನೂರು ದಿನ ಬೆಳಗಾವಿ ಜೈಲಿನಲ್ಲಿದ್ದರು. ಬೆಳಗಾವಿಗೂ ಸಾವರ್ಕರ್‌ಗೂ ಏನು ಸಂಬಂಧ ಎನ್ನುವ ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು ಎಂದ ಅವರು, ಸಾವರ್ಕರ್ ಫೋಟೋ ಅನಾವರಣ ಮಾಡಿದ ಬಿಜೆಪಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದೇ ವೇಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರ ಸುಪ್ರೀಂಕೋರ್ಟ್‌ನಲ್ಲಿದ್ದು, ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತೆ. ಅಲ್ಲದೇ ಯಾರು ಬೇಕಾದರೂ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಅವಕಾಶ ಇದೆ. ಇದರ ನಡುವೆಯೂ ಮಹಾರಾಷ್ಟ್ರದ ಕಾಂಗ್ರೆಸ್ ಮತ್ತು ಬಿಜೆಪಿಯವರು ಬೆಳಗಾವಿ ನಮ್ಮದು ಎನ್ನುತ್ತಿದ್ದರೆ. ಕರ್ನಾಟಕದಲ್ಲಿ ಸಹ ಕಾಂಗ್ರೆಸ್, ಬಿಜೆಪಿಯವರು ಸಹ ಬೆಳಗಾವಿ ನಮ್ಮದು ಎನ್ನುತ್ತಿದ್ದಾರೆ ಎಂದು ಟೀಕಿಸಿದರು.
ಈ ಹಿನ್ನೆಲೆಯಲ್ಲಿ ಇವರ ಸುಪ್ರೀಂಕೋರ್ಟ್ ಸುಮೋಟೋ ಕೇಸ್ ದಾಖಲಿಸಿ ಕ್ರಮಕೈಗೊಳ್ಳಬೇಕಿದೆ. ನಾನು ಕೂಡ ವಕೀಲರೊಂದಿಗೆ ಚರ್ಚೆ ಮಾಡುತ್ತೇನೆ. ಆದರೆ ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಅಂತ ಎಲ್ಲರಗೂ ಗೊತ್ತಿರುವ ವಿಚಾರ ಎಂದು ತಿಳಿಸಿದರು.