• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 19, 2023
in Top Story, ಇದೀಗ
0
ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹುಬ್ಬಳ್ಳಿ:  ಕಾಂಗ್ರೆಸ್ಸಿನ ರಣದೀಪ್ ಸುರ್ಜೇವಾಲ(Randeep surjevala) ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರು ಕಾಂಗ್ರೆಸ್ಸಿನ(Congress) ಒಳಜಗಳವನ್ನು ಮೊದಲು ಸರಿಪಡಿಸಲಿ ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraja bommai) ತಿಳಿಸಿದರು.

ADVERTISEMENT

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ನರಕ  ಸೃಷ್ಟಿಯಾಗಿದೆ ಎಂದಿರುವ ಸುರ್ಜೇವಾಲಾ ಅವರ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಮನೆ ಜನ ಕಳುಹಿಸಿದ್ದಾರೆ. ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಿದು. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದರು.

ಅಸುರರ ದೊಡ್ಡ ಪಟ್ಟಿ
ಬಿಜೆಪಿ ಅಸುರರು, ಬೊಮ್ಮಾಯಿ ಅವರು ಭ್ರಷ್ಟಾಸುರ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜನರಿಗೆ ಯಾರು ಅಸುರರು, ಯಾರು ದೇವತೆಗಳು ಎಂದು ಗೊತ್ತಿದೆ. 70 ವರ್ಷ ಆಡಳಿತ  ಮಾಡಿರುವ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ತೋರಿಸಿದ್ದಾರೆ.  ಕಾಂಗ್ರೆಸ್ ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದರು.

ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ.
ನಕಲು ಮಾಡುವಾಗ ಬುದ್ದಿ ಇರಬೇಕೆಂದಿರುವ ಹೇಳಿಕೆಗೆ ಉತ್ತರಿಸಿ  ಅವರಿಗೂ ನಮಗೂ  ಬಹಳ ವ್ಯತ್ಯಾವಿದೆ. ಅವರು ಚುನಾವಣೆಗಾಗಿ ಆಕಾಶವನ್ನು ತೋರಿಸಿ ಜನರನ್ನು ಮರಳು ಮಾಡುವ ಪ್ರಯತ್ನ ಮಾಡಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ. ಅವರು ನಮ್ಮನ್ನು ನಕಲು  ಮಾಡಿದ್ದಾರೆ. ನಾವು ಗೃಹಿಣಿ ಶಕ್ತಿ ನೀಡಿದ ಮೇಲೆ ಗೃಹಲಕ್ಷ್ಮಿ ಯೋಜನೆ ಘೋಷಿಸಿದ್ದಾರೆ. ಆದ್ದರಿಂದ ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂದರು.

ಅನುಷ್ಠಾನ ಸಮಿತಿ ರಚನೆ
ಕಳೆದ ಬಾರಿ ಆಯವ್ಯಯ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ  ಬಹುತೇಕ ಶೇ 90 ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕೂಡ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಅನುಷ್ಠಾನ ಸಮಿತಿ ರಚಿಸಿ ಅನುಷ್ಠಾನ ಮಾಡಲಾಗುವುದು ಎಂದರು.

ಕಾಂಗ್ರೆಸ್ಸಿನವರ ಕಿವಿಗಳ ಮೇಲೆ ಶಾಶ್ವತವಾಗಿ ಹೂವಿರಲಿದೆ
ವಿರೋಧ ಪಕ್ಷದವರು ಕಿವಿ ಮೇಲೆ ಹೂವಿಟ್ಟುಕೊಳ್ಳುವ ಅಭಿಯಾನ ಆರಂಭಿಸಿರುವ ಬಗ್ಗೆ ಉತ್ತರಿಸಿ ಇಷ್ಟು ದಿನ ಜನರಿಗೆ ಅವರು ಕಿವಿ ಮೇಲೆ ಹೂವಿಟ್ಟಿದ್ದು, ಇನ್ನು ಮುಂದೆ ಜನ ನಿಮಗೆ ಕಿವಿ ಮೇಲೆ ಹೂವಿಡುತ್ತಾಋಎ ಎಂದು ವಿಧಾನಸಭೆಯಲ್ಲಿಯೇ ಉತ್ತರಿಸಿದ್ದೇನೆ.  ಶಾಶ್ವತವಾಗಿ ಅವರ ಕಿವಿಗಳ ಮೇಲೆ ಹೂವಿರಲಿದೆ. ಚುನಾವಣೆಯಾದ ನಂತರ ಅವರ ಕಿವಿ ಮೇಲೆ ಹೂವಿರಲಿದೆ ಎಂದರು.
ಬಣ್ಣ ಬದಲಾಯಿಸುವ ವ್ಯಕ್ತಿ
ವಿರೋಧ ಪಕ್ಷದವರು ಒಗ್ಗೂಡಿದರೆ ಬಿಜೆಪಿಯನ್ನು ಸೋಲಿಸಬುಹುದು ಎಂದಿರುವ ಬಿಹಾರದ ಮುಖ್ಯಮಂತ್ರಿಗಳ ಹೇಳಿಕೆಗೆ  ಉತ್ತರಿಸಿ ನಿತೇಶ್ ಕುಮಾರ್ ಅವರು ಎಷ್ಟು ಬಾರಿ ಬಣ್ಣ ಬದಲಾಯಿಸಿದ್ದಾರೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ ಬಣ್ಣ ಬದಲಾಯಿಸುವ ವ್ಯಕ್ತಿಯ ಮಾತಿಗೆ ಏನು ಉತ್ತರ ನೀಡಲು ಸಾಧ್ಯ ಎಂದರು.

ಉತ್ತರ ಕರ್ನಾಟಕದ ಪತ್ರಕರ್ತರಿಗೆ ಸೂಕ್ತ ಪ್ರಾತಿನಿಧ್ಯ
ಮಾಧ್ಯಮ ಅಕಾಡೆಮಿಯಿಂದ ಉತ್ತರ ಕರ್ನಾಟಕದ ಪತ್ರಕರ್ತರಿಗೆ ಅನ್ಯಾಯವಾಗುತ್ತಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಕಾಡೆಮಿಗೆ ನಾಮಕರಣವಾಗುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಪತ್ರಕರ್ತರಿಗೆ ಸೂಕ್ತ ಪ್ರಾತಿನಿಧ್ಯ ನೀಡಲು ಕ್ರಮ ವಹಿಸಲಾಗುವುದು ಎಂದರು. 
ಅನುಷ್ಠಾನ ಮಹದಾಯಿ ಯೋಜನೆಯ ಅನುಷ್ಠಾನ ಶೀಘ್ರದಲ್ಲಿಯೇ ಆಗುವುದು ಎಂದರು.

Tags: Congress Partyಬಸವರಾಜಬೊಮ್ಮಾಯಿಬಿಜೆಪಿ
Previous Post

ನಾಗರಿಕ ಜಗತ್ತು ನೈತಿಕವಾಗಿ ಕುಬ್ಜವಾಗುತ್ತಿದೆಯೇ ?

Next Post

ಮಹಿಳಾ ಅಧಿಕಾರಿ ಪುರುಷ ಅಧಿಕಾರಿಗಳಿಗೆ ಈ ರೀತಿಯ ಫೋಟೋ ಕಳಿಸಿದರೆ ಏನರ್ಥ? ರೋಹಿಣಿ ವಿರುದ್ಧ ಡಿ. ರೂಪಾ ಕಿಡಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಮಹಿಳಾ ಅಧಿಕಾರಿ ಪುರುಷ ಅಧಿಕಾರಿಗಳಿಗೆ ಈ ರೀತಿಯ ಫೋಟೋ ಕಳಿಸಿದರೆ ಏನರ್ಥ? ರೋಹಿಣಿ ವಿರುದ್ಧ ಡಿ. ರೂಪಾ ಕಿಡಿ

ಮಹಿಳಾ ಅಧಿಕಾರಿ ಪುರುಷ ಅಧಿಕಾರಿಗಳಿಗೆ ಈ ರೀತಿಯ ಫೋಟೋ ಕಳಿಸಿದರೆ ಏನರ್ಥ? ರೋಹಿಣಿ ವಿರುದ್ಧ ಡಿ. ರೂಪಾ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada