• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಕ್ರೀಯ ಸದಸ್ಯತ್ವ ಅಭಿಯಾನ ಚುರುಕಿನಿಂದ ನಡೆಯಲಿ:ಶಾಸಕ ಪ್ರಭು ಚವ್ಹಾಣ

Any Mind by Any Mind
October 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೀದರ್:ಭಾರತೀಯ ಜನತಾ ಪಕ್ಷದ ಸಕ್ರಿಯ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸಕ್ರೀಯ ಸದಸ್ಯತ್ವದ ಅರ್ಜಿಯನ್ನು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸಲ್ಲಿಸುವ ಮೂಲಕ ಮೂಲಕ ಔರಾದ(ಬಿ) ವಿಧಾನಭಾ ಕ್ಷೇತ್ರದಲ್ಲಿ ವಿಭಿನ್ನವಾಗಿ ಚಾಲನೆ ನೀಡಿದರು.

ADVERTISEMENT

ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಅ.22ರಂದು ಭಾರತೀಯ ಜನತಾ ಪಕ್ಷ ಔರಾದ(ಬಿ) ಮಂಡಲ ಕಾರ್ಯಕರ್ತರ ಸಮಾವೇಶ ಹಾಗೂ ಸಕ್ರಿಯ ಸದಸ್ಯತಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಶಾಸಕರು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಶಾಲು ಹೊದಿಸಿ ಪುಷ್ಪಗಳನ್ನು ಸುರಿದು ಗೌರವಿಸಲಾಯಿತು.

ಇದೇ ವೇಳೆ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ವಿಶೇಷ ಸನ್ಮಾನ ನಡೆಯಿತು. ಶಾಸಕರು ಶಾಲು ಹೂ-ಹಾರಗಳೊಂದಿಗೆ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಿದರು.ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ನನಗೆ ತಾಯಿ ಇದ್ದಂತೆ, ಕಾರ್ಯಕರ್ತರು ಕುಟುಂಬದ ಸದಸ್ಯರಿದ್ದಂತೆ ಅವರನ್ನು ಸದಾ ಗೌರವಿಸುತ್ತಾ ಬಂದಿದ್ದೇನೆ. ಇವರ ಸಹಕಾರದಿಂದಲೇ ಪಕ್ಷದ ಎಲ್ಲ ಕಾರ್ಯಚಟುವಟಿಕೆಗಳು ಸರಿಯಾಗಿ ನಡೆಯುತ್ತಿವೆ.

ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಎಂದೂ ಮರೆಯಲು ಸಾಧ್ಯವಿಲ್ಲ.ಯಾವುದೇ ಕೆಲಸವಿರಲಿ ಉತ್ಸಾಹ ಮತ್ತು ಶ್ರದ್ಧೆಯಿಂದ ಮಾಡುತ್ತಾರೆ.ಅವರನ್ನು ಗೌರವಿಸುವುದೆಂದು ನನಗೆ ಹೆಚ್ಚಿನ ಸಂತೋಷ ನೀಡುತ್ತದೆ ಎಂದರು.ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಕ್ಷೇತ್ರದಲ್ಲಿ 1.20 ಲಕ್ಷ ಸದಸ್ಯರ ನೋಂದಣಿಯ ಗುರಿ ಹೊಂದಲಾಗಿತ್ತು. ಈವರೆಗೆ 95 ಸಾವಿರ ಸದಸ್ಯರನ್ನು ಸೇರ್ಪಡೆ ಮಾಡಲಾಗಿದೆ.

ಇನ್ನು ಒಂದು ವಾರ ಕಾಲಾವಕಾಶವಿದ್ದು, ಅಲ್ಲಿಯವರೆಗೆ ಗುರಿ ಸಾಧಿಸಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.ಕನಿಷ್ಠ 50 ಜನ ಸದಸ್ಯರನ್ನು ಸೇರ್ಪಡೆ ಮಾಡಿದವರಿಗೆ ಸಕ್ರೀಯ ಕಾರ್ಯಕರ್ತರಾಗಲು ಸಾಧ್ಯವಿದೆ. ಸಕ್ರೀಯ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಪಕ್ಷವು ಜಜಾಬ್ದಾರಿ ಹಂಚಿಕೆ, ನಾಮನಿರ್ದೇಶನ ಹಾಗೂ ಮತ್ತಿತರೆ ಸಂದರ್ಭಗಳಲ್ಲಿ ಮನ್ನಣೆ ಸಿಗುವುದರಿಂದ ಕಾರ್ಯರ್ಕರೆಲ್ಲರೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸದಸ್ಯತ್ವ ಅಭಿಯಾನದಂತೆ ಸಕ್ರಿಯ ಸದಸ್ಯತ್ವ ಅಭಿಯಾನವು ಯಶಸ್ವಿಯಾಗಿ ನಡೆಯಬೇಕು.

ಔರಾದ(ಬಿ) ಕ್ಷೇತ್ರ ರಾಜ್ಯದ ಅಗ್ರ ಸ್ಥಾನದಲ್ಲಿರಬೇಕು ಎಂದು ಹೇಳಿದರು.ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಮಾತನಾಡಿ, ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ತಮ್ಮ ಶ್ರಮದಿಂದಾಗಿ ಪಕ್ಷದ ಕಾರ್ಯಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು. ಸಕ್ರಿಯ ಸದಸ್ಯತ್ವ ಅಭಿಯಾನ ನಡೆಸುವ ವಿಧಾನಗಳ ಕುರಿತು ಮಾಹಿತಿ ನೀಡಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ ಪಾಟೀಲ, ಪೀರಪ್ಪ ಔರಾದೆ, ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗುಂಡಪ್ಪ ಬಿರಾದಾರ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ವೈಜಿನಾಥ ಘೂಳೆ, ಉಪಾಧ್ಯಕ್ಷರಾದ ರಾಧಾಬಾಯಿ ಕೃಷ್ಣ ನರೋಟೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಹುಸುರೆ, ಮಂಡಲ ಪ್ರಭಾರಿ ಮಹೇಶ್ವರ ಸ್ವಾಮಿ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಿವರಾಜ ಅಲ್ಮಾಜೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಕೌಟಗೆ, ಮೈನಾರಿಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಝಾಕೀರ್ ಶೇಖ್, ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೀಲೇಶ , ಹಿರಿಯ ಪ್ರಕೋಷ್ಟ ರಾಜ್ಯ ಸದಸ್ಯ ಬಸವರಾಜ ಪಾಟೀಲ, ಮೈನಾರಿಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಖಾಜಾಮಿಯ್ಯಾ ಶೇಖ್, ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಾಮ ನಿರ್ದೇಶಿತ ಸದಸ್ಯ ವಸಂತ ಬಿರಾದಾರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಖಂಡೋಬಾ ಕಂಗಟೆ, ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಮುಖಂಡರು ಹಾಗೂ ಸುಮಾರು ಎರಡು ಸಾವಿರ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದರು.

Tags: BJP District General Secretary Mahadev Husureformer MLA Gundappa BiradaraMahila Morcha General Secretary Vijayalakshmi KoutageMandal Incharge Maheshwar SwamyMinority Morcha general secretary Zakir SheikhMinority Morcha state executive member Khazamiya SheikhMLA Prabhu ChavanOBC Morcha general secretary Nilesha RakshaoyaleRaita Morcha District President Shivraj AlmajeSaraswati Vaijinath Ghule.senior prominent state member Basavaraj Patiltaluk general secretary Khandoba.University of Veterinary Medical Sciences nominated member Vasant BiradarVice President Radhabai Krishna Narote
Previous Post

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ

Next Post

ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಗುಡುಗಿದ ಸಿದ್ದರಾಮಯ್ಯ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಗುಡುಗಿದ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada