• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು: ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in Top Story, ಕರ್ನಾಟಕ
0
ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಮಾರ್ಚ್ 1 ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದ್ದು, ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ನಗರದ ದಿ ಕ್ಯಾಪಿಟಲ್ ಹೋಟೆಲ್‍’ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಚುನಾವಣಾ ಸಮರದ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕು ಎಂದರು.

ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍’ಟಿ ಸಂಗ್ರಹಿಸುತ್ತಿದ್ದು, ಗುರಿ ಮೀರಿ ಶೇ 23ರಷ್ಟು ಹೆಚ್ಚು ಕಂದಾಯ ಸಂಗ್ರಹವಾಗಿದೆ. ಬಡವರ ಪರವಾಗಿ ನಮ್ಮ ನಿಲುವಿದೆ ಎಂದು ವಿವರಿಸಿದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಹಣ ಅನುದಾನ ಕೊಟ್ಟಿದ್ದೇವೆ. ಸ್ಪಂದನಾಶೀಲ, ಜನಪರ ಬಿಜೆಪಿ ಸರಕಾರ ರಾಜ್ಯದಲ್ಲಿದೆ ಎಂದು ವಿವರಿಸಿದರು.

ನಕಾರಾತ್ಮಕವಾಗಿ ಮತ ಪಡೆಯಲು ಕಾಂಗ್ರೆಸ್- ಜೆಡಿಎಸ್ ಪ್ರಯತ್ನ ಮಾಡುತ್ತಿದೆ. ನಾವು ಧನಾತ್ಮಕ ರೀತಿಯಲ್ಲಿ ಜನಮತ ಪಡೆಯಲು ಮುಂದಾಗುತ್ತೇವೆ. ಜನರ ಮುಂದೆ ರಿಪೋರ್ಟ್ ಕಾರ್ಡ್ ಇಟ್ಟು ಪಕ್ಷಕ್ಕೆ ಗೆಲುವು ತಂದು ಕೊಡಬೇಕಿದೆ ಎಂದು ತಿಳಿಸಿದರು.

ಜನರ ಕಣ್ಣಲ್ಲಿ ಮಣ್ಣೆರಚುವ ಕಾರ್ಯವನ್ನು ಸದಾ ಕಾಲ ಕಾಂಗ್ರೆಸ್ ಮಾಡಿತ್ತು. ಅವರ ಅವಧಿಯಲ್ಲಿ ರಾಜ್ಯವು ಎಲ್ಲ ರಂಗಗಳಲ್ಲಿ ಹಿಂದುಳಿದಿತ್ತು. ಅವರ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿತ್ತು ಎಂದು ದೂರಿದರು.

ಆರೋಪಗಳ ಮೇಲೆ ಕೌದಿ ಹಾಕಿ ಮುಚ್ಚಿ ಹಾಕುವ ಪ್ರಯತ್ನ

ಅಕ್ಕಿ, ಎಸ್‍ಸಿ, ಎಸ್‍ಟಿ ಹಾಸ್ಟೆಲ್‍’ನಲ್ಲೂ ಹಾಸಿಗೆ, ದಿಂಬಿನಲ್ಲಿ ಭ್ರಷ್ಟಾಚಾರ ಆಗಿತ್ತು. ನೀರಾವರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ, ಬಿಡಿಎದಲ್ಲಿ ರೀಡೂ ಭ್ರಷ್ಟಾಚಾರ, ಸೋಲಾರ್ ವಿದ್ಯುತ್ ವಿಚಾರದಲ್ಲೂ ಭ್ರಷ್ಟಾಚಾರ ಮಾಡಿದ್ದರು. ಭ್ರಷ್ಟಾಚಾರ ಮುಚ್ಚಿ ಹಾಕಲು ಲೋಕಾಯುಕ್ತ ಸಂಸ್ಥೆಯನ್ನೇ ಮುಗಿಸಿಬಿಟ್ಟರು. ಎಸಿಬಿ ಮುಂದೆ ಸಿದ್ದರಾಮಯ್ಯರದೂ ಸೇರಿದಂತೆ ಸುಮಾರು 60 ಕೇಸುಗಳಿದ್ದು, ಎಲ್ಲದಕ್ಕೂ ಬಿ ರಿಪೋರ್ಟ್ ಕೊಟ್ಟಿದ್ದರು. ಬಣ್ಣ ಬಯಲಾಗುವ ಭೀತಿ ಕಾಂಗ್ರೆಸ್ಸಿಗರದು. ಆರೋಪಗಳ ಮೇಲೆ ಕೌದಿ ಹಾಕಿ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯರದು ಎಂದು ಟೀಕಿಸಿದರು.

ನಮ್ಮ ಮೇಲಿನ ಆರೋಪದ ದಾಖಲೆ ಕೊಟ್ಟರೆ ಅದನ್ನು ತನಿಖೆ ಮಾಡಿಸಲು ಸಿದ್ಧ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ವೈಫಲ್ಯ ಜನರಿಗೆ ತಿಳಿಸಿ

ಕಾಂಗ್ರೆಸ್ ವೈಫಲ್ಯ, ಬಿಜೆಪಿಯ ಮನೆ ಮನೆಗೆ ನಲ್ಲಿ ನೀರು ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಬೇಕು. ಮನೆ, ವಿದ್ಯುತ್, ಶೌಚಾಲಯ, ಉಚಿತ ಪಡಿತರ- ಹೀಗೆ ಕುಟುಂಬಗಳ ಸಶಕ್ತೀಕರಣ ನಡೆದಿದೆ. ಕಿಸಾನ್ ಸಮ್ಮಾನ್ ಯೋಜನೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮಕ್ಕಳಿಗೆ ಸೈಕಲ್, ವಿದ್ಯಾನಿಧಿಯಂಥ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇತರರು ಇದ್ದರು.

Tags: ಬಿಜೆಪಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

golden star ganesh | ಆರ್ ಚಂದ್ರು ಡೈರೆಕ್ಟರ್ ಆಗಿದ್ದಾನೆ ಅನ್ಕೊಂಡಿರ್ಲಿಲ್ಲ

Next Post

Rangayana Raghu | ರಂಗಾಯಣ ರಘು ಕಾಮಿಡಿಗೆ Love Birds team ನಗು

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
Rangayana Raghu | ರಂಗಾಯಣ ರಘು ಕಾಮಿಡಿಗೆ Love Birds team ನಗು

Rangayana Raghu | ರಂಗಾಯಣ ರಘು ಕಾಮಿಡಿಗೆ Love Birds team ನಗು

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada