• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡ ನಾಡು ನುಡಿ ಸೇವೆಗೈದ ಮಹನೀಯರನ್ನು ಸ್ಮರಿಸೋಣ:ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
November 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಧಾರವಾಡ :69ನೇ ಕರ್ನಾಟಕ ರಾಜ್ಯೋತ್ಸವ. ಈ ಕನ್ನಡ ಹಬ್ಬವನ್ನು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಧ್ವಜಾರೋಹಣ ಮಾಡುವ ಮೂಲಕ ಆಚರಿಸುತ್ತಿದ್ದೇವೆ. ಇದು ನಮಗೆಲ್ಲರಿಗೂ ಪ್ರಮುಖ ಮತ್ತು ಹೆಮ್ಮೆಯ ಹಬ್ಬವಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ADVERTISEMENT

ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

ಕರ್ನಾಟಕ ಏಕೀಕರಣ ದೇಶದ ಸ್ವಾತಂತ್ರ್ಯ ಹೋರಾಟದಂತೆ ಪ್ರಾಮುಖ್ಯತೆ ಪಡೆದಿದೆ. ಇದೇ ಸಂದರ್ಭದಲ್ಲಿ ಭೌಗೋಳಿಕವಾಗಿ 19 ವಿವಿಧ ಆಡಳಿತ ಭಾಗಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡದ ಮನಸ್ಸುಗಳನ್ನು ಭಾಗಾವಾರು ಪ್ರಾಂತ್ಯಗಳ ಆಧಾರದ ಮೇಲೆ 1956 ರಲ್ಲಿ ಒಗ್ಗೂಡಿಸಲಾಯಿತು.ಕನ್ನಡ ಮಾತನಾಡುವ ವಿವಿಧ ಭಾಗಗಳು ಸೇರಿ ಮೈಸೂರು ರಾಜ್ಯವು ಉದಯವಾಯಿತು ಎಂದರು.

ಕರ್ನಾಟಕ ಏಕೀಕರಣ ಚಳವಳಿಯನ್ನು ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಈ ಸಂಗತಿ ನಮ್ಮೆಲ್ಲರ ಅಭಿಮಾನದ ಸಂಕೇತವಾಗಿದೆ. ಏಕೀಕರಣ ಚಳವಳಿಯ ಪ್ರಮುಖರಾದ ಆಲೂರ ವೆಂಕಟರಾವ್, ರಾ.ಹ.ದೇಶಪಾಂಡೆ, ಡೆಪ್ಯೂಟಿ ಚನ್ನಬಸಪ್ಪ, ಅದರಗುಂಚಿ ಶಂಕರಗೌಡ ಪಾಟೀಲ ಮತ್ತು ಇತರರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕರ್ನಾಟಕವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಜ್ಯವಾಗಿದೆ. ಕನ್ನಡ ಭಾμÉಯು ನಮ್ಮ ಪರಂಪರೆ, ಸಾಹಿತ್ಯವನ್ನು ಸಾರಿ ಹೇಳುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ. ಇಂದು ರಾಜ್ಯದಾದ್ಯಂತ ಸರ್ಕಾರದಿಂದ ಕನ್ನಡಾಂಬೆಗೆ ನುಡಿ-ನಮನ ಅರ್ಪಿಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು.

ನರೇಂದ್ರ ಗ್ರಾಮದ ರಾಮಚಂದ್ರ ಹನುಮಂತ ದೇಶಪಾಂಡೆಯವರು ಕನ್ನಡದ ಕವಿ ಹಾಗೂ ಇತಿಹಾಸಕಾರರಾಗಿದ್ದರು. ಧಾರವಾಡ ಜಿಲ್ಲೆಯು ಸಾಹಿತ್ಯ ಹಾಗೂ ಸಾಂಸ್ಕಂತಿಕವಾಗಿ ಶ್ರೀಮಂತ ಜಿಲ್ಲೆಯಾಗಿದೆ. ಕರ್ನಾಟಕ ಸರ್ಕಾರವು ಡಾ. ದ.ರಾ.ಬೇಂದ್ರೆ, ಡಾ.ಮಲ್ಲಿಕಾರ್ಜುನ ಮನಸೂರ, ಬಸವರಾಜ ರಾಜಗುರು, ಆಲೂರು ವೆಂಕಟರಾವ್, ಡಿ.ವ್ಹಿ.ಹಾಲಭಾವಿ, ಡಾ. ಗಂಗೂಬಾಯಿ ಹಾನಗಲ್, ಡಾ. ಎಂ.ಎಂ. ಕಲಬುರ್ಗಿ ಅವರ ಹೆಸರಿನಲ್ಲಿ ಟ್ರಸ್ಟ್‍ಗಳನ್ನು ಸ್ಥಾಪಿಸುವ ಮುಖಾಂತರ ಕನ್ನಡ ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಹಾಗೂ ಯುವ ನಿಧಿ ಯೋಜನೆಯನ್ನು ಇಡೀ ರಾಜ್ಯವು ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ.

ನಾವು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇವೆ. ಬರೆಯುತ್ತೇವೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇವೆ. ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಶ್ರಮಿಸುತ್ತೇವೆ ಎಂದು ಇದೇ ವೇಳೆ ಪ್ರಮಾಣ ಮಾಡೋಣ ಎಂದು ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರೊ ಐ.ಜಿ.ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ್ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಡಾ ಆಯುಕ್ತ ಡಾ.ಸಂತೋಷ ಬಿರಾದಾರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ತಹಶೀಲದಾರರಾದ ಡಿ.ಎಚ್.ಹೂಗಾರ, ಕೆ.ಆರ್.ಪಾಟೀಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಹನೀಯರ ಪ್ರತಿಮೆಗೆ ಮಾಲಾರ್ಪಣೆ: ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಕಾರ್ಗಿಲ್ ಸ್ಮಾರಕ, ಡೆಪ್ಯೂಟಿ ಚನ್ನಬಸಪ್ಪ ಪ್ರತಿಮೆ, ಕೆ.ಜಿ.ಕುಂದಣಗಾರ ಪ್ರತಿಮೆಗೆ ಸಚಿವ ಸಂತೋಷ ಲಾಡ್ ಅವರು ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.

ಕಾರ್ಮಿಕ ಇಲಾಖೆಯಿಂದ ಅಸಂಘಟಿತ ವರ್ಗದ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸಾರ್ವಜನಿಕ ಪ್ರಚಾರಕ್ಕಾಗಿ ರೂಪಿಸಿರುವ ಆರು ಆಟೋಗಳಿಗೆ ಸಚಿವರು ಹಸಿರು ಬಾವುಟ ತೋರಿ ಚಾಲನೆ ನೀಡಿದರು.

ಹಲ್ಮಡಿ ಶಾಸನದ ಪ್ರತಿಕೃತಿಯ ಅನಾವರಣ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಇಂದು ಬೆಳಿಗ್ಗೆ, ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದ ಆವರಣದಲ್ಲಿ ಅನಾವರಣಗೊಳಿಸಿದರು.

Tags: 69th Karnataka StateAdditional District Collector Geeta C.D.Assistant Director of Kannada and Culture Department Kumar.Commissioner of Police N. SasikumarCongress PartyDeputy Commissioner of Police Manning NandagaviDistrict Collector Divya PrabhuDistrict Health Officer Dr. Shashi PatilDistrict Superintendent of Police Dr. Gopal BakodaFormer MP Prof IG SanadiHuda Commissioner Dr. Santosha BiradaraK. R. PatilLet's remember the noblesminister santosh ladserved Kannada Nadu:Sub-Divisional Officer Shalam HussainTahsildars D. H. HoogaraZilla Panchayat CEO Swaroop T.K.Zilla Panchayat Deputy Secretary B. S. Muganooramath
Previous Post

ಕನ್ನಡ ಕನ್ನಡಿಗರ ನಿಂದಕರಿಗೆ ಎಚ್ಚರಿಕೆ ನೀಡಿದ ಸಿಎಂ.

Next Post

ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada