• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ..

ಪ್ರತಿಧ್ವನಿ by ಪ್ರತಿಧ್ವನಿ
April 19, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..
Share on WhatsAppShare on FacebookShare on Telegram

ನವದೆಹಲಿ : ಮೊದಲು ಸಂವಿಧಾನ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ನೀಡಿದ್ದ ಆ ಪಕ್ಷವು ನಂತರ ಯುಟರ್ನ್‌ ಹೊಡೆಯಿತು. ಇದರಿಂದ ದಕ್ಷಿಣ ರಾಜ್ಯಗಳಿಗೆ ಸಿಕ್ಕಿದ್ದ ಬಂಗಾರದಂಥ ಅವಕಾಶ ತಪ್ಪಿಹೋಯಿತು ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT
Siddaramaiah : ಸಿದ್ದರಾಮಯ್ಯ ಡೋಲು ಹೇಗೆ ಬಾರಿಸ್ತಾರೆ ನೋಡಿ..! #pratidhvani

ಇಲ್ಲಿನ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳು ಜನರಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಭೀತಿ ಸೃಷ್ಟಿಸುತ್ತಿವೆ. ಕೆಲ ದಿನಗಳ ಹಿಂದೆ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಕರೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಡಿಎಂಕೆ ನಾಯಕರಿಗೆ ಮಹಿಳಾ ಮೀಸಲು ಹಾಗೂ ಕ್ಷೇತ್ರ ಮರು ವಿಂಗಡಣೆ ಮಸೂದೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಆ ಸಭೆಯಲ್ಲಿ ಭಾಗವಹಿಸಿದ್ದ ಸಮಾಜವಾದಿ ಪಕ್ಷವೂ ವಿರೋಧ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ಅದಾದ ಮೇಲೆ ಎರಡು-ಮೂರು ದಿನಗಳಲ್ಲಿ ಮಾಧ್ಯಮ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, “ಈ ಮಸೂದೆಗಳನ್ನು ಪಾಸ್‌ ಮಾಡಲು ಜೂನ್‌ ತಿಂಗಳಲ್ಲಿ ಸಂಸತ್‌ ಅಧಿವೇಶನ ಕರೆಯಿರಿ” ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದರು. ಅಂದರೆ, ಅವರಿಗೆ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ಇತ್ತು ಎಂದಾಯಿತಲ್ಲವೇ? ಈ ಕೂಡಲೇ ಮಸೂದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿದರೆ ಚುನಾವಣೆಯಲ್ಲಿ ತನಗೆ ಧಕ್ಕೆ ಆಗಬಹುದೆಂಬ ಕಾರಣಕ್ಕೆ ಆ ಪಕ್ಷವು ಮಸೂದೆಗಳಿಗೆ ಬೆಂಬಲ ನೀಡಲಿಲ್ಲ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಇದನ್ನೂ ಓದಿ : ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ದಕ್ಷಿಣದ ರಾಜ್ಯಗಳಿಗೆ ಈ ತಿದ್ದುಪಡಿ ಮಸೂದೆಗಳಿಂದ ಅನ್ಯಾಯವಾಗುತ್ತಿದೆ ಎಂದು ಡಿಎಂಕೆ ಹೇಳುತ್ತಿರುವುದರಲ್ಲಿ ಎಳ್ಳಷ್ಟೂ ಸತ್ಯಾಂಶವಿಲ್ಲ. ಹಾಗೆ ನೋಡಿದರೆ ಡಿಎಂಕೆಯಿಂದಲೇ ದಕ್ಷಿಣಕ್ಕೆ ಅನ್ಯಾಯವಾಗುತ್ತಿದೆ. ಒಂದು ವೇಳೆ ಅನ್ಯಾಯ ಆಗುವುದೇ ಆಗಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಕ್ಷೇಪ ಎತ್ತಲಿಲ್ಲವೇಕೆ? ನಾಯ್ಡು ಅವರಂತೂ ಮಸೂದೆಗಳಿಗೆ ಮುಕ್ತವಾಗಿ ಬೆಂಬಲಿಸಿದ್ದಾರೆ. ಆದರೆ ಡಿಎಂಕೆ ಇದನ್ನು ಮಾಡದೇ ರಾಜಕೀಯ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜನಸಂಖ್ಯೆ ನಿಯಂತ್ರಣದಲ್ಲಿ ಉತ್ತಮ ಸಾಧನೆ ಮಾಡಿ, ರಾಷ್ಟ್ರೀಯ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದಿರುವ ಈ ಐದು ರಾಜ್ಯಗಳಿಗೆ ಅನ್ಯಾಯ ಆಗಬಾರದೆಂಬ ಏಕೈಕ ಉದ್ದೇಶದಿಂದ ಕೇಂದ್ರವು ಎಲ್ಲರಿಗೂ ಸಮಾನ ನ್ಯಾಯ ನೀಡುವ ಸಲುವಾಗಿ ಪ್ರತೀರಾಜ್ಯದ ಲೋಕಸಭೆ ಕ್ಷೇತ್ರಗಳ ಸಂಖ್ಯೆಯನ್ನು ಸರಾಸರಿ ಶೇ. 50% ರಷ್ಟು ಹೆಚ್ಚಿಸುವುದಾಗಿ ಹೇಳಿತು. ಲೋಕಸಭೆಯಲ್ಲಿ ಈ ಬಗ್ಗೆ ಅಮಿತ್‌ ಶಾ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ, ಅಂಕಿ-ಅಂಶಗಳ ಸಮೇತ ಮನಮುಟ್ಟುವಂತೆ ಹೇಳಿದ್ದರು. ಹಾಗಿದ್ದರೂ ಕಾಂಗ್ರೆಸ್‌ ಪಕ್ಷವು ತನ್ನ ಪ್ರತಿಷ್ಠೆಗಾಗಿ ತಾನೂ ದಾರಿ ತಪ್ಪಿದ್ದಲ್ಲದೆ, ತನ್ನ ಮಿತ್ರಪಕ್ಷಗಳನ್ನು ಕೂಡ ದಿಕ್ಕುತಪ್ಪಿಸಿತು. ಈಗ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾರು ಸರಿಪಡಿಸುತ್ತಾರೆ? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ನಾನು ದಕ್ಷಿಣದ ಜನಪ್ರತಿನಿಧಿಯಾಗಿ ಹೇಳುತ್ತಿದ್ದೇನೆ; 5 ರಾಜ್ಯಗಳಿಗೆ ಅನ್ಯಾಯ ಆಗುತ್ತಿರಲಿಲ್ಲ..

ಸ್ವತಃ ನಾನು ದಕ್ಷಿಣ ರಾಜ್ಯಗಳಿಂದ ಬಂದ ಜನಪ್ರತಿನಿಧಿಯಾಗಿ ಹೇಳುತ್ತಿದ್ದೇನೆ. ದಕ್ಷಿಣದ ಐದು ರಾಜ್ಯಗಳಿಗೆ ಸಿಗಲಿದ್ದ ಸುವರ್ಣಾವಕಾಶವನ್ನು ಡಿಎಂಕೆ ಹಾಳು ಮಾಡಿದೆ. ನಮಗೆ ಸಿಗಲಿದ್ದ ಉತ್ತಮ ಪಾಲು ಸಿಗದಂತೆ ಆ ಪಕ್ಷ ಮಾಡಿ ಅನ್ಯಾಯವೆಸಗಿದೆ. ಕರ್ನಾಟಕದ ಲೋಕಸಭೆ ಕ್ಷೇತ್ರಗಳ ಸಂಖ್ಯೆ 28ರಿಂದ 42ಕ್ಕೆ ಹೆಚ್ಚುತ್ತಿತ್ತು. ಈ ಅವಕಾಶ ತಪ್ಪಿಹೋಗಿದೆ. ಇದನ್ನು ಡಿಎಂಕೆ ಅಥವಾ ಕಾಂಗ್ರೆಸ್‌ ಪಕ್ಷಗಳಿಂದ ಸರಿಪಡಿಸಲು ಸಾಧ್ಯವೇ? ಈ ಬ್ಗಗೆ ರಾಹುಲ್‌ ಗಾಂಧಿ ಉತ್ತರಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಪ್ರತೀರಾಜ್ಯಕ್ಕೂ ಶೇ.50ರ ಅನುಪಾತದಲ್ಲಿ ಕ್ಷೇತ್ರಗಳನ್ನು ಹೆಚ್ಚಿಸಿದಾಗ ಉತ್ತರದ ಕೆಲ ರಾಜ್ಯಗಳ ಸಂಖ್ಯೆಯ ಬಗ್ಗೆ ಸುಳ್ಳು ಸಂಕಥನಗಳನ್ನು ಸ್ವತಃ ಕಾಂಗ್ರೆಸ್‌ ಹಾಗೂ ಅದರ ಮಿತ್ರಪಕ್ಷಗಳು ವ್ಯವಸ್ಥಿತವಾಗಿ ಹರಡಿದವು. ಡಿಎಂಕೆ ಹಠಮಾರಿತನದಿಂದ ಐದು ದಕ್ಷಿಣ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಿದೆ. ನೆಹರು ಕಾಲದಿಂದ ನಡೆದುಕೊಂಡು ಬಂದ ಡಿಲಿಮಿಟೇಶನ್‌ ವ್ಯವಸ್ಥೆ ಸುಧಾರಣೆಗೆ ಬೆಂಬಲ ನೀಡುವ ಬದಲು, ತನ್ನ ರಾಜ್ಯದ ಮತದಾರರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡಿತು. ಕರ್ನಾಟಕ, ಕೇರಳಂ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಸ್ವತಃ ತಮಿಳುನಾಡಿಗೆ ಆಗಿರುವ ಈ ಐತಿಹಾಸಿಕ ಅನ್ಯಾಯಕ್ಕೆ ನೇರವಾಗಿ ಡಿಎಂಕೆ ಪಕ್ಷವೇ ಕಾರಣ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡ ಬ್ರದರ್‌, ಚಿಕ್ಕ ಬ್ರದರ್‌ ನಡುವೆ ಹೊಂದಾಣಿಕೆ ಇಲ್ಲ..

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಕಿತ್ತಾಡುತ್ತಿವೆ. ನಾವೇ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡುತ್ತೇವೆ ಎಂದು ಆ ರಾಜ್ಯದ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಹಾಗೆಯೇ, ತಮಿಳುನಾಡಿನಲ್ಲಿ ದೊಡ್ಡ ಬ್ರದರ್‌ (ಸ್ಟಾಲಿನ್) ಮತ್ತು ಚಿಕ್ಕ ಬ್ರದರ್‌ (ರಾಹುಲ್‌ ಗಾಂಧಿ)‌ ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಚುನಾವಣೆ ಪ್ರಚಾರದಲ್ಲಿ ಯಾವುದೇ ಕಾರಣಕ್ಕೂ ಚಿಕ್ಕ ಬ್ರದರ್‌ ಜತೆ ವೇದಿಕೆ ಹತ್ತುವುದಿಲ್ಲ ಎಂದು ದೊಡ್ಡ ಬ್ರದರ್‌ ಶಪಥ ಮಾಡಿದ್ದಾರೆ. ವಾಸ್ತವ ಸ್ಥಿತಿ ಹೀಗಿರುವಾಗ ಈ ಮೈತ್ರಿಕೂಟದಿಂದ ರಾಷ್ಟ್ರದ ಜನತೆಗೆ, ಅದರಲ್ಲೂ ಮಹಿಳೆಯರಿಗೆ ನ್ಯಾಯ ಸಿಗುತ್ತದೆಯೇ? ಎಂದು ಸಚಿವ ಕುಮಾರಸ್ವಾಮಿ ಜರಿದಿದ್ದಾರೆ.

HD Kumarswamy: ಕ್ಷೇತ್ರ ಮರುವಿಂಗಡಣೆ ವಿರೋಧಿಸಿದ ಕಾಂಗ್ರೆಸ್​ ನಾಯಕರಿಗೆ ತಿವಿದ ಕುಮಾರಣ್ಣ! #pratidhvani

ಕ್ಷೇತ್ರ ಮರು ವಿಂಗಡಣೆ ನಡೆಯುತ್ತಿರುವುದು ಇದೇ ಮೊದಲಲ್ಲ. ನೆಹರು ಕಾಲದಿಂದಲೂ ನಡೆದುಕೊಂಡು ಬಂದಿದೆ. ಮೋದಿ ಬಂದು ಹೊಸದಾಗಿ ಮಾಡಿದ್ದಲ್ಲ. ಈ ಉದ್ದೇಶಕ್ಕಾಗಿ ರಚಿಸುವ ಆಯೋಗಕ್ಕೆ ರಾಜ್ಯ ವಿಧಾನಸಭೆಗಳ ಸ್ಪೀಕರ್‌ʼಗಳು ಹಾಗೂ ಲೋಕಸಭೆ ಸ್ಪೀಕರ್‌ ಸೇರಿ ಸದಸ್ಯರನ್ನು ನೇಮಕ ಮಾಡುತ್ತಾರೆ. ಆ ಆಯೋಗ ವರದಿ ನೀಡಿದ ನಂತರ ಅದರ ಬಗ್ಗೆ ಸಂಸತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಎಷ್ಟು ಸಲ ಕ್ಷೇತ್ರ ಮರು ವಿಂಗಡಣೆ ಆಗಿದೆ ಎನ್ನುವುದು ರಾಹುಲ್‌ ಗಾಂಧಿಗೆ ಗೊತ್ತಿಲ್ಲವೇ? ದುರಂತವೆಂದರೆ, ಈ ಪಕ್ಷಕ್ಕೆ ವ್ಯವಸ್ಥೆ ಮೇಲೆಯೇ ನಂಬಿಕೆ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ರಾಷ್ಟ್ರದಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಘೋರ ಅನ್ಯಾಯವನ್ನು ಕಾಂಗ್ರೆಸ್‌ ಮೈತ್ರಿಕೂಟ ಮಾಡಿದೆ. ಇದಕ್ಕೆ ಕ್ಷಮೆ ಇಲ್ಲ. ಮುಂದಿನ ದಿನಗಳಲ್ಲಿ ಮಹಿಳೆಯರೇ ಇವರಿಗೆಲ್ಲಾ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಗ್ರೇಟರ್‌ ಬೆಂಗಳೂರು; ಕಾಂಗ್ರೆಸ್ಸಿಗೆ ಕುಟುಕಿದ ಕೇಂದ್ರ ಸಚಿವರು..

ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಕರ್ನಾಟಕ ಕಾಂಗ್ರೆಸ್‌ ಸರಕಾರ ಬಿಬಿಎಂಪಿಯನ್ನು ತೆಗೆದು ಗ್ರೇಟರ್‌ ಬೆಂಗಳೂರು ಎಂದು ಮಾಡಿದೆ. ನಂತರ ಐದು ವಿಭಾಗಗಳು, ವಾರ್ಡುಗಳ ರಚನೆ ಹಾಗೂ ಕೆಟಗರಿ ಹಂಚಿಕೆ ಇವೆಲ್ಲವನ್ನು ಸರ್ವಪಕ್ಷಗಳನ್ನು ಕರೆದು ಚರ್ಚಿಸಿ ಮಾಡಿತೇ? ತಮ್ಮಿಚ್ಛೆಗೆ ತಕ್ಕಂತೆ ಮಾಡಿದ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಆದೇಶವಿತ್ತೋ ಅಥವಾ ನಗರದ ಜನರ ಒತ್ತಾಯವಿತ್ತೋ? ಇಂಥ ಕಾಂಗ್ರೆಸ್ಸಿಗೆ ಮೋದಿ ಅವರನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು.

ಜೆಡಿಎಸ್‌ʼಗೆ ಜಮೀರ್‌ ; ಗಾಳಿಸುದ್ದಿ, ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ….

ಸಚಿವ ಜಮೀರ್‌ ಅಹಮದ್‌ ಜೆಡಿಎಸ್‌ ಪಕ್ಷಕ್ಕೆ ಸೇರುತ್ತಾರೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ,ಕಾಂಗ್ರೆಸ್‌ ಪಕ್ಷದ ಯಾರೋಬ್ಬರೂ ನನ್ನ ಸಂಪರ್ಕದಲ್ಲಿ ಇಲ್ಲ. ಹಾಗಿದ್ದ ಮೇಲೆ ಅವರು ಪಕ್ಷ ಸೇರುವ ಮಾತೆಲ್ಲಿಂದ ಬರಬೇಕು? ಇದೆಲ್ಲವೂ ಗಾಳಿಸುದ್ದಿಯಷ್ಟೇ ಎಂದು ಈವರೆಗೆ ಕೆಲವರು ತೇಲಿಬಿಟ್ಟಿದ್ದ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.

ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಾನು ತಾನೇ ನಿರ್ಧಾರ ಕೈಗೊಳ್ಳಬೇಕು. ನನ್ನ ಸಂಪರ್ಕಕ್ಕೇ ಯಾರೂ ಬಂದಿಲ್ಲ ಎಂದ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇಕೆ ಬರುತ್ತದೆ. ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಫಲಿತಾಂಶ ಏನಾಗುತ್ತದೋ ನೋಡೋಣ. ಫಲಿತಾಂಶ ಬರುವ ಮುನ್ನವೇ ಯಾಕೆ ಅನುಮಾನ? ಅಲ್ಪಸಂಖ್ಯಾತರನ್ನು ನಾವೇ ರಕ್ಷಣೆ ಮಾಡುವವರು ಎನ್ನುವ ಕಾಂಗ್ರೆಸ್ ಯಾಕೆ ಗೊಂದಲ ಮಾಡುತ್ತಿದೆ. ಒಂದು ಸಮುದಾಯದ ಮೇಲೆ ಯಾಕೆ ಗದಾಪ್ರಹಾರ ನಡೆಸುತ್ತಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

ನನಗೂ ನೀವು ಹೇಳಿದ ವ್ಯಕ್ತಿಗೂ ಸಂಪರ್ಕ ಇಲ್ಲ. ಜೆಡಿಎಸ್ ಜತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ. ನಾವು ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ. ಇನ್ನೊಂದು ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟುಗಳನ್ನು ಲಾಭ ಮಾಡಿಕೊಳ್ಳುವ ಮನಸ್ಥಿತಿ ನಮ್ಮದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Tags: Amit ShahArjun Ram Meghawalb. z. zameer ahmed khanBagalakote By ElectionBJPCM Siddaramaiahcongressdavanagere by electionDelimitation BillDK ShivakumarDMKH D KumaraswamyIndian PoliticsKiran RijeejuM K StalinNarendra ModiPratidhvaniRahul GandhiTMCUnion MinistersWomen Reservatinon Bill
Previous Post

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

Next Post

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada