• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಪಕ್ಷ ತಾಯಿ ಇದ್ದಂತೆ, ಟಿಕೆಟ್ ತಪ್ಪಿದ್ದರೂ ಪಕ್ಷ ಬಿಡಲ್ಲ ; ರಾಮದಾಸ್

Any Mind by Any Mind
April 19, 2023
in Top Story, ದೇಶ, ರಾಜಕೀಯ
0
ಬಿಜೆಪಿ ಪಕ್ಷ ತಾಯಿ ಇದ್ದಂತೆ, ಟಿಕೆಟ್ ತಪ್ಪಿದ್ದರೂ  ಪಕ್ಷ ಬಿಡಲ್ಲ ; ರಾಮದಾಸ್
Share on WhatsAppShare on FacebookShare on Telegram

ಮೈಸೂರು :ಏ.8: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ತಪ್ಪಿದರೂ ಬಿಜೆಪಿಯಲ್ಲೇ ಇರುತ್ತೇನೆ.‌ ಶ್ರೀವತ್ಸ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

 ಮೈಸೂರಿನ ತಮ್ಮ‌ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮದಾಸ್, ವಿಧಾನಸಭೆ ಚುನಾವಣಾ ಕಣಕ್ಕಿಳಿಯದಿರಲು ತೀರ್ಮಾನಿಸಿದ್ದಾರೆ. ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಪ್ರಚಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಸುವ ವೇಳೆಯೂ ಹಾಜರಿರುತ್ತೇನೆ. ಇನ್ನು ಮುಂದೆ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಶಾಸಕ ರಾಮದಾಸ್ ಹೇಳಿದ್ದಾರೆ. ನನಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಪ್ರೀತಿ. ಜೀವ ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ನನಗೆ ಶಾಸಕ ಸ್ಥಾನ ಮುಖ್ಯ ಅಲ್ಲ. ನನ್ನ ದೇಶ ಮುನ್ನಡೆಸುತ್ತಿರುವ ವಿಶ್ವ ನಾಯಕ ಮೋದಿ ಅವರಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು.

ADVERTISEMENT


ಮುಂದಿನ 5 ವರ್ಷ ದೊಡ್ಡ ವಿಷನ್ ಇಟ್ಟುಕೊಂಡಿದ್ದೆ. ಅದನ್ನು ಈಡೇರಿಸಲು ಆಗುತ್ತಿಲ್ಲ ಅನ್ನೋ ಬೇಸರ ಇದೆ. ನನಗೆ ಟಿಕೆಟ್ ಯಾರು ತಪ್ಪಿಸಿದರು ಎನ್ನುವುದರ ಬಗ್ಗೆ ಪೋಸ್ಟ್ ಮಾರ್ಟಂ ಮಾಡಲ್ಲ. ಜನರ ಜೊತೆ ಇರುತ್ತೇನೆ. ಪಕ್ಷದ ಸೂಚನೆ ಪಾಲಿಸುತ್ತೇನೆ. ಶಾಸಕ ಆಗುವುದಕ್ಕಿಂತ ಪ್ರಧಾನಿ ಮೋದಿ ಪ್ರೀತಿ ಮುಖ್ಯ. ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು. ರಾಷ್ಟ್ರದ ವಿಚಾರಕ್ಕಾಗಿ ಉತ್ತಮ ತೀರ್ಮಾನ ಮಾಡ್ತಿದ್ದೇನೆ. ಪಕ್ಷದ ಜೊತೆ ಇರುತ್ತೇನೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ರಾಮದಾಸ್ ತಿಳಿಸಿದರು. ನಾನು ಆರ್.ಎಸ್.ಎಸ್ ಕಟ್ಟಾಳು ಆದ್ದರಿಂದ ಪಕ್ಷ ಹೇಳಿದಂತೆ ಮಾಡುತ್ತೇನೆ.‌ ನನ್ನ ಜೀವನದಲ್ಲಿ ಪಕ್ಷ ಒಳ್ಳೇದನ್ನು ಕೊಟ್ಟಿದೆ, ದುಃಖವನ್ನು ಕೊಟ್ಟಿದೆ, ನನ್ನ ವೈಯಕ್ತಿಕ ನಿಲುವಿಗಿಂತ ಪಕ್ಷ ಮುಖ್ಯ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತೇನೆ ಎಂದು ತಿಳಿಸಿದರು. ಈ ಮೂಲಕ ಮೂರು ದಶಕಗಳ ಬಳಿಕ ಕೃಷ್ಣರಾಜ ಕ್ಷೇತ್ರದ ಚುನಾವಣಾ ಸ್ಪರ್ಧಾ ಕಣದಿಂದ ದೂರ ಉಳಿಯಲಿರುವ ರಾಮದಾಸ್ ನಿರ್ಧಾರಿಸಿದ್ದಾರೆ.

Tags: BJPbjpkarnatakakr nagaraMysorePMModiramdasನರೇಂದ್ರ ಮೋದಿಬಿಜೆಪಿ
Previous Post

ಪೇಶ್ವೆಗಳ ಅವಸಾನ ನೆನಪಿಸುತ್ತಿರುವ ಬಿಜೆಪಿಯೊಳಗಿನ ಬೆಳವಣಿಗೆಗಳು

Next Post

ಭಿಕ್ಷೆ ಬೇಡಿದ ಹಣದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ..!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಭಿಕ್ಷೆ ಬೇಡಿದ ಹಣದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ..!

ಭಿಕ್ಷೆ ಬೇಡಿದ ಹಣದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada