• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ಸಿನಿಮಾ
0
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Share on WhatsAppShare on FacebookShare on Telegram
ADVERTISEMENT

ಬಹಳ ದಿನಗಳ ನಂತರದಲ್ಲಿ ಕನ್ನಡದಲ್ಲಿ ಫೋಟೋಗ್ರಾಫರ್ ಜೀವನದ ಕುರಿತಾದ ಕತೆಯೊಂದು ಸಿನೆಮಾವಾಗಿ ತೆರೆಗೆ ಬರಲು ಸಿದ್ಧವಾಗಿದೆ. ಲಿಖಿತ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮಾ ಮುಖ್ಯ ಭೂಮಿಕೆಯಲ್ಲಿರುವ ‘ಫುಲ್ ಮೀಲ್ಸ್’ ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನೆಮಾ. ಚಿತ್ರದುರ್ಗದ ಪ್ರತಿಭೆ ಎನ್.ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ‘ಫುಲ್ ಮೀಲ್ಸ್’ ಸಿನೆಮಾ ನವೆಂಬರ್ 21ಕ್ಕೆ ಬಿಡುಗಡೆಯಾಗಲಿದ್ದು, ಸಿನೆಮಾದ ಟ್ರೈಲರ್ ಇಂದು ಡಿ.ಜಿ.ಕೆ. ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡಯಾಗಿದೆ.

ವೆಡ್ಡಿಂಗ್ ಫೋಟೋಗ್ರಾಫರ್ ಒಬ್ಬ ಪ್ರೀ ವೆಡ್ಡಿಂಗ್ ಶೂಟ್‌ಗೆಂದು ಹೋದಾಗ, ಆ ಮದುವೆಯ ಹೆಣ್ಣಿಗೆ ಫೋಟೋಗ್ರಾಫರ್ ಮೇಲೆ ಪ್ರೀತಿ ಮೂಡುತ್ತದೆ. ಈ ಹಿನ್ನಲೆಯಲ್ಲಿ ಸೃಷ್ಟಿಯಾಗುವ ಪರಿಸ್ಥಿತಿಗಳೇ ಚಿತ್ರದ ಪ್ರಮುಖ ಕಥಾವಸ್ತು. ಕಾಮಿಡಿ ಮತ್ತು ಎಮೋಶನ್ ಹದವಾದ ಮಿಶ್ರಣದಂತೆ ಗೋಚರಿಸುತ್ತಿರುವ ‘ಫುಲ್ ಮೀಲ್ಸ್’ ಪ್ರೇಕ್ಷಕರಿಗೆ ನಿಜವಾದ ‘ಫುಲ್ ಮೀಲ್ಸ್’ ಆಗಲಿದೆ ಎಂಬ ಭರವಸೆಯನ್ನು ಟ್ರೈಲರ್ ಮೂಡಿಸಿದೆ.

ಈ ಹಿಂದೆ ಸಂಕಷ್ಟಕರ ಗಣಪತಿ, ಪುನೀತ್ ರಾಜ್ ಕುಮಾರ್ ಅವರ ಪಿ. ಆರ್. ಕೆ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ನಾಯಕ ನಟರಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ನಾಯಕ ನಟ ಲಿಖಿತ್ ಶೆಟ್ಟಿ ಫೋಟೋಗ್ರಾಫರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ದಿಯಾ ಖ್ಯಾತಿಯ ಖುಷಿ ರವಿ ಮದುವೆ ಹೆಣ್ಣಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಹಿಂದಿನ ಸಿನೆಮಾಗಳಿಗಿಂತ ವಿಭಿನ್ನ ಮತ್ತು ವಿಶೇಷ ಪಾತ್ರ ಅವರದ್ದಾಗಿದೆ. ಮೇಕಪ್ ಹುಡುಗಿಯ ಪಾತ್ರದಲ್ಲಿ ತೇಜಸ್ವಿನಿ ಶರ್ಮ‌ ಕಾಣಿಸಿಕೊಂಡಿದ್ದು, ತ್ರಿಕೋನ ಪ್ರೇಮಕತೆಯ ಸ್ಪರ್ಶ ಕೂಡ ಸಿನೆಮಾದಲ್ಲಿದೆ.

VidhanaSoudha : ಆಂಧ್ರದಲ್ಲಿ ಕನ್ನಡಿಗರನ್ನು ಹೀಯಾಳಿಸುತ್ತಾರೆ..! #pratidhvani #tirupati #andrapradesh

ಇತ್ತೀಚಿನ ದಿನಗಳಲ್ಲಿ ಮನೋರಂಜನೆಯ ಜೊತೆಗೆ ನವಿರಾದ ಪ್ರೇಮಕಥೆಯನ್ನು ಹೇಳುವ ಸಿನೆಮಾಗಳ ಕಡಿಮೆಯಾಗಿರುವ ಸಂದರ್ಭದಲ್ಲಿ, ಆ ಕೊರೆತೆಯನ್ನು ನೀಗುವ ಸುಳಿವನ್ನು ‘ಫುಲ್ ಮೀಲ್ಸ್’ನ ಟ್ರೈಲರ್ ನೀಡಿದೆ. ಪ್ರೇಕ್ಷಕರಿಗೆ ಫುಲ್ ಮೀಲ್ಸ್ ಅನ್ನು ಸವಿಯಲು ಧೈರ್ಯವಾಗಿಯೇ ಫುಲ್ ಮೀಲ್ಸ್ ಬರಲು ಬಲವಾದ ಆಮಂತ್ರಣ ಟ್ರೈಲರ್ ಮೂಲಕ ಸಿಕ್ಕಿದೆ.

ಈ ಚಿತ್ರದ ಮೂಲಕ ಲಿಖಿತ್ ಶೆಟ್ಟಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ಮಾಪಕರಾಗಿದ್ದಾರೆ. ಗುರು ಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ, ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ. ಉಳಿದಂತೆ ತಾರಾಂಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

Khesari Lal Yadav : ಖೇಸರಿ ಲಾಲ್ ಯಾದವ್ ಚುನಾವಣಾ ಪ್ರಚಾರದ ಸಮಯದಲ್ಲಿ ಕರಕತ್ ಅವರನ್ನು ಭೇಟಿ
Tags: 2025 new kannada moviesFull Meals MovieKannadakannada moviesLikith Shettysandalwood
Previous Post

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

Next Post

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada