• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ಬಗ್ಗೆ ಸಿಡಿದೆದ್ದ ಲಿಂಗಾಯತ ಸ್ವಾಮೀಜಿ.. ಮರು ಸರ್ವೇಗೆ ಆಗ್ರಹ

ಕೃಷ್ಣ ಮಣಿ by ಕೃಷ್ಣ ಮಣಿ
April 16, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ಬಗ್ಗೆ ಸಿಡಿದೆದ್ದ ಲಿಂಗಾಯತ ಸ್ವಾಮೀಜಿ.. ಮರು ಸರ್ವೇಗೆ ಆಗ್ರಹ
Share on WhatsAppShare on FacebookShare on Telegram

ಜಾತಿ ಜನ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ, ಈ ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದ ಪಡಿಸಬೇಕು ಎಂದು ಗದಗದ ತೋಂಟದಾರ್ಯ ಮಠದ ಡಾ. ಸಿದ್ದರಾಮ ಶ್ರೀಗಳ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಇತ್ತೀಚೆಗೆ ಜಾತಿ ಗಣತಿ ವರದಿಯನ್ನ ಸ್ವೀಕರಿಸಿದೆ. ಸಚಿವ ಸಂಪುಟದ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚಿ ನಡೆಸಿದ್ದಾರೆ. ಏಪ್ರಿಲ್​ 17 ನೇ ತಾರೀಖಿನಂದು ಜಾತಿ ಗಣತಿ ವಿಚಾರವಾಗಿ ವಿಶೇಷ ಸಭೆಯನ್ನ ಕರೆದಿದ್ದಾರೆ. ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿ ಗಣತಿ ಸಿದ್ದ ಪಡಿಸಿದ್ದಾರೆ.. ಆ ಜಾತಿ ಗಣತಿ ವರದಿ ಸಮರ್ಪಕವಾಗಿ ಇಲ್ಲ.. ಈ ವರದಿಯನ್ನ ಸಿದ್ದ ಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನ ಸಂಪರ್ಕಿಸಿಲ್ಲವೆಂಬ ಆರೋಪವಿದೆ.

ADVERTISEMENT

ಕರ್ನಾಟಕದಲ್ಲಿ ಲಿಂಗಾಯತರು ಬಹು ಸಂಖ್ಯಾತರು ಎಂಬುದು ಎಲ್ಲರಿಗೂ ತಿಳಿದಿದೆ.. ಲಿಂಗಾಯತರ ಬಳಿಕ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಇದ್ದಾರೆ.. ಆದ್ರೆ ಜಾತಿ ಗಣತಿಯ ಮುಖ್ಯಾಂಶಗಳನ್ನು ಗಮನಿಸಿದ್ದಾಗ, ಲಿಂಗಾಯತರ ಜನ ಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ.. ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರೋ ಕಾರಣವಾಗಿರಬಹುದು.. ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವದರಿಂದ ಅನೇಕರಿಗೆ ಅನ್ಯಾಯವಾಗಬಹುದು.. ಶಿಕ್ಷಣ, ರಾಜಕೀಯ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯ ಆಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ.. ಸರ್ಕಾರ ಸ್ವೀಕಾರ ಮಾಡಿರುವ ವರದಿ ಸಮರ್ಪಕವಾಗಿಲ್ಲ. ಸರ್ಕಾರ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದ ಪಡಿಸಬೇಕೆಂದು ಆಗ್ರಹ ಮಾಡಿದ್ದಾರೆ.

CM Siddaramaiah  : ಜಾತಿಗಣತಿ ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಸಿದ್ದರಾಮಶ್ರೀ ಬೇಸರ #pratidhvani

ಲಿಂಗಾಯತರ ಜನಸಂಖ್ಯೆ ಅಂದಾಜಿನ ಪ್ರಕಾರ 1 ಕೋಟಿ 50 ಲಕ್ಷಕ್ಕೂ ಹೆಚ್ಚು ಇದ್ದಾರೆ. ಆದ್ರೆ ಲಿಂಗಾಯತ ಸಂಖ್ಯೆ ವರದಿಯಲ್ಲಿ 72 ಲಕ್ಷಕ್ಕೆ ಇಳಿಸಿದ್ದು ಅತ್ಯಂತ ಆಘಾತಕಾರಿಯಾಗಿದೆ.. ಬೇರೆ ಬೇರೆ ಜಾತಿಯವರು ಮುನ್ನಲೆಗೆ ಬಂದಿದ್ದಾರೆ. ಸರ್ಕಾರ ಇನ್ನೊಮ್ಮೆ ಪರಿಶೀಲನೆ ಮಾಡಿ ನೈಜವರದಿ ಬಿಡುಗಡೆ ಮಾಡಬೇಕು. ಸರ್ಕಾರ ಯಾರಿಗೂ ಅನ್ಯಾಯವಾಗದಂತಹ ವರದಿಯನ್ನ ಸಿದ್ದ ಪಡಿಸಿ ಯೋಜನೆ ಪೂರ್ಣಗೊಳಿಸಬೇಕು. ಜಾತಿ ಗಣತಿ ಮಾಡಿರುವ ಉದ್ದೇಶ ಸ್ಪಷ್ಟವಾಗಿಲ್ಲ. ಒಳಗಡೆ ಒಂದು ಉದ್ದೇಶ ಇಟ್ಟಿಕೊಂಡು ಮಾಡಿರಬಹುದು.. ಜಾತಿ ಗಣತಿ ವರದಿ ಬಹುತೇಕ ಲಿಂಗಾಯತರ ವಿರೋಧವಿದೆ. ಸಚಿವ ಸಂಪುಟದಲ್ಲಿರುವಂತಹ ಕಾಂಗ್ರೆಸ್​ನ ಮಂತ್ರಿಗಳ ವಿರೋಧವಿದೆ. ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದ ವಿಚಾರವಾಗಿದೆ ಎಂದಿದ್ದಾರೆ ಶ್ರೀಗಳು.

ಸಮಾಜದ ಪ್ರಮುಖರು, ಗಣ್ಯ ವ್ಯಕ್ತಿಗಳು, ಮಠಾಧೀಶರು ಸಮಾಲೋಚನೆ ಮಾಡಿ ಮುಂದಿನ ತೀರ್ಮಾನ ತಗೆದುಕೊಳ್ಳುತ್ತೇವೆ ಎಂದಿರುವ ತೋಂಟದಾರ್ಯ ಶ್ರೀಗಳು, ತೋಂಟದಾರ್ಯ ಮಠದ ನಿಲುವು ಯಾವ ಜಾತಿಗು ಅನ್ಯಾಯವಾಗಬಾರದು ಎಂಬುದಾಗಿದೆ. ಸಾಮಾಜಿಕ ನ್ಯಾಯದ ಪರ ಸರ್ಕಾರ ಇರಬೇಕೆಂದು ಕೇಳಿಕೊಳ್ಳುತ್ತೇನೆ. ರಾಜಕೀಯ ಉದ್ದೇಶದಿಂದ ಜಾತಿ ಗಣತಿ ಜಾರಿಗೆ ತರುತ್ತಿರಬಹುದು.. ಜಾತಿ ಗಣತಿಯಲ್ಲಿ ಲಿಂಗಾಯತರಿಗೆ ಹೇಗೆ ಅನ್ಯಾಯವಾಗಿದೆ, ಅದೇ ರೀತಿ ಒಕ್ಕಲಿಗರಿಗೂ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸಚಿವ ಸಂಪುಟದ ಪ್ರಮುಖ ಸಚಿವರೇ ಹೇಳಿದ್ದಾರೆ. ಸಂಪುಟದಲ್ಲಿರುವ ಲಿಂಗಾಯತ ಹಾಗೂ ಒಕ್ಕಲಿಗ ಸಚಿವರು ಈ ವರದಿಯಲ್ಲಿ ದೋಷವಿದೆ. ವರದಿ ಸಮರ್ಪಕವಾಗಿಲ್ಲ.. ಇದನ್ನು ಮರಳಿ ಪರಿಶೀಲನೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ. ಏಪ್ರಿಲ್​ 17 ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಏನ್ನು ತೀರ್ಮಾನ ಆಗುತ್ತೇ ಕಾದು ನೋಡೋಣ ಎಂದಿದ್ದಾರೆ ಸ್ವಾಮೀಜಿ.

Tags: caste based reservationCaste Censuscaste census debatecaste census oppositioncaste census reportcaste data reportcaste reservation issuecaste survey indiacensus report protestct ravi controversyHDKkarnataka caste censuskarnataka leaders oppose censuspolitical controversy karnatakareservation to upper castesiddaramaiah non veg controvesysiddramaiah on non veg controversy
Previous Post

2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? : ಸಿಎಂ ಸಿದ್ದು ವಿರುದ್ಧ ಹೆಚ್.ಡಿ.ಕೆ ಕೆಂಡಾಮಂಡಲ..! 

Next Post

ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..

ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada