ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ರಚೆನೆಗೆ ಸಂಬಂಧಿಸಿದಂತೆ ಸೋಮವಾರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ. ಬಹುತೇಕ ಸಂಜೆಯ ಹೊತ್ತಿಗೆ ನೂತನ ಸಚಿವರ ಪಟ್ಟಿ ಅಂತಿಮಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.
ಭಾನುವಾರ ಸಂಜೆ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ, ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಸಂಪುಟವನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡುವುದು ಸಾಧ್ಯತೆ ಕಡಿಮೆ ಇದ್ದು, ಒಂದುವೇಳೆ ಭಿನ್ನಮತ ಎದ್ದಾಗ ಸಮಾಧಾನಿಸಲು ಒಂದಿಷ್ಟು ಸಚಿವ ಸ್ಥಾನವನ್ನು ಖಾಲಿ ಉಳಿಸಲಾಗುತ್ತದೆ ಎನ್ನಲಾಗಿದೆ.
ಶುಕ್ರವಾರ ಸಿಎಂ ಬೊಮ್ಮಾಯಿ ಅವರು ವರಿಷ್ಠರನ್ನು ಭೇಟಿ ಮಾಡಿದ ವೇಳೆ ಸಂಪುಟಕ್ಕೆ ಸೇರಬಹುದಾದವರ ಪಟ್ಟಿಯೊಂದನ್ನು ಸಿದ್ಧಪಡಿಸಿಕೊಂಡು ಬರುವಂತೆ ಸೂಚಿಸಿದ್ದರು ಎನ್ನಲಾಗಿದ್ದು, ಅದರಂತೆ ಬೆಂಗಳೂರಿಗೆ ವಾಪಸಾಗಿದ್ದ ಅವರು ಪಕ್ಷದ ವಿವಿಧ ನಾಯಕರೊಂದಿಗೆ ಚರ್ಚೆ ನಡೆಸಿ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ನಡುವೆ ಸಂಭಾವ್ಯ ಸಚಿವರ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಕೆ ಎಸ್ ಈಶ್ವರಪ್ಪ, ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಮೊದಲಾದವರ ಹೆಸರು ಕೈಬಿಡಲಾಗಿದೆ.
ಸಂಭಾವ್ಯ ಸಚಿವರ ಪಟ್ಟಿ