ಚಾಮರಾಜನಗರ: ಸಾಹಿತಿ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ ಪ್ರೊ.ಮಲೆಯೂರು ಗುರುಸ್ವಾಮಿ(76) ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಪ್ರೊ. ಮಲೆಯೂರು ಗುರುಸ್ವಾಮಿ ಅವರಿಗೆ ಅನಾರೊಗ್ಯ ಹಿನ್ನೆಲೆ ಕೆಲ ದಿನಗಳ ಹಿಂದೆ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಜೆಎಸ್ಎಸ್ ಮಹಾ ವಿದ್ಯಾಪೀಠದ ಬಳಿ ಪ್ರೊ. ಮಲೆಯೂರು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತ ಪ್ರೊ. ಮಲೆಯೂರು ಗುರುಸ್ವಾಮಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಸಂತಾಪ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾಗಿದ್ದ ಗುರುಸ್ವಾಮಿ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ಸೂಚಿಸಿದೆ.