ರಾಜ್ಯದ ಕುಡಿಯುವ ನೀರಿನ ಯೋಜನೆಗಳಿಗೆ 51.1 ಕೋಟಿ ಸಾಲವನ್ನು ಅನುಮೋದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಶ್ವಬ್ಯಾಂಕ್ ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿಗೆ ವಿಶ್ವಬ್ಯಾಂಕ್ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗ ಭೇಟಿ ನೀಡಿ ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿತು.
ರಾಜ್ಯದ ಕುಡಿಯುವ ನೀರಿನ ಯೋಜನೆಗಳಿಗೆ 51.1 ಕೋಟಿ ಸಾಲವನ್ನು ಅನುಮೋದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಶ್ವಬ್ಯಾಂಕ್ ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದೆ.
ನಗರ ನೀರು ಸರಬರಾಜು ನಿರ್ವಹಣಾ ಯೋಜನೆಗೆ ಹೆಚ್ಚುವರಿಯಾಗಿ 15ಕೋಟಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಗ್ರಾಮೀಣ ಕುಡಿಯುವ ನೀರಿನ ಯೋಜನೆಗೆ 36 ಕೋಟಿ ಸಾಲವನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ವಿಶ್ವಬ್ಯಾಂಕ್ ಇದೆ ಎನ್ನುವ ಮಾಹಿತಿಯನ್ನು ಕೊಮೆ ಹಂಚಿಕೊಡಿದ್ದಾರೆ ಎನ್ನಲಾಗಿದೆ..
ಈ ಎರಡು ವ್ಯಾಪ್ತಿಯ ಯೋಜನೆಗಳು ಮುಂದಿನ 5ರಿಂದ 8 ವರ್ಷ ಅವಧಿಯಲ್ಲಿ ಅನುಷ್ಠಾನಗೊಳ್ಳಲಿವೆ ಅಂತಾರಾಷ್ಟ್ರೀಯ ಪುನರ್ ನಿರ್ಮಾಣ ಮತ್ತು ಅಭಿವೃದ್ಧಿ ಬ್ಯಾಂಕ್ ಮೂಲಕ ಸಾಲದ ಹಣವನ್ನು ಒದಗಿಸಲಾಗುತ್ತದೆ.