
ವೈರಲ್ ಆಗಿರುವ ವಿಡಿಯೋದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಾಣಬಹುದು. ಕಾರಿನ ಚಾಲಕ ಒಳಗೆ ಸಿಲುಕಿಕೊಂಡಿದ್ದು, ಕಾರಿನ ಬಾಗಿಲು ತೆಗೆಯಲು ನಾಲ್ಕೈದು ಜನ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.ಬೆಂಕಿ, ಹೊಗೆ ಮಧ್ಯೆಯೂ ಪಟ್ಟು ಬಿಡದೇ ಸ್ಥಳೀಯರು ಕಾರಿನ ಗಾಜು ಹೊಡೆದು ಕಾರಿನೊಳಗಿದ್ದ ವ್ಯಕ್ತಿಯನ್ನು ಹೊರತಂದಿದ್ದಾರೆ.



ಅಪಘಾತದಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರಿನಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಸ್ಥಳೀಯರು ಸೇರಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
https://www.instagram.com/reel/DALomjJy6SR/?igsh=MjYwOGxyMDdubmV5
rajputroyal_143 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋದಲ್ಲಿ ರಿಯಲ್ ಹಿರೋಸ್ ಎಂದು ಕ್ಯಾಪ್ಷನ್ ಕೂಡ ಬರೆಯಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 15.1 ಮಿಲಿಯನ್ ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.