• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆ : ಸುಮಲತಾ ಅಂಬರೀಶ್ ಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು

Any Mind by Any Mind
March 9, 2024
in Top Story, ಕರ್ನಾಟಕ
0
ಮಂಡ್ಯದಲ್ಲಿ ಸುಮಲತಾರಿಂದ ಬ್ಯಾಕ್ ಟು ಬ್ಯಾಕ್ ಪ್ರವಾಸ
Share on WhatsAppShare on FacebookShare on Telegram

ಬೆಂಗಳೂರು(Bengaluru) :ಲೋಕಸಭಾ ಚುನಾವಣಾ (Loksabha Election)  ಕಾವು ಜೋರಾಗಿದ್ದು, ಮಂಡ್ಯ (Mandya) ಕ್ಷೇತ್ರ ಎಲ್ಲರಲ್ಲೂ ಕೂತುಹಲ ಮೂಡಿಸಿದೆ.

ADVERTISEMENT

ಮಂಡ್ಯದಲ್ಲಿ ಬಿಜೆಪಿಯಿಂದ (BJP) ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambarishl) ಹೇಳಿದ್ದರು. ಆದರೆ ಇದೀಗ ಸುಮಲತಾ ಅವರಿಗೆ ಮಂಡ್ಯ ಟಿಕೆಟ್ ಸಿಗುವುದು ಡೌಟ್ ಆಗಿದೆ.

ಹೌದು, ಸುಮಲತಾಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸುಳಿವನ್ನು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ (R Ashok) ಅವರು ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಮಗೆ ಬೆಂಬಲವನ್ನಷ್ಟೇ ನೀಡಿದ್ದಾರೆ. ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು‌ ಹೇಳಿದರು.‌

ಸುಮಲತಾ ಅಂಬರೀಶ್ ನಮಗೆ ಬರೀ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ, ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ. ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕಿರುವವರು ಆರು ತಿಂಗಳ ಮುಂಚೆ ಸೇರಬೇಕಿತ್ತು. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡ್ತಾರೆ. ಮಂಡ್ಯದಲ್ಲಿ ನಮಗೆ ಮತಗಳಿಕೆ ಜಾಸ್ತಿಯಾಗಿದೆ. ನಮ್ಮ ಹಾಗೂ ಜೆಡಿಎಸ್  (JDS) ಇಬ್ಬರ ಶಕ್ತಿ ಸೇರಿದರೆ ಜಾಸ್ತಿ ಆಗಿದೆ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು, ಮಂಡ್ಯ, ಗುಲ್ಬರ್ಗ, ಹಾಸನ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಹಾಲಿ ಉತ್ತಮ ಸಂಸದರಿಗೆ ಮತ್ತೊಮ್ಮೆ ಅವಕಾಶ ಕೊಡುವ ಬಗ್ಗೆ ಚರ್ಚೆ ಆಗಿದೆ. ಬೆಂಗಳೂರು ಉತ್ತರಕ್ಕೆ ನಮ್ಮ ಅಭಿಪ್ರಾಯವನ್ನು ನಾವು ತಿಳಿಸಿದ್ದೇವೆ. ಮುಂದಿನ ತೀರ್ಮಾನವನ್ನು ನಮ್ಮ ವರಿಷ್ಠರು ಮಾಡುತ್ತಾರೆ. ಜೆಡಿಎಸ್ ನಾಯಕರು ಇನ್ನು ಎರಡು-ಮೂರು ದಿನಗಳಲ್ಲಿ ದೆಹಲಿಗೆ ಹೋಗುತ್ತಾರೆ. ಅವರು ಯಾವ ಕ್ಷೇತ್ರದಲ್ಲಿ ಸೀಟು ಕೇಳುತ್ತಾರೋ ಅದನ್ನು ಬಿಟ್ಟು ಕೊಡುವ ಬಗ್ಗೆ ವರಿಷ್ಠರು ಮಾತಾಡುತ್ತಾರೆ ಎಂದು ಹೇಳಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್ ಸಿಗಬಹುದು. ಇನ್ನೊಂದು ಸುತ್ತಿನ ಮಾತುಕತೆ ಆದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಈ ಬಾರಿ ಕೆಲವು ಹಾಲಿ ಸಂಸದರಿಗೆ ವಯಸ್ಸು ಹಾಗೂ ಅನಾರೋಗ್ಯ ಕಾರಣದಿಂದಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ತಿಳಿಸಿದರು.

ವರಿಷ್ಠರು ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತೆಗೆದುಕೊಂಡಿದ್ದಾರೆ. ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ. ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ (Amit Shah), ನಡ್ಡಾ (Nadda),  ಸಂತೋಷ್ (santhosh) ಅವರ ಜೊತೆ ಚರ್ಚೆ ಆಗಿದೆ ಎಂದು ಮಾಹಿತಿ ನೀಡಿದರು.

#karnataka #bengaluru #loksabhaelection #mandya #sumalatha #rashok #bjp #jds

Previous Post

ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗಲ್ಲ : ನಟ ಡಾಲಿ ಧನಂಜಯ್

Next Post

ಮಾಜಿ ಶಾಸಕ ವಾಸು ನಿಧನ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಮಾಜಿ ಶಾಸಕ ವಾಸು ನಿಧನ

ಮಾಜಿ ಶಾಸಕ ವಾಸು ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada