ಮೈಸೂರು (Mysuru): ಲೋಕಸಭಾ ಚುನಾವಣೆಗೆ (Loksabha Election) ಅಭ್ಯರ್ಥಿ ಆಯ್ಕೆ ಗೊಂದಲದ ನಡುವೆ ಬಿಜೆಪಿ ನಾಯಕರು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಇಂದು ಮೈಸೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆ ಆಯೋಜಿಸಲಾಗಿದೆ.
ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ಡಾ. ಅಶ್ವತ್ ನಾರಾಯಣ್ (Dr.Ashwath Narayan) ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಸ್ಥಳೀಯ ಶಾಸಕರು, ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ ಇನ್ನು ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ. ಒಂದೆಡೆ ಹಾಲಿ ಸಂಸದರಾದ ಪ್ರತಾಪ್ ಸಿಂಹ (Pratap Smiha) ಅವರು ತಮಗೆ ಟಿಕೆಟ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ಮೈಸೂರು ರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರಿಗೆ ಟಿಕೆಟ್ ನೀಡಲಾಗುವುದು ಎನ್ನಲಾಗುತ್ತಿದೆ. ಜೊತೆಗೆ ಒಂದಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂದು ಕಾದು ನೋಡಬೇಕಿದೆ.
ಈ ನಡುವೆ ಮೈಸೂರು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
#Karnataka #loksabhaelection #mysuru #bjp #meeting