ನವದೆಹಲಿ (NewDelhi): ಲೋಕಸಭಾ ಚುನಾವಣೆಗೆ (Loksabha Election) ಕಾಂಗ್ರೆಸ್ (Congress) ತನ್ನ 40 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.
ರಾಹುಲ್ ಗಾಂಧಿ (Rahul Gandhi) ಸೇರಿದಂತೆ 40 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದೆ. ಕೇರಳದ (Kerala) ವಯನಾಡ್ (Wayanad) ನಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge), ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ (CEC) ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ದೆಹಲಿ, ಕರ್ನಾಟಕ, ಕೇರಳ, ಛತ್ತೀಸ್‌ಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ ಮತ್ತು ಲಕ್ಷ ದ್ವೀಪ್ ನಲ್ಲಿ ಲೋಕಸಭೆ ಸ್ಥಾನಗಳ ಕುರಿತು ಚರ್ಚೆಗಳು ನಡೆದವು. ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ವಿ.ಡಿ.ಸತೀಶನ್ (V.D.Satheesan) ಅವರು ಕೇರಳದಲ್ಲಿ ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಮತ್ತು ರಾಜ್ಯದಲ್ಲಿ ಅದರ ಮಿತ್ರ ಪಕ್ಷಗಳು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ತಿಳಿಸಿದರು.
ಅಂತೆಯೇ 16 ಸ್ಥಾನಗಳಲ್ಲಿ ಅಭ್ಯರ್ಥಿಗಳು ಯಾರು ಎಂದು ಸಿಇಸಿ ನಿರ್ಧಾರ ತೆಗೆದುಕೊಂಡಿದೆ. ಎಐಸಿಸಿ ಇಂದು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ ಎಂದು ತಿಳಿಸಿದರು.
#newdelhi #loksabhaelection #cwcmeeting #congress #mallikarjunkharge #rahulgandhi