ನವದೆಹಲಿ (Newdelhi): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Election) ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ.
ಆ ಮೂಲಕ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರು ಈ ಬಾರಿಯೂ ಅಮೇಥಿ ಮತ್ತು ವಯನಾಡ್ ಎರಡರಿಂದಲೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಳೆದ ತಿಂಗಳು ಮತದಾರರಿಗೆ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indra Gandhi) ಅವರು ರಾಯ್ ಬರೇಲಿಯಿಂದ ಮೂರು ಬಾರಿ ಗೆದ್ದಿದ್ದರು. ಅವರ ನಂತರ ಸೋನಿಯಾ ಗಾಂಧಿ ಅವರು ಐದು ಬಾರಿ ರಾಯ್ ಬರೇಲಿಯಿಂದ ಸಂಸದೆಯಾಗಿದ್ದಾರೆ. ರಾಯ್ ಬರೇಲಿ ಹಾಲಿ ಸಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಕಳೆದ ತಿಂಗಳು ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
#loksabhaelection #election #congress #soniagandhi #rahulgandhi #priyankagandhi