ಬೆಂಗಳೂರು (Bengaluru): 2024 ರ ಲೋಕಸಭಾ ಚುನಾವಣೆಯಲ್ಲಿ (Loksabha Election) ಕಾಂಗ್ರೆಸ್‌ನಿಂದ (Congress) ಕಣಕ್ಕಿಳಿಯುತ್ತಾರಾ ಡಾ.ಕೆ.ಸುಧಾಕರ್ (Dr.K.Sudhakar)?
ಪ್ರತಿಧ್ವನಿಗೆ (Pratidhvani) ಸಿಕ್ಕಿರುವ ಮಾಹಿತಿ ಅನ್ವಯ ಹೌದು ಎನ್ನಲಾಗುತ್ತಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡರಾದ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಬಿಜೆಪಿ ಹೈಕಮಾಂಡ್ ನಾಯಕರ ಬಳಿ ಬೇಡಿಕೆಯಿಟ್ಟಿದ್ದಾರೆ.

ಡಾ.ಕೆ.ಸುಧಾಕರ್ ಜೊತೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ (S.R.Vishwanath) ಪುತ್ರ ಅಲೋಕ್ ವಿಶ್ವನಾಥ್ (Alok vishwanath) ಬಹುತೇಕ ಅಂತಿಮವಾಗಿದೆ.
ಅಲೋಕ್ ವಿಶ್ವನಾಥ್‌ಗೆ ಚಿಕ್ಕಬಳ್ಳಾಪುರ ಟಿಕೆಟ್ ನೀಡಿದ್ರೆ, ತಮಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಆದರೆ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಹಾಲಿ ಸಂಸದರಾದ ಡಿ.ವಿ.ಸದಾನಂದಗೌಡ (D.V.Sadananda Gowda) ಸೇರಿದಂತೆ ಹಲವು ನಾಯಕರ ಕಣ್ಣಿಟ್ಟಿದ್ದಾರೆ.
ಹೀಗಾಗಿ, ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿರುವ ಡಾ.ಕೆ.ಸುಧಾಕರ್ ಅವರು ಈಗಾಗಲೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಟಿಕೆಟ್ ಸಿಗದೇ ಹೋದ್ರೆ, ಕಾಂಗ್ರೆಸ್‌ನಿಂದ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಲು ಡಾ.ಕೆ.ಸುಧಾಕರ್ ಸಜ್ಜಾಗಿದ್ದಾರೆ.
#karnataka #bengaluru #loksabhaelection #ksudhakar #congress #bjp






