ಬಿಜೆಪಿ ನಾಯಕ ಮತ್ತು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಚೊಚ್ಚಲ ಪ್ರಶಸ್ತಿ ಯಡಿಯೂರಪ್ಪ ಅವರಿಗೆ ಲಭಿಸಿದ್ದು ಅನೇಕ ನಾಯದಿಂದ ಅಭಿನಂದನೆಗಳ ಸುರುಮಳೆಯೇ ಬಂದಿದೆ.
ಜನರ ಸಂಕಷ್ಟಗಳಿಗೆ ಸದಾ ಕಾಲ ಸ್ಪಂದಿಸಿ, ಸದನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಇಂದಿನ ಜನಪ್ರತಿನಿಧಿಗಳಿಗೆ ಮಾದರಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ‘ ನೀಡಿರುವುದನ್ನು ಬೃಹತ್ ಮತ್ತು ಮಧ್ಯಮ ಜನನ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಸ್ವಾಗತಿಸಿದ್ದಾರೆ.
ಕರ್ನಾಟಕದ ಶಾಸನ ಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಸಾರ್ವಜನಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತ ನಿರ್ಧಾರ ಎಂದು ಬಣ್ಣಿಸಿದ್ದಾರೆ.
ಅದರಲ್ಲೂ ಯಡಿಯೂರಪ್ಪ ಅವರಂತಹ ಮೇರು ವ್ಯಕ್ತಿತ್ವದ ಹಿರಿಯ ನಾಯಕರನ್ನು ಗುರುತಿಸಿ ಪ್ರಶಸ್ತಿ ಕೊಟ್ಟಿರುವುದು ನಮ್ಮನ್ನು ಸೇರಿದಂತೆ ಮುಂದಿನ ‘ಯುವಜನಪ್ರತಿನಿಧಿಗಳಿಗೆ ಇದು ‘ ಮಾದರಿ’ ಆಗಲಿದೆ ಸಚಿವ ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರ ಆಯ್ಕೆ ನಿಜಕ್ಕೂ ಅತ್ಯಂತ ಸೂಕ್ತವಾಗಿದೆ.1983 ರಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದ ಅವರು,ಅಂದಿನಿಂದ ಇಂದಿನವರೆಗೂ ಜನಪ್ರತಿನಿಧಿಗಳು ಸದನಕ್ಕೆ ಕಡ್ಡಾಯವಾಗಿ ಬಂದು ಜನರ ಸಂಕಷ್ಟಗಳಿಗೆ ಸ್ಪಂಧಿಸಬೇಕು ಎಂಬುದನ್ನು ತೋರಿಸಿಕೊಟ್ಟ ಮಾದರಿ ಜನನಾಯಕ ಎಂದು ಪ್ರಶಂಸಿದ್ದಾರೆ.
ಯಡಿಯೂರಪ್ಪ ಗುಡುಗಿದರೆ, ವಿಧಾನಸೌಧ ನಡುಗುತಗತ್ತದೆ ಎಂಬುದನ್ನು ಸಾಧಿಸಿ ತೋರಿಸಿದ್ದರು. ಅಧಿವೇಶನದ ಸಂದರ್ಭದಲ್ಲಿ ಪ್ರತಿದಿನ ಸಮಯಕ್ಕೆ ಸರಿಯಾಗಿ ಸದನಕ್ಕೆ ಬರುವ ಮೂೆಲಕ ನಮಗೆಲ್ಲರಿಗೂ ಪ್ರೇರಣೆಯಾದವರು ಎಂದು ಹೇಳಿದ್ದಾರೆ.

ಜನರ ಬಗೆಗಿನ ಬದ್ದತೆ, ಜನರ ಬಗ್ಗೆ ಇರುವ ಕಳಕಳಿ,ಮುಂದಿನ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ.ನಿಮ್ಮ ಸೇವೆಯನ್ನು ಗುರುತಿಸಿ ಅತ್ಯುತ್ತಮ ಶಾಸಕ ನೀಡಿರುವುದು ಈ ಪ್ರಶಸ್ತಿಯ ಮೌಲ್ಯವನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.
ಮುಂದೆ ಶಾಸನ ಸಭೆಗೆ ಆಯ್ಕೆಯಾಗಿ ಬರಲಿರುವ ಜನಪ್ರತಿನಿಧಿಗಳಿಗೆ ಈ ಪ್ರಶಸ್ತಿಯು ಹುಮ್ಮಸ್ಸು, ಪ್ರೇರಣೆಯನ್ನು ನೀಡಲಿದೆ.ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರಶಸ್ತಿ ನೀಡುವ ಪರಂಪರೆಯನ್ನು ಪ್ರಾರಂಭಿಸಿದ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ನಿರಾಣಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ಈ ವರ್ಷದಿಂದ ಕೊಡಲು ನಿಶ್ಚಯಿಸಿರುವ “ಅತ್ಯುತ್ತಮ ಶಾಸಕ” ಮೊದಲ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ ನೀಡಲಾಯಿತು. ಲೋಕಸಭೆಯ ಸ್ಪೀಕರ್ ಶ್ರೀ ಓಂ ಬಿರ್ಲಾ ರವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಟ್ವೀಠ್ ಮಾಡಿದ್ದಾರೆ.
ನಮ್ಮೆಲ್ಲರ ನೇತಾರರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಸಂಸದೀಯ ಪಟು ಎಂದು ಗೌರವಿಸಿ, ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ “ಅತ್ಯುತ್ತಮ ಶಾಸಕ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಭಾಜನರಾದ ನಮ್ಮೆಲ್ಲರ ನಾಯಕರಾದ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆಗಳು ಎಂದು ಮೈಸೂರು ಶಾಸಕ ರಾಮದಾಸ್ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ‘ಅತ್ಯುತ್ತಮ ಶಾಸಕ ಪ್ರಶಸ್ತಿ’ ಪಡೆದ ಮಾಜಿ ಮುಖ್ಯಮಂತ್ರಿಗಳು, ಅತ್ಯುತ್ತಮ ಸಂಸದೀಯ ಪಟು, ರೈತ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶುಭಕೋರಿದ್ದಾರೆ.
ವಿಧಾನಸಭೆಯಲ್ಲಿ ಶುಕ್ರವಾರ ನಡೆದ ಜಂಟಿ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಜಂಟಿ ಅಧೀವೇಶನ ಆರಂಭವಾಗುತ್ತಿದ್ದಂತೆ ಮಾತನಾಡಿದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಮೊದಲಿಗೆ ಆಯ್ಕೆ ಮಾಡಬೇಕು ಎಂದು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ” ಎಂದು ಹೇಳಿದರು.

ಯಡಿಯೂರಪ್ಪ ಅವರು ಶಾಸಕರಾಗಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಸುದೀರ್ಘವಾಗಿ ಜನಪರವಾದಂತಹ ಕಾರ್ಯಗಳನ್ನು ಮಾಡಿದ್ದಾರೆ. ಅಲ್ಲದೆ, ಎಷ್ಟೇ ಕೆಲಸ ಕಾರ್ಯಗಳು ಇದ್ದರೂ ಶಾಸನ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಎಲ್ಲರ ಅಭಿಪ್ರಾಯಗಳನ್ನು ಆಲಿಸಿ ಸ್ಪಷ್ಟ ನಿಲುವುಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ ಅವರ ಸೇವೆಯನ್ನು ಗಮನಿಸಿ ಮೊದಲ ಪ್ರಶಸ್ತಿಗೆ ಅವರನ್ನು ಸಮಿತಿಯು ಆಯ್ಕೆ ಮಾಡಿದೆ ಎಂದರು.






